
ನೆಲಮಂಗಲ: ಕ್ರಿಕೆಟ್ ಆಡುವಾಗ ಮೈದಾನದಲ್ಲಿ ಕುಸಿದುಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ದೊಡ್ಡಿರಿ ಗ್ರಾಮದಲ್ಲಿ ನಡೆದಿದೆ. ಕ್ರಿಕೆಟ್ ಆಡುವಾಗ ಏಕಾಏಕಿ ಕುಸಿದು ಬಿದ್ದು ಪ್ರಶಾಂತ್(32) ಸಾವಿಗೀಡಾಗಿದ್ದಾರೆ.
ಮೂಲತಃ ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಾಂಗಳ ನಿವಾಸಿಯಾದ ಪ್ರಶಾಂತ್, ಡಾಬಸ್‌ಪೇಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಸ್ನೇಹಿತರ ಜೊತೆ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 1:32 pm, Sat, 29 February 20