AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಪ್ಲ್ಯಾನ್​: ಬಾಲಕಿ ಕರೆದೊಯ್ಯುತ್ತಿದ್ದ ವೇಳೆ ನಡೆದಿದ್ದು ದುರಂತ

ಬೈಕ್​ ಅಪಘಾತದಲ್ಲಿ ಬಾಲಕಿ ದುರ್ಮರಣ ಹೊಂದಿರುವ ಘಟನೆ ಹೊಸಕೋಟೆ ಪಟ್ಟಣ ಬಳಿ ನಡೆದಿದೆ. ಒಂದೇ ಬೈಕ್​ನಲ್ಲಿ ಮೂವರು ಪ್ರಯಾಣಿಸುವಾಗ ಅಪಘಾತ ನಡೆದಿದ್ದು, ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಬಲವಂತವಾಗಿ ಕರೆದೊಯ್ಯಲಾಗುತ್ತಿತ್ತು ಎಂಬ ವಿಷಯ ತನಿಖೆ ವೇಳೆ ಗೊತ್ತಾಗಿದೆ. ಘಟನೆ ಸಂಬಂಧ 4 ಜನ ಆರೋಪಿಗಳನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಪ್ಲ್ಯಾನ್​: ಬಾಲಕಿ ಕರೆದೊಯ್ಯುತ್ತಿದ್ದ ವೇಳೆ ನಡೆದಿದ್ದು ದುರಂತ
ಸಾಂದರ್ಭಿಕ ಚಿತ್ರ
ರಾಮು, ಆನೇಕಲ್​
| Edited By: |

Updated on: Oct 28, 2025 | 3:19 PM

Share

ಬೆಂಗಳೂರು, ಅಕ್ಟೋಬರ್​ 28: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ  ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ ನಡೆದಿದೆ. ಪ್ರೀತಿ ಹೆಸರಿನಲ್ಲಿ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕಿ ಹಿಂದೆ ಬಿದ್ದಿದ್ದ ಅಜಯ್​ ಎಂಬಾತ ತನ್ನ ಸಹಚರರ ಜೊತೆಗೂಡಿ ಬಾಲಕಿಯನ್ನ ಲೈಂಗಿಕವಾಗಿ ಬಳಸಿಕೊಳ್ಳಲು ಕರೆದೊಯ್ಯುತ್ತಿದ್ದ ಎನ್ನಲಾಗಿದೆ.

ಆರೋಪಿಗಳು ಒಟ್ಟು 2 ಬೈಕ್​ನಲ್ಲಿ ತೆರಳಿದ್ದು, ಆ ಪೈಕಿ ಒಂದು ಬೈಕ್​ನಲ್ಲಿ ಅಜಯ್​, ಬಾಲಕಿ ಮತ್ತು ಇನ್ನೊಬ್ಬ ಇದ್ದ ಎನ್ನಲಾಗಿದೆ. ಹೊಸಕೋಟೆ ಮಾರ್ಗವಾಗಿ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಈ ವೇಳೆ ಬಾಲಕಿ ಸಾವನ್ನಪ್ಪಿದ್ದಾಳೆ. ಬೈಕ್​ನಲ್ಲಿದ್ದ ಉಳಿದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಕ್ಟೋಬರ್​​ 24ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಶಾಲೆಗೆ ಹೋದ ಬಾಲಕಿ ಮನೆಗೆ ವಾಪಾಸ್ ಬಾರದೆ ಇದ್ದಾಗ ಪೋಷಕರು ಕಂಗಾಲಾಗಿದ್ದು, ಈ ಬಗ್ಗೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಕೇಸ್ ದಾಖಲಿಸಿದ್ದರು. ಅದೇ ದಿನ ಸಂಜೆ ಹೊಸಕೋಟೆ ಪೊಲೀಸರಿಂದ ಬಾಲಕಿ ಪೋಷಕರಿಗೆ ಕರೆ ಬಂದಿದ್ದು, ನಿಮ್ಮ ಮಗಳು ಅಪಘಾತದಲ್ಲಿ ಮೃತಪಟ್ಟಿದ್ದಾಳೆಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬ್ರೆಜಿಲ್ ಮಾಡೆಲ್​​​ಗೆ ಲೈಂಗಿಕ ಕಿರುಕುಳ: ಆಗಿದ್ದೇನು?

ಬಲವಂತವಾಗಿ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನ ಆರೋಪ ಹಿನ್ನಲೆ ಅಜಯ್ ಅಲಿಯಾಸ್ ಮನೋಜ್, ಇರ್ಫಾನ್, ಮುಬಾರಕ್ ಸೇರಿ ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಅಪಹರಣ ಹಾಗೂ ಪೋಕ್ಸೋ ಪ್ರಕರಣದಡಿ ಆರೋಪಿಗಳನ್ನ ಅರೆಸ್ಟ್​ ಮಾಡಲಾಗಿದ್ದು, ಬಂಧಿತರನ್ನ ಜೈಲಿಗೆ ಅಟ್ಟಲಾಗಿದೆ. ಬದುಕಿ ಬಾಳಬೇಕಿದ್ದ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ತಾಯಿಗೆ ಬೈದಿದ್ದಕ್ಕೆ ಸಂಬಂಧಿ ಯುವಕನ ಹತ್ಯೆ

ತಾಯಿಗೆ ಬೈದಿದ್ದಾನೆ ಎಂಬ ಕಾರಣಕ್ಕೆ ಸಂಬಂಧಿ ಯುವಕನನ್ನ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಉಲ್ಲಾಳ ಉಪನಗರದ ರಾಮಚಂದ್ರಪ್ಪ ಲೇಔಟ್​ನಲ್ಲಿ ನಡೆದಿದೆ. ಅವಿನಾಶ್​(36) ಮೃತ ಯುವಕನಾಗಿದ್ದು, ಕುಡಿದು ಬಂದು ಅವಾಚ್ಯ ಶಬ್ದದಿಂದ ಬೈದಿದ್ದಲ್ಲದೆ ಕಬ್ಬಿಣದ ರಾಡ್​ನಿಂದ ಹೊಡೆದು ಕಾರ್ತಿಕ್​ ಎಂಬಾತ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ