Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊಟ್ಟಿಪುರ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಹೊತ್ತಿ ಉರಿದ ನೂರಾರು ಎಕರೆ ಅರಣ್ಯ ಪ್ರದೇಶ

ಕಿಡಿಗೇಡಿಗಳು ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿರುವಂತಹ ಘಟನೆ ಜಿಲ್ಲೆ‌ಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಗೊಟ್ಟಿಪುರ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಹೊತ್ತಿ ಉರಿದ ನೂರಾರು ಎಕರೆ ಅರಣ್ಯ ಪ್ರದೇಶ
ಅರಣ್ಯ ಪ್ರದೇಶಕ್ಕೆ ಬೆಂಕಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 27, 2023 | 11:10 PM

ಬೆಂಗಳೂರು ಗ್ರಾಮಾಂತರ: ಕಿಡಿಗೇಡಿಗಳು ಅರಣ್ಯ ಪ್ರದೇಶಕ್ಕೆ ಬೆಂಕಿ (fire) ಹಚ್ಚಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿರುವಂತಹ ಘಟನೆ ಜಿಲ್ಲೆ‌ಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಳೆದ ಅರ್ಧ ಗಂಟೆಗೂ ಹೆಚ್ಚುಕಾಲದಿಂದ ಬೆಂಕಿ ಉರಿಯುತ್ತಿದ್ದು, ಬೆಂಕಿಯ ಕೆನ್ನಾಲಿಗೆಗೆ ಮರ ಗಿಡ ಸೇರಿ ಅರಣ್ಯ ಸಂಪತ್ತು ನಾಶವಾಗಿದೆ. ಹೆದ್ದಾರಿಯಲ್ಲಿ ಬಂದ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಿಯರಿಂದ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಸಿಬ್ಬಂದಿ ಕಾರ್ಯಾಚರಣೆಯಿಂದ ಅರಣ್ಯ ಪ್ರದೇಶ ನಾಶ ತಪ್ಪಿದೆ. ಸಕಾಲದಲ್ಲಿ ಬೆಂಕಿ ನಂದಿಸಿದ ಕಾರಣ ಅರಣ್ಯಕ್ಕೆ ಹಾನಿಯಾಗಿಲ್ಲ ಅಂತ ಅರಣ್ಯಾಧಿಕಾರಿ ಪುಪ್ಪಲತಾ ಟಿವಿ9 ಗೆ ಹೇಳಿಕೆ ನೀಡಿದ್ದಾರೆ.

ಹೊಟೇಲ್​ನಲ್ಲಿ ಆಕಸ್ಮಿಕ ಬೆಂಕಿ ಅವಘಡ

ವಿಜಯಪುರ: ಹೊಟೇಲ್​ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿರುವಂತಹ ಘಟನೆ ನಗರದ ಗೋದಾವರಿ ಹೊಟೇಲ್​ನಲ್ಲಿ ನಡೆದಿದೆ. ಬೆಳಗಿನ ಜಾವ 3ಗಂಟೆಗೆ ಬೆಂಕಿ ಹೊತ್ತಿಕೊಂಡಿದ್ದು, ಹೊಟೇಲ್‌ನಲ್ಲಿ ಮಲಗಿದ್ದ ಇಬ್ಬರಿಗೆ ಗಾಯಗಾಳಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ, ಮಲಗಿದ್ದಲ್ಲೇ ಸುಟ್ಟು ಕರಕಲಾದ ವೃದ್ಧ ದಂಪತಿ

ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ 9 ಗುಡಿಸಲು

ರಾಯಚೂರು: ಶಾರ್ಟ್ ಸರ್ಕ್ಯೂಟ್​ನಿಂದ 9 ಗುಡಿಸಲು ಬೆಂಕಿಗಾಹುತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಟ್ಟಮರಡಿ ಜೆಸ್ಕಾಂನ ಜೆಸ್ಕಾಂನ ಓರ್ವ ಜೆಇ, ಇಬ್ಬರು ಲೈನ್​ಮ್ಯಾನ್ ವಿರುದ್ಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಜಾಗಟಕಲ್ ಗ್ರಾಮದಲ್ಲಿ ಫೆಬ್ರವರಿ 25ರಂದು 9 ಗುಡಿಸಲು, ಹತ್ತಿ ರಾಶಿಗೆ ಬೆಂಕಿ ತಗುಲಿದ್ದು, ಇದೇ ವೇಳೆ ಗುಡಿಸಲಿನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿತ್ತು.

ಘಟನೆಯಲ್ಲಿ ಸುಮಾರು 500 ಕ್ವಿಂಟಾಲ್ ಹತ್ತಿ, 9 ಗುಡಿಸಲು, 2 ಬೈಕ್​ಗಳು, ದವಸ ಧಾನ್ಯ, ಬಟ್ಟೆ, ಕ್ರಿಮಿನಾಶಕ ಸೇರಿದಂತೆ ಇತರೆ ವಸ್ತುಗಳು ನಾಶವಾಗಿದ್ದವು. 77.49 ಲಕ್ಷ ಮೌಲ್ಯದ ಆಸ್ತಿ ಹಾನಿ ಆಗಿದೆ ಎಂದು ತಾಲೂಕು ಆಡಳಿತ ಅಂದಾಜಿಸಿದೆ. ಸದ್ಯ ದೇವದುರ್ಗ ತಾಲೂಕು ಆಡಳಿತದಿಂದ ಸಂತ್ರಸ್ತರಿಗೆ ಫುಡ್​ ಕಿಟ್ ಸೇರಿದಂತೆ ಉಪ ಜೀವನಕ್ಕೆ ಬೇಕಾದ ವಸ್ತುಗಳ ವಿತರಣೆ ಮಾಡಲಾಗಿದೆ.

ಇದನ್ನೂ ಓದಿ: ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಆರೋಪವೆಂದ ಅಜೀಂ ಪ್ರೇಮ್​ ಜಿ ವಿವಿ

ಶಿವರಾಮ್ ಹೆಬ್ಬಾರ ಪುತ್ರನ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ದುರಂತ 

ಹಾವೇರಿ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ್​ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಬೆಲ್ಟ್​ಗೆ ಸಿಲುಕಿ 19 ವರ್ಷದ ಯುವ ಕಾರ್ಮಿಕ ದಾರುಣ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕೋಣನಕೇರಿಯಲ್ಲಿರುವ ವಿಐಪಿಎನ್ ಡಿಸ್ಟಲರಿಸ್ ಕಾರ್ಖಾನೆಯಲ್ಲಿ ನಡೆದಿದೆ. ನವೀನ ಬಸಪ್ಪ ಚಲವಾದಿ(19) ಮೃತ ಕಾರ್ಮಿಕ. ಕೆಲಸ ಮಾಡುತ್ತಿದ್ದ ವೇಳೆ ನಿನ್ನೆ ಶನಿವಾರ ಸಂಜೆ ಕಬ್ಬಿನ ಪುಡಿ ತುಂಬುತ್ತಿದ್ದಾಗ ದುರ್ಘಟನೆ ನಡೆದಿದೆ. ಯಾವುದೇ ಸುರಕ್ಷಾ ಕ್ರಮ ಅಳವಡಿಸದ ಹಿನ್ನೆಲೆ ಘಟನೆ ಸಂಭವಿಸಿದೆ. ಕಾರ್ಖಾನೆ ಮಾಲೀಕ ಸೇರಿ ಆರು ಜನರ ವಿರುದ್ಧ ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:05 pm, Mon, 27 February 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್