ಹೊಸಕೋಟೆ: ಪ್ರೀತಿ ನಿರಾಕರಿಸಿದ ಅಂಕೋಲಾ ಯುವತಿಯ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾದ ತಮಿಳುನಾಡಿನ ಭಗ್ನಪ್ರೇಮಿ
ಪ್ರೀತಿ ನಿರಾಕರಿಸಿದ ಉಷಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಲಿಂಗಧೀರ ಮಲ್ಲಸಂದ್ರದಲ್ಲಿ ಯುವತಿ ಕೊಲೆ ಮಾಡಿದ ಗೋಪಾಲಕೃಷ್ಣ, ಗೆದ್ದಲಾಪುರ ಬಳಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅನುಗೊಂಡನಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಪ್ರೀತಿ ನಿರಾಕರಿಸಿದ ಯುವತಿ ಹತ್ಯೆಗೈದ ಯುವಕ, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಲಿಂಗಧೀರ ಮಲ್ಲಸಂದ್ರದಲ್ಲಿ ನಡೆದಿದೆ. ಅಂಕೋಲಾ ಮೂಲದ ಉಷಾ(25) ಎಂಬುವ ಯುವತಿಗೆ ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ವಿಷ ಸೇವಿಸಿ ತಮಿಳುನಾಡಿನ ಗೋಪಾಲಕೃಷ್ಣ(30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉಷಾ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಬೇರೊಂದು ಖಾಸಗಿ ಕಂಪನಿಯಲ್ಲಿ ಗೋಪಾಲಕೃಷ್ಣ ಕೂಡ ಕೆಲಸ ಮಾಡುತ್ತಿದ್ದ. ಹಲವು ದಿನದಿಂದ ಉಷಾಳನ್ನು ಗೋಪಾಲಕೃಷ್ಣ ಪ್ರೀತಿಸುತ್ತಿದ್ದ. ಪ್ರೀತಿ ನಿರಾಕರಿಸಿದ ಉಷಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಲಿಂಗಧೀರ ಮಲ್ಲಸಂದ್ರದಲ್ಲಿ ಯುವತಿ ಕೊಲೆ ಮಾಡಿದ ಗೋಪಾಲಕೃಷ್ಣ, ಗೆದ್ದಲಾಪುರ ಬಳಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅನುಗೊಂಡನಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಕೋಲಾರ: ಸ್ನೇಹಿತರ ವಾಟ್ಸಾಪ್ ಗ್ರೂಪ್ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಕೆರೆಗೆ ಹಾರಿ ವಿದ್ಯಾರ್ಥಿ ಕಿಶೋರ್ ಕುಮಾರ್(17) ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ. ಶ್ರೀನಿವಾಸಪುರದ ಗಂಗೋತ್ರಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಕಿಶೋರ್ ಕುಮಾರ್, ಸ್ನೇಹಿತರ ವಾಟ್ಸಾಪ್ ಗ್ರೂಪ್ನಲ್ಲಿ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ನೆನ್ನೆ ಸಂಜೆ 4 ಗಂಟೆ ವೇಳೆಯಲ್ಲಿ ಸ್ನೇಹಿತರ ವಾಟ್ಸಾಪ್ ಗ್ರೂಪ್ನಲ್ಲಿ ಮಿಸ್ ಯು ಫ್ರೇಂಡ್ಸ್ ಎಂದು ಮೇಸೆಜ್ ಮಾಡಿದ್ದಾನೆ. ಆತ್ಮಹತ್ಯೆಗೆ ಮುನ್ನ ಕೆರೆ ಪೋಟೋ ಹಾಕಿದ್ದ ವಿದ್ಯಾರ್ಥಿ. ಇಂದು ಬೆಳಗ್ಗೆ ಕಿಶೋರ್ ಕುಮಾರ್ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಕಾಲೇಜು ಪ್ರಾಂಶುಪಾಲರಾದ ಸುಬ್ರಮಣಿ ಬೈದದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೋಷಕರು ಆರೋಪ ಮಾಡಿದ್ದಾರೆ.
ಇದನ್ನೂ ಓದಿ: Crime News: ಎಕ್ಸಾಂ ಬರೆದು ಬಂದ ಯುವತಿಯ ಕುತ್ತಿಗೆ ಸೀಳಿದ ಭಗ್ನ ಪ್ರೇಮಿ; ಕಾಲೇಜಿನಲ್ಲೇ ಕಗ್ಗೊಲೆ
ವಿಜಯಪುರ: ಮುಸ್ಲಿಂ ಯುವತಿಯನ್ನು ಪ್ರೀತಿಸುತ್ತಿದ್ದ ವ್ಯಕ್ತಿ ಕೊಲೆ; ಇಬ್ಬರ ಬಂಧನ
Published On - 12:23 pm, Wed, 27 October 21