AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕದ್ದು ಮುಚ್ಚಿ ಮಹಿಳೆಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಯ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಅನುಮತಿಯಿಲ್ಲದೆ ಫೋಟೋ ತೆಗೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕದ್ದು ಮುಚ್ಚಿ ಮಹಿಳೆಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಯ ಬಂಧನ
ಆಂಧ್ರ ಮೂಲದ ರವಡ ಲಕ್ಷ್ಮಿ ನಾರಾಯಣ್​ ಬಂಧಿತ ವ್ಯಕ್ತಿ
ಗಂಗಾಧರ​ ಬ. ಸಾಬೋಜಿ
|

Updated on:Apr 08, 2023 | 8:17 PM

Share

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರ (women) ಅನುಮತಿಯಿಲ್ಲದೆ ಫೋಟೋ (photo) ತೆಗೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶದ ಶ್ರೀಕಾಕುಳಂ ನಿವಾಸಿ ರವಡಾ ಲಕ್ಷ್ಮೀ ನಾರಾಯಣ ಎಂದು ಪೊಲೀಸರು ಗುರುತಿಸಿದ್ದಾರೆ. ಅಂದಹಾಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಡೆಹ್ರಾಡೂನ್​ಗೆ ತೆರಳಲು ಮಹಿಳೆಯೊಬ್ಬರು ಆಗಮಿಸಿದ್ದರು. ಟರ್ಮಿನಲ್ ಮುಂಬಾಗ ಕಾಫಿ ಕುಡಿಯಲು ಮಹಿಳೆ ನಿಂತಿದ್ದರು. ಈ‌ ವೇಳೆ ಖದ್ದು ಮುಚ್ಚಿ ಪಕ್ಕದ ಟೇಬಲ್​ನಲ್ಲಿ ಕುಳಿತುಕೊಂಡಿದ್ದ ಆಂಧ್ರ ಮೂಲದ ವ್ಯಕ್ತಿ ಮಹಿಳೆಯ ಫೋಟೋ ತೆಗೆದಿದ್ದಾನೆ. ಈ ವೇಳೆ ಅಲರ್ಟ್ ಆದ ಮಹಿಳೆ ಮೊಬೈಲ್​ನಲ್ಲಿದ್ದ ಫೋಟೋ ಸಮೇತ ಆರೋಪಿಯನ್ನ ಪೊಲೀಸರ ವಶಕ್ಕೆ ನೀಡಿದ್ದಾಳೆ. ಜೊತೆಗೆ ಮಹಿಳೆಯ ಅನುಮತಿಯಿಲ್ಲದೆ ಅಸಭ್ಯ ರೀತಿಯಲ್ಲಿ ಫೋಟೋ ಕ್ಲಿಕ್ಕಿಸಿದ ಕಾರಣಕ್ಕೆ ವ್ಯಕ್ತಿಯನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.

ಸದ್ಯ ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 509 (ಪದ, ಹಾವಭಾವ ಅಥವಾ ಮಹಿಳೆಯ ಗೌರವವನ್ನು ಅವಮಾನಿಸುವ ಉದ್ದೇಶದಿಂದ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66 ಇ (ಗೌಪ್ಯತೆಯ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಗ್ಲಾದೇಶದ ಪ್ರಜೆಗಳ ಬಂಧನ

ನಕಲಿ ಭಾರತೀಯ ಪಾಸ್​ಪೋರ್ಟ್ ​​ಮಾಡಿಸಿಕೊಂಡು ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿರುವುದಾಗಿ ಶನಿವಾರ ತಿಳಿಸಿದ್ದಾರೆ. ಲಿಯಾಕತ್ ಅಲಿ ಮತ್ತು ರಿಜಾವುಲ್ ಶೇಖ್​ ಬಂಧಿತ ಆರೋಪಿಗಳು.

ಇದನ್ನೂ ಓದಿ: ಟಿಂಡರ್ ಮ್ಯಾಚ್‌ನಲ್ಲಿ ಪ್ರೀತಿಯ ಬಲೆಗೆ ಬಿದ್ದ ಹಣಕಾಸು ಸಲಹೆಗಾರ; ಲವ್ ಸ್ಕ್ಯಾಮ್​ನಲ್ಲಿ ರೂ.14.8 ಕೋಟಿ ಕಳೆದುಕೊಂಡ!

ಇಬ್ಬರು ಆರೋಪಿಗಳು ಏಪ್ರಿಲ್ 7 ರ ಶುಕ್ರವಾರ ಸಿಂಗಾಪುರದಿಂದ ಇಂಡಿಗೊ ವಿಮಾನ 6 ಇ 1006 ನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ನ್ಯೂಸ್9ಗೆ ತಿಳಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಇಬ್ಬರ ಪಾಸ್​ಪೋರ್ಟ್​ಗಳನ್ನು ಪರಿಶೀಲಿಸಿದಾಗ ಬೇರೆಯವರ ಹೆಸರಿನಲ್ಲಿ ಮೋಸದಿಂದ ಭಾರತೀಯ ಪಾಸ್​ಪೋರ್ಟ್ ಹೊಂದಿರುವುದು ಕಂಡುಬಂದಿದೆ. ಬಳಿಕ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿದೇಶಿ ಕಾಯ್ದೆಯ ಪ್ರಕಾರ ಮಾನ್ಯ ದಾಖಲೆಗಳಿಲ್ಲದೆ ಭಾರತದ ಯಾವುದೇ ಪ್ರದೇಶಕ್ಕೆ ಪ್ರವೇಶಿಸುವುದು ಅಥವಾ ಉಳಿಯುವುದನ್ನು ನಿರ್ಬಂಧಿಸಲಾಗಿದೆ. ಈ ಕುರಿತಾಗಿ ಮುಂದಿನ ದಿನಗಳಲ್ಲಿ ತನಿಖೆ ನಡೆಯಲಿದೆ. ನಾವು ಈಗಷ್ಟೇ ಪ್ರಕರಣ ದಾಖಲಿಸಿದ್ದೇವೆ ಮತ್ತು ಅವರನ್ನು ಬಂಧಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನ್ಯೂಸ್ 9ಗೆ ತಿಳಿಸಿದ್ದಾರೆ.

ಪತಿ ಚಾಕೊಲೇಟ್ ತಂದು ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ

ಬೆಂಗಳೂರು: ಚಿಕ್ಕ ಮಕ್ಕಳು ಚಾಕೋಲೆಟ್, ಚಿಪ್ಸ್ ಸೇರಿದಂತೆ ತಿಂಡಿ ತಿನಿಸುಗಳಿಗೆ ಹಠ ಮಾಡುವುದನ್ನ ನಾವು ನೋಡಿದ್ದೇವೆ. ಇನ್ನು ಕೇಳಿದ್ದನ್ನು ಕೊಡಿಸಲಿಲ್ಲ ಎಂದು ಹಠ ಹಿಡಿಯುವುದು, ಅಳುವುದು ಸಾಮಾನ್ಯ. ಆದ್ರೆ, ಇಲ್ಲೋರ್ವ ಎರಡು ಮಕ್ಕಳ ತಾಯಿಯೊಬ್ಬರು, ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಬೇಸತ್ತು ಪತ್ನಿ ಆತ್ಮಹತ್ಯೆಶ್ರ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಹೌದು.. ಈ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಂದಿನಿ‌(30) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಇದನ್ನೂ ಓದಿ: ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡ ಯುವಕನಿಗೆ ಚಾಕು ಇರಿದ ಅಪ್ರಾಪ್ತ ಬಾಲಕಿ

6 ವರ್ಷದ ಹಿಂದೆ ಮದುವೆಯಾಗಿದ್ದ ಮೃತ ನಂದಿನಿ‌ಗೆ ಇಬ್ಬರು ಮಕ್ಕಳಿದ್ದಾರೆ. ಇನ್ನು ನಂದಿನಿ ಪತಿ ಸಲೂಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಅದರಂತೆ ನಿನ್ನೆ(ಏಪ್ರಿಲ್ 06) ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಹೇಳಿದ್ದಳಂತೆ. ಆದ್ರೆ, ಮಧ್ಯಾಹ್ನವಾದರೂ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲ. ಅಲ್ಲದೇ ಫೋನ್ ಮಾಡಿದ್ದರೂ ಪತಿ ಸ್ವೀಕರಿಸಿಲ್ವಂತೆ. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:17 pm, Sat, 8 April 23