ಬೆಂಗಳೂರು: ಹೊಸ ವರ್ಷದ ದಿನದಂದು ಹಾಡು, ಕುಣಿತ, ಕುಡಿತ, ಸಿಹಿ ಹಂಚಿಕೆ, ಹಾರಾಟ, ಚೀರಾಟ ಸೇರಿ ಎಲ್ಲ ಸಂಭ್ರಮಗಳಿಗೆ ಮಿತಿಯೇ ಇರುವುದಿಲ್ಲ. ಇದೇ ಸಂಭಮಾಚರಣೆ ವೇಳೆ ಬೆಂಗಳೂರಿನಲ್ಲಿ ಯುವಕನೋರ್ವ ಕುಡಿದ ಅಮಲಿನಲ್ಲಿ 3ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದ. ಇನ್ನೊಂದೆಡೆ ನೆಲಮಂಗಲ ತಾಲೂಕು ಶಿವಗಂಗೆ ಬೆಟ್ಟದಲ್ಲಿ ಕುಡಿದ ಮತ್ತಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷದ ಪಾರ್ಟಿ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು
ಬೆಂಗಳೂರಿನ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಕುಡಿದ ಮತ್ತಿನಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬೀರಮಾರನಹಳ್ಳಿ ನಿವಾಸಿ ರಾಮಕೃಷ್ಣ(29) ಮೃತ ದುರ್ದೈವಿ. ಈ ಬಗ್ಗೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಡಿದ ಮತ್ತಿನಲ್ಲಿ ಮೂರನೇ ಮಹಡಿಯಿಂದ ಒಡಿಶಾ ಮೂಲದ ಯುವಕ ಬಿದ್ದು ಮೃತಪಟ್ಟಿದ್ದ ಘಟನೆ ಬೆಂಗಳೂರಿನ ಕೊಟ್ಟಿಗೆಪಾಳದ್ಯದಲ್ಲಿ ನಡೆದಿದೆ. ಒಡಿಶಾ ಮೂಲದ ದಾಪಿ ಮೃತ ಯುವಕ. ನಿನ್ನೆ ರಾತ್ರಿ ನ್ಯೂ ಇಯರ್ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಮದ್ಯಪಾನ ಸೇವಿಸಿದ್ದ. ಈ ವೇಳೆ ಅಮಲಿನಲ್ಲಿಯೇ ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ಜಂಪ್ ಮಾಡಲು ಯತ್ನಿಸಿದ್ದಾನೆ. ಆದ್ರೆಮ ಜಂಪ್ ಮಾಡುವಾಹಗ ಆಯತಪ್ಪಿ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ