AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ರೈತರ ಬೆಳೆಗಳು ಮಣ್ಣುಪಾಲು; ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವೆಂದು ಅನ್ನದಾತರು ಕಂಗಾಲು

ನಿನ್ನೆ(ಮೇ.22) ಸುರಿದ ಭಾರಿ ಮಳೆಗೆ ಬೆಂಗಳೂರಿನ ಹಲವು ಕಡೆ ಸಾಕಷ್ಟು ಅವಾಂತರಗಳು ಸೃಷ್ಟಿ ಮಾಡಿ, ಒಂದು ಜೀವವನ್ನೆ ಬಲಿ ಪಡೆದಿದೆ. ಮತ್ತೊಂದು ಕಡೆ ಬೆಂಗಳೂರು ಹೊರವಲಯದಲ್ಲಿ ಮಳೆಯಿಂದ ರೈತರು ಬೆಳೆದು ಬೆಳೆಗಳು ನಾಶವಾಗಿ, ರೈತರ ಫಸಲು ಮಣ್ಣು ಪಾಲಾಗಿದೆ. ಒಳ್ಳೆಯ ಬೆಳೆ ಬೆಳೆದು ಇನ್ನೇನು ಮಾರಾಟ ಮಾಡಬೇಕಿದ್ದ ಬೆಳೆಗಳು ಬಿರುಗಾಳಿ, ಆಲಿಕಲ್ಲು ಮಳೆಗೆ ಸಂಪೂರ್ಣ ನಾಶವಾಗಿದೆ. ಇದರಿಂದ ರೈತರು ಕಂಗಲಾಗಿದ್ದಾರೆ.

ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ರೈತರ ಬೆಳೆಗಳು ಮಣ್ಣುಪಾಲು;  ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವೆಂದು  ಅನ್ನದಾತರು ಕಂಗಾಲು
ದೊಡ್ಡಬಳ್ಳಾಪುರ
ಕಿರಣ್ ಹನುಮಂತ್​ ಮಾದಾರ್
|

Updated on:May 23, 2023 | 9:02 AM

Share

ಬೆಂಗಳೂರು ಗ್ರಾಮಾಂತರ: ಬಿರುಗಾಳಿಗೆ ನೆಲಕ್ಕಚ್ಚಿರುವ ಸಂಪಾಗಿ ಬೆಳೆದಿದ್ದ ಹೀರೆಗೀಡಗಳು. ಆಲಿಕಲ್ಲು ಮಳೆಗೆ ತೂತು ಬಿದ್ದಿರುವ ಹೂ ಕೋಸು ಹಾಗೂ ಹುರುಳಿಗಿಡಗಳು. ಭಾರಿ ಮಳೆಗೆ ಜೋಳ ಸೇರಿದಂತೆ ಹಲವು ಹೂ ಬೆಳೆಗಳು ನಾಶ. ಹೌದು ಮಳೆಯ ಅವಾಂತರಗಳಿಂದ ಬೆಳೆ ಹಾನಿಯಾಗಿರೋದು ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ. ಅಂದಹಾಗೆ ಇಲ್ಲಿನ ಕಸವನಹಳ್ಳಿ, ಬಿಸವನಹಳ್ಳಿ ಗ್ರಾಮದಲ್ಲಿ ಹಲವು ರೈತರು ಮಿಶ್ರ ಬೆಳೆಗಳನ್ನ ಬೆಳೆಯುತ್ತಾರೆ. ಹತ್ತಾರು ಎಕರೆ ಪ್ರದೇಶದಲ್ಲಿ ಹೀರೆಗಿಡ, ಹುರುಳಿಗಿಡ, ಜೋಳ, ಹೂ ಕೋಸು, ಹೂ ಗಿಡಗಳನ್ನ ರೈತರು ಬೆಳೆದಿದ್ದಾರೆ. ಆದ್ರೆ, ಕಳೆದ ರಾತ್ರಿ ಬಿರುಗಾಳಿ ಸಹಿತ ಆಲಿ ಕಲ್ಲು ಮಳೆಗೆ, ಜೋಳ, ಕೋಸು, ಹುರುಳಿಕಾಯಿ, ಈರೆಕಾಯಿ, ಚೆಂಡು ಹೂ ಸೇರಿ ಹತ್ತಾರು ಎಕರೆ ಬೆಳೆ ಮಣ್ಣು ಪಾಲಾಗಿದೆ. ಕೈಗೆ ಬಂದ ಬೆಳೆ ಇನ್ನೇನು ಕೆಲವೇ ದಿನಗಳಲ್ಲಿ ಫಲ ನೀಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅಂದಹಾಗೆ ನಿನ್ನೆ(ಮೇ.21) ರಾತ್ರಿ ಒಂದು ಗಂಟೆಗಳ ಕಾಲ ಸುರಿದ ಆಲಿಕಲ್ಲು ಮಳೆಯಿಂದಾಗಿ ಇನ್ನೆನು ಮಾರಾಟ ಮಾಡಬೇಕಿದ್ದ ಬೆಳೆಗಳು ಆಲಿಕಲ್ಲಿನಿಂದ ತೂತು ಬಿದ್ದು, ಬೆಳೆ ಸಂಪೂರ್ಣ ನಾಶವಾಗಿದೆ. ಜೊತೆಗೆ ಬಿರುಗಾಳಿಗೆ ಮಹಾಘನಿ ಮರಗಳು ಕೂಡ ನೆಲಕಚ್ಚಿದ್ದು, ರೈತರಿಗೆ ದಿಕ್ಕು ತೋಚದಂತಾಗಿದೆ. ಇಷ್ಟೆಲ್ಲಾ ಬೆಳೆ ಹಾನಿಯಾಗಿದ್ದರೂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವ ಕೆಲಸ ಮಾಡಿಲ್ಲ. ಜೊತೆಗೆ ಬೆಳೆ ನಾಶವಾಗಿರುವ ರೈತರ ತೋಟಗಳಿಗೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದು ರೈತರ ನೆರವಿಗೆ ತೋಟಗಾರಿಕೆ ಅಧಿಕಾರಿಗಳು ಕೂಡ ಮುಂದಾಗದೇ ಇರುವುದು ಇಲ್ಲಿನ ರೈತರನ್ನ ಕೆರಳಿಸಿದೆ. ಕೈಗೆ ಬರಬೇಕಿದ್ದ ತುತ್ತು, ಬಾಯಿಗೆ ಬರಲಿಲ್ಲ ಎಂದು ರೈತರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಜೊತೆಗೆ ಬೆಳೆಹಾನಿಯಾಗಿರೋ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಭಾರೀ ಮಳೆಗೆ ಬೆಂಗಳೂರಿನಲ್ಲಿ ಅವಘಡ; ನೂತನ ಮುಖ್ಯಮಂತ್ರಿಗೆ ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಸಲಹೆ

ಒಟ್ಟಾರೆ ಕಳೆದ ರಾತ್ರಿ ಬಿದ್ದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ದೊಡ್ಡಬಳ್ಳಾಪುರದ ಹಲವು ಹಳ್ಳಿಗಳ ರೈತರು ಬೆಳೆದ ಬೆಳೆಗಳು ನಾಶವಾಗಿ ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಬೆಳೆ ಕಳೆದುಕೊಂಡಿರೋ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಕೆಲಸ ಮಾಡಬೇಕಿದೆ.

ವರದಿ: ನವೀನ್ ಟಿವಿನೈನ್ ದೇವನಹಳ್ಳಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:01 am, Tue, 23 May 23

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್