AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಪ್ರೇಯಸಿ ಸೇರಿ ಮೂವರ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ಭೂಪ

ಬೆಂಗಳೂರಿನ ತರಬನಹಳ್ಳಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕ್ಷುಲ್ಲಕ ಜಗಳ ವಿಕೋಪಕ್ಕೆ ಹೋಗಿ, ವ್ಯಕ್ತಿಯೋರ್ವ ತನ್ನ ಪ್ರೇಯಸಿ ಹಾಗೂ ಆಕೆಯ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಪ್ರೇಯಸಿ ಸೇರಿ ಮೂವರ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿದ ಭೂಪ
ಸಾಂದರ್ಭಿಕ ಚಿತ್ರImage Credit source: Google
ಪ್ರಸನ್ನ ಹೆಗಡೆ
|

Updated on: Mar 08, 2026 | 6:47 AM

Share

ನೆಲಮಂಗಲ, ಮಾರ್ಚ್​​ 08: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋಗಿ ಪ್ರೇಯಸಿ ಸೇರಿದಂತೆ ಮೂವರ ಮೇಲೆ ಪೆಟ್ರೋಲ್​​ ಸುರಿದು ವ್ಯಕ್ತಿಯೋರ್ವ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತರಬನಹಳ್ಳಿಯಲ್ಲಿ ನಡೆದಿದೆ. ಆರೋಪಿಯ ಪ್ರೇಯಸಿ ಸುಮಲತಾ, ಆಕೆಯ ತಂದೆ ಶ್ರೀರಾಮ(48) ಹಾಗೂ ತಾಯಿ ಮಂಜಮ್ಮ(42) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಆರೋಪಿ ಪಾಂಡುರಂಗ(29)ನನ್ನು ಬಂಧಿಸಲಾಗಿದ್ದು, ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

4 ವರ್ಷದ ಹಿಂದೆ ಗಂಡನಿಂದ ದೂರವಾಗಿದ್ದ ಸುಮಲತಾ, ಯಶವಂತಪುರದ ಮೆಟ್ರೋದಲ್ಲಿ ಕೆಲಸ ಮಾಡುತ್ತಿದ್ದಳು. ಈ ನಡುವೆ ಇನ್ಸ್ಟಾಗ್ರಾಂನಲ್ಲಿ ಈಕೆಗೆ ಪಾಂಡುರಂಗನ ಪರಿಚಯವಾಗಿತ್ತು. ಬಳಿಕ ಆತನ ಜೊತೆಗೆ ಮನೆ ಬಿಟ್ಟು ಹೋಗಿದ್ದ ಸುಮಲತಾ, 4 ವರ್ಷದಿಂದ ಲೀವಿಂಗ್ ಇನ್ ರಿಲೇಷನ್​ಶಿಪ್​ನಲ್ಲಿದ್ದಳು. ಮಹಾಲಕ್ಷ್ಮೀ ಲೇಔಟ್​ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರೂ ವಾಸವಿದ್ದರು. ಆದರೆ, ಪಾಂಡುವಿನ ಜೊತೆಗೂ ವಿರಸ ಉಂಟಾಗಿ ಕಳೆದ ಎರಡು ತಿಂಗಳ‌ ಹಿಂದೆ ಆತನಿಂದಲೂ ಸುಮಲತಾ ದೂರವಾಗಿದ್ದಳು. ಈಕೆಯ ಜೊತೆ ಇದ್ದುಕೊಂಡೇ ಪಾಂಡುರಂಗ ಮತ್ತೊಂದು ಯುವತಿಯ ಸಹವಾಸ ಮಾಡಿದ್ದ ಕಾರಣ, ಗಲಾಟೆ ಮಾಡಿಕೊಂಡು ಈಕೆ ತಾಯಿ ಮನೆಯನ್ನು  ಸೇರಿದ್ದಳು ಎನ್ನಲಾಗಿದೆ.

ಇದನ್ನೂ ಓದಿ: 3ನೇ ಮದ್ವೆ ಆಸೆಗೆ 2ನೇ ಗಂಡನಿಗೆ ಪರಲೋಕದ ದಾರಿ; ತನಿಖೆಯಲ್ಲಿ ಬಯಲಾಯ್ತು ಖತರ್ನಾಕ್ ಸ್ಟೋರಿ

ಹೀಗಿರುವಾಗ ಮೊನ್ನೆ ತರಬನಹಳ್ಳಿಯ ಸುಮಲತಾ ಮನೆ ಬಳಿ ಬಂದಿದ್ದ ಆರೋಪಿ ಪಾಡುರಂಗ ಸುಮಲತಾಳಿಗೆ ದ್ವಿಚಕ್ರ ವಾಹನ ಕೊಡು ಎಂದಿದ್ದ. ಈ ವೇಳೆ ಅದು ತನ್ನ ಅಕ್ಕನದ್ದು, ನಾನು ಕೊಡಲ್ಲ ಎಂದು ಸುಮಲತಾ ಹೇಳಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಆರೋಪಿ ಗಲಾಟೆ ಮಾಡಿದ್ದಾನೆ. ಸುಮಲತಾ, ಆಕೆಯ ತಂದೆ ಮತ್ತು ತಾಯಿ ಮೂವರೂ ಈ ವೇಳೆ ಬೈದಿದ್ದಾರೆ. ಹೀಗಾಗಿ ಇನ್ನಷ್ಟು ಕೋಪಗೊಂಡಿದ್ದ ಪಾಡುರಂಗ ಸ್ಥಳದಿಂದ ತೆರಳಿದ್ದು, ಸುಮಾರು ಅರ್ಧಗಂಟೆ ಬಳಿಕ ವಾಪಾಸ್​​ ಆಗಿದ್ದಾನೆ. ಮತ್ತೆ ಗಲಾಟೆ ಶುರುಮಾಡಿ ಸುಮಲತಾ ಮತ್ತು ಆಕೆಯ ಪೋಷಕರ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿ, ಆಟೋದಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಬೆಂಕಿಯಲ್ಲಿ ಸುಟ್ಟ ಮೂವರ ಸ್ಥಿತಿ ಗಂಭೀರವಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಸೋಲದೇವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವರದಿ: ಮಂಜುನಾಥ್​​, ಟಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ