AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಸಿಗರೇಟ್ ಸೇದಲು ಮ್ಯಾಚ್ ಬಾಕ್ಸ್ ಕೊಡದ್ದಕ್ಕೆ ಜೀವವೇ ಹೋಯ್ತು!

ಸಿಗರೇಟ್‌ಗೆ ಬೆಂಕಿಪೊಟ್ಟಣ ನೀಡಲು ನಿರಾಕರಿಸಿದ್ದಕ್ಕೆ ದೊಡ್ಡಬಳ್ಳಾಪುರದಲ್ಲಿ ಸುಶಾಂತ್ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿನಾಯಕ ನಗರದಲ್ಲಿ ಹೊಸ ವರ್ಷದ ಪಾರ್ಟಿ ವೇಳೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳು ಸುಶಾಂತ್‌ನನ್ನು ಎರಡನೇ ಮಹಡಿಯಿಂದ ತಳ್ಳಿ ಹಲ್ಲೆ ಮಾಡಿದ್ದರು. ಸಿಸಿಟಿವಿ ಆಧಾರದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.

ದೇವನಹಳ್ಳಿ: ಸಿಗರೇಟ್ ಸೇದಲು ಮ್ಯಾಚ್ ಬಾಕ್ಸ್ ಕೊಡದ್ದಕ್ಕೆ ಜೀವವೇ ಹೋಯ್ತು!
ಮೃತ ಸುಶಾಂತ್ ಮತ್ತು ಆರೋಪಿಗಳು
ನವೀನ್ ಕುಮಾರ್ ಟಿ
| Edited By: |

Updated on:Jan 27, 2026 | 3:35 PM

Share

ದೇವನಹಳ್ಳಿ, ಜನವರಿ 27: ಇಬ್ಬರ ನಡುವಿನ ಹಳೆಯ ದ್ವೇಷ, ಅಸೂಯೆಗೆಲ್ಲಾ ರಕ್ತಪಾತವಾಗುವವುದನ್ನು ನಾವು ಕಾಣುತ್ತೇವೆ. ಆದರೆ ಸಿಗರೇಟ್ ಹಚ್ಚಲು ಬೆಂಕಿ ಪೊಟ್ಟಣ ಕೊಟ್ಟಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಯುವಕನನ್ನೇ ಕೊಲೆ ಮಾಡಿದ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಗ್ರಾಮದ ವಿನಾಯಕ ನಗರದಲ್ಲಿ ಈ ದುರಂತ ನಡೆದಿದ್ದು, ಹಲವು ದಿನಗಳಿಂದ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಓರ್ವ ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್

ಹೊಸವರ್ಷದ ಸಂದರ್ಭದಲ್ಲಿ ಪಾರ್ಟಿ ಮಾಡುತ್ತಿದ್ದಾಗ ಆರೋಪಿಗಳು ಸುಶಾಂತ್ ಎಂಬ ಯುವಕನ ಬಳಿ ಸಿಗರೇಟ್ ಹಚ್ಚಲು ಬೆಂಕಿಪೊಟ್ಟಣ ಕೇಳಿದ್ದರು. ಆದರೆ ಸುಶಾಂತ್ ನಿರಾಕರಿಸಿದ್ದ. ಈ ವೇಳೆ ಮ್ಯಾಚ್ ಬಾಕ್ಸ್ ತಂದುಕೊಡು ಎಂದು ಒತ್ತಾಯಿಸಿದರೂ ಸುಶಾಂತ್ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ಉಜ್ವಲ್ ಪ್ರಸಾದ್, ಪ್ರಿನ್ಸ್ ಮತ್ತು ಸೂರಜ್ ರಾಮ್ , ಓರ್ವ ಅಪ್ರಾಪ್ತ ಸೇರಿ ನಾಲ್ವರು ಸುಶಾಂತ್​ನನ್ನು ಅಟ್ಟಾಡಿಸಿಕೊಂಡು ಹಲ್ಲೆ ಮಾಡಿದ್ದರು.

ಸುಶಾಂತ್​ನನ್ನು ಹಿಡಿದು 2ನೇ ಮಹಡಿಯಿಂದ ಕೆಳಕೆ ತಳ್ಳಿದ್ದರು. ಈ ಘಟನೆಯು ಸ್ಥಳೀರನ್ನು ಬೆಚ್ಚಿ ಬೀಳಿಸಿತ್ತು. ಕೃತ್ಯ ಎಸಗಿದ ನಾಲ್ವರಲ್ಲಿ ಓರ್ವ ಅಪ್ರಾಪ್ತನಾಗಿದ್ದು, ನಂತರ ಉಳಿದ ಮೂವರೊಟ್ಟಿಗೆ ಈತನೂ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ತನಿಖೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯ ಮತ್ತು ಸ್ಥಳೀಯರಿಂದ ಸಿಕ್ಕ ಮಾಹಿತಿ ಆಧರಿಸಿ ಆರೋಪಿಗಳನ್ನು ಹುಡುಕಿ ಬಂಧನಕ್ಕೊಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:30 pm, Tue, 27 January 26

ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್
ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್
ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಜಾರಿಗೆ ಬಂದಿದೆ ಹೊಸ ನಿಯಮ
ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಜಾರಿಗೆ ಬಂದಿದೆ ಹೊಸ ನಿಯಮ
ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಸರ್ಪಗಾವಲು?
ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಸರ್ಪಗಾವಲು?
ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು?
ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು?
ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್!
ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್!
ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ
ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ
ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!
ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!
‘ನೀವು ದರ್ಶನ್ ಸಿನಿಮಾದಲ್ಲಿ ಕಪ್ಪೇ ಇದ್ರಲ್ಲ ಸರ್’; ಸತೀಶ್ ಶಾಕ್
‘ನೀವು ದರ್ಶನ್ ಸಿನಿಮಾದಲ್ಲಿ ಕಪ್ಪೇ ಇದ್ರಲ್ಲ ಸರ್’; ಸತೀಶ್ ಶಾಕ್
ಹಾಡಹಗಲೇ ನಡುರಸ್ತೆಯಲ್ಲೇ ಸಿನಿಮೀಯ ರೀತಿಯಲ್ಲಿ ಯುವಕನ ಕಿಡ್ನ್ಯಾಪ್ ಯತ್ನ
ಹಾಡಹಗಲೇ ನಡುರಸ್ತೆಯಲ್ಲೇ ಸಿನಿಮೀಯ ರೀತಿಯಲ್ಲಿ ಯುವಕನ ಕಿಡ್ನ್ಯಾಪ್ ಯತ್ನ
ನಿಂಗೆ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಲು ಸಾಧ್ಯವಾಗುತ್ತಿಲ್ಲ, ಅಲ್ವಾ.!
ನಿಂಗೆ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಲು ಸಾಧ್ಯವಾಗುತ್ತಿಲ್ಲ, ಅಲ್ವಾ.!