ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಮನೆಯಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ
ಅದೃಷ್ಟವಶಾತ್ ಮನೆಯಲ್ಲಿದ್ದವರೆಲ್ಲ ಸಣ್ಣಾಪುಟ್ಟ ಗಾಯಗಳೋಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ಮನೆಯಲ್ಲಿದ್ದ ಅಡುಗೆ ಸಿಲಿಂಡರ್ ಸ್ಟೋಟಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಮನೆಯಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮಗು ಸೇರಿ ಮೂವರಿಗೆ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಮೂವರು ಪಾರಾಗಿದ್ದಾರೆ. ಇನ್ನು ಸ್ಪೋಟದ ತೀವ್ರತೆಗೆ ಮನೆಯ ಸಿಮೆಂಟ್ ಶೀಟ್ ಛಾವಣಿ ಛಿದ್ರವಾಗಿದೆ.
ಅದೃಷ್ಟವಶಾತ್ ಮನೆಯಲ್ಲಿದ್ದವರೆಲ್ಲ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಇಂತಹ ಅನೇಕ ಅವಗಢಗಳು ಸಂಭವಿಸುತ್ತಲೇ ಇದೆ. ಇದರಿಂದ ಅಹಿತಕರ ಘಟನೆಗಳು ನಡೆಯುತ್ತಲೇ ಇದೆ. ಕೇವಲ ಸಿಲಿಂಡರ್ ಮಾತ್ರವಲ್ಲ, ಫ್ರೀಡ್ಜ್, ಹೆಡ್ ಫೋನ್, ಸ್ಮಾರ್ಟ್ ಫೋನ್ಗಳು ಸ್ಪೋಟಗೊಳ್ಳುತ್ತಿದ್ದು, ಇದರಿಂದಾಗಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿಂದೆ ಇದೇ ರೀತಿಯಾಗಿ ನಡೆದ ಘಟನೆಗಳ ವಿವರ ಈ ಕೆಳಕಂಡಂತಿದೆ.
ಬೆಂಗಳೂರು: ಸಿಲಿಂಡರ್ ಸ್ಫೋಟಿಸಿ ಭಾರಿ ಅಗ್ನಿ ಅವಘಡ ಫ್ಲ್ಯಾಟ್ನಲ್ಲಿ ಸಿಲಿಂಡರ್ ಸ್ಫೋಟಿಸಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿತ್ತು. ಬೆಂಗಳೂರಿನ ಅಪಾರ್ಟ್ಮೆಂಟ್ನ ಫ್ಲ್ಯಾಟ್ ಒಂದರಲ್ಲಿ ಅವಘಡ ಸಂಭವಿಸಿತ್ತು. ಸಿಲಿಂಡರ್ ಸ್ಫೋಟಕ್ಕೆ ಒಂದು ಫ್ಲಾಟ್ ಹೊತ್ತಿ ಉರಿದಿದೆ. ಬೆಂಗಳೂರು ನಗರದ ದೇವರಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ. ಇಲ್ಲಿನ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಸಿಲಿಂಡರ್ ಸ್ಪೋಟ ಆಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದರು. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದರು. ಬೇಗೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದರು. ಅಪಾರ್ಟ್ಮೆಂಟ್ನಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು.
ಫ್ಲ್ಯಾಟ್ನಲ್ಲಿ ಸಿಲಿಂಡರ್ ಸ್ಫೋಟಿಸಿ ವ್ಯಕ್ತಿ ಸಜೀವದಹನವಾಗಿದ್ದರು. ದೇವರಚಿಕ್ಕನಹಳ್ಳಿಯ ಆಶ್ರಿತ್ ಅಪಾರ್ಟ್ಮೆಂಟ್ನಲ್ಲಿ ಘಟನೆ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಬೆಂಕಿಯು ಮೂರು ಫ್ಲ್ಯಾಟ್ಗಳಿಗೆ ಹೊತ್ತಿಕೊಂಡಿತ್ತು.
ಇದನ್ನೂ ಓದಿ: ಬೆಂಗಳೂರು: ಸಿಲಿಂಡರ್ ಸ್ಫೋಟಿಸಿ ಭಾರಿ ಅಗ್ನಿ ಅವಘಡ; ಹೊತ್ತಿ ಉರಿದ ಫ್ಲ್ಯಾಟ್
ಮನೆಯೊಳಗಿದ್ದ ಗ್ಯಾಸ್ ಸಿಲಿಂಡರ್ ತಡರಾತ್ರಿ ವೇಳೆ ಸ್ಫೋಟ; ನಿದ್ರೆಯಲ್ಲಿದ್ದ ದಂಪತಿ ದುರ್ಮರಣ
Published On - 9:13 am, Sat, 2 October 21




