ಮನೆ ಬಿಟ್ಟಿದ್ದ ಯುವತಿಗೆ ಕೆಲಸ ಕೊಡುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ಮಾರಾಟ ಮಾಡಲು ದೆಹಲಿಗೆ ಹೋಗುತ್ತಿದ್ದ ಆರೋಪಿ ಅರೆಸ್ಟ್, ಯುವತಿ ರಕ್ಷಣೆ

ಕೆಲ ವಿಚಾರಕ್ಕೆ ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಯುವತಿ ಕೋಲಾರದಿಂದ ಬೆಂಗಳೂರಿಗೆ ಬಂದಿದ್ದಳು. ಕೆಲಸ ಹರಸಿ ಬಂದು ಮೆಜೆಸ್ಟಿಕ್ ನಲ್ಲಿ ಕೂತಿದ್ದಳು. ಈ ವೇಳೆ ಟ್ರಾವೆಲ್ ಏಜೆನ್ಸಿಯಲ್ಲಿ ಕೆಲಸ ಮಾಡ್ತಿದ್ದ ನಾಗೇಶ್ ಯುವತಿಯ ಬಳಿ ಬಂದು ಆಕೆಯನ್ನು ವಿಚಾರಿಸಿದ್ದಾನೆ.

ಮನೆ ಬಿಟ್ಟಿದ್ದ ಯುವತಿಗೆ ಕೆಲಸ ಕೊಡುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ಮಾರಾಟ ಮಾಡಲು ದೆಹಲಿಗೆ ಹೋಗುತ್ತಿದ್ದ ಆರೋಪಿ ಅರೆಸ್ಟ್, ಯುವತಿ ರಕ್ಷಣೆ
ಯುವತಿ ಮತ್ತು ಆರೋಪಿ ನಾಗೇಶ್
Follow us
TV9 Web
| Updated By: ಆಯೇಷಾ ಬಾನು

Updated on:Feb 11, 2022 | 8:17 AM

ದೇವನಹಳ್ಳಿ: ಮನೆ ಬಿಟ್ಟು ಬಂದಿದ್ದ ಯುವತಿಯನ್ನ ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿರುವ ಘಟನೆ ನಡೆದಿದ್ದು ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ನಾಗೇಶ್ ಬಂಧಿತ ಆರೋಪಿ. ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಕೋಲಾರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಗೆ ಸಹಾಯ ಮಾಡುವುದಾಗಿ ಹೇಳಿ ಆಕೆಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಅಲ್ಲಿ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಬಂಧಿಸಿದ್ದು ಯುವತಿಯನ್ನು ಏರ್ಪೋಟ್ ಭದ್ರತಾ ಪಡೆ ಸಿಐಎಸ್ಎಪ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಆರೋಪಿ ನಾಗೇಶನ್ನು ವಿಚಾರಣೆಗೆ ಒಳಪಡಿಸಿ ವಿಚಾರಿಸಿದಾಗ ಆಕೆಯನ್ನು ಮಾರಾಟ ಮಾಡಲು ದೆಹಲಿಗೆ ಕರೆದುಕೊಂಡು ಹೋಗುತ್ತಿದ್ದಿದ್ದಾಗಿ ಬಾಯಿ ಬಿಟ್ಟಿದ್ದಾನೆ.

ಕೆಲ ವಿಚಾರಕ್ಕೆ ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಯುವತಿ ಕೋಲಾರದಿಂದ ಬೆಂಗಳೂರಿಗೆ ಬಂದಿದ್ದಳು. ಕೆಲಸ ಹರಸಿ ಬಂದು ಮೆಜೆಸ್ಟಿಕ್ ನಲ್ಲಿ ಕೂತಿದ್ದಳು. ಈ ವೇಳೆ ಟ್ರಾವೆಲ್ ಏಜೆನ್ಸಿಯಲ್ಲಿ ಕೆಲಸ ಮಾಡ್ತಿದ್ದ ನಾಗೇಶ್ ಯುವತಿಯ ಬಳಿ ಬಂದು ಆಕೆಯನ್ನು ವಿಚಾರಿಸಿದ್ದಾನೆ. ಆಗ ಆಕೆ ಎಲ್ಲಾ ವಿಷಯವನ್ನು ಹಂಚಿಕೊಂಡಿದ್ದಾಳೆ. ಬಳಿಕ ಕೆಲಸ ಕೊಡಿಸುವುದಾಗಿ ನಂಬಿಸಿ ದೇವನಹಳ್ಳಿಗೆ ಕರೆದುಕೊಂಡು ಬಂದು ಯುವತಿ ಮೇಲೆ ಅತ್ಯಾಚಾರವೆಸಗಿ ನಂತರ ವೇಶ್ಯಾವಾಟಿಕೆ ಅಡ್ಡೆಗೆ ಮಾರಾಟ ಮಾಡಲು ದೆಹಲಿಗೆ ಕರೆದುಕೊಂಡು ಹೋಗುವಾಗ ಏರ್ಪೋಟ್ನಲ್ಲಿ ಸಿಕ್ಕಿಬಿದ್ದಿದ್ದಾನೆ. ಆರೋಪಿ ನಾಗೇಶ್ ಮೇಲೆ ಕೆಂಪೇಗೌಡ ಏರ್ಪೋಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಪೋಟ್ ಭದ್ರತಾ ಪಡೆ ಸಿಐಎಸ್ಎಪ್ ಸಿಬ್ಬಂದಿ ಯುವತಿಯ ರಕ್ಷಣೆ ಮಾಡಿದ್ದಾರೆ. ಆರೋಪಿ ನಾಗೇಶ್, ಯುವತಿಯನ್ನು ಏರ್ಪೋಟ್ ಮೂಲಕ ಮಾರಾಟ ಮಾಡಲು ದೆಹಲಿಗೆ ಕರೆದೋಗುತ್ತಿದ್ದ ಈ ವೇಳೆ ಅನುಮಾನಗೊಂಡು ಸಿಐಎಸ್ಎಪ್ ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಕ್ರಮವಾಗಿ ಮಾರಾಟ ಮಾಡಲು ಕರೆದೋಗುತ್ತಿರೂದು ಬೆಳಕಿಗೆ ಬಂದಿದೆ. 10 ಸಾವಿರ ರೂಪಾಯಿಗೆ ಮಾರಾಟ ಮಾಡಲು ಯುವತಿಯನ್ನು ದೆಹಲಿಗೆ ಕರೆದೋಗುತ್ತಿರುವುದಾಗಿ ಬಾಯಿ ಬಿಟ್ಟಿದ್ದಾನೆ. ಆರೋಪಿ ನಾಗೇಶ್ ಈ ಹಿಂದೆಯು ಇದೇ ರೀತಿ ಕೆಲ ಯುವತಿಯರನ್ನ ನಂಬಿಸಿ ಮಾರಾಟ ಮಾಡಿದ್ದ. ಸದ್ಯ ಏರ್ಪೋಟ್ ಪೊಲೀಸರಿಂದ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನು ಓದಿ: Kangana Ranaut: ‘ನಿಮ್ಮನ್ನು ಬಂಧಿಸಿಕೊಳ್ಳಬೇಡಿ, ಸ್ವತಂತ್ರರಾಗುವತ್ತ ಯೋಚಿಸಿ’; ಹಿಜಾಬ್ ಪ್ರಕರಣದ ಕುರಿತು ಕಂಗನಾ ಪ್ರತಿಕ್ರಿಯೆ

Published On - 8:16 am, Fri, 11 February 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ