AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್‌ ಹತ್ತುವ ಮುನ್ನ ಇರಲಿ ಎಚ್ಚರ; ಬಿಎಂಟಿಸಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ

ಬಿಎಂಟಿಸಿ ರೂಟ್ ಸಂಖ್ಯೆ 401ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯಲಹಂಕದ ಸಾವಿತ್ರಮ್ಮ ಕುಣಿಗಲ್‌ನ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು. ಕಾರ್ಯಕ್ರಮದಲ್ಲಿ ಚಿನ್ನ ಹಾಕಿಕೊಳ್ಳಲು ತನ್ನ ಚಿನ್ನವನ್ನು ಬ್ಯಾಗ್ನಲ್ಲಿ ಹೊತ್ತೊಯ್ಯುತ್ತಿದ್ದರು. ಬಿಎಂಟಿಸಿ ಬಸ್‌ನಲ್ಲಿದ್ದಾಗಲೇ ಬ್ಯಾಗ್‌ನಲ್ಲಿದ್ದ ಚಿನ್ನ ಕಳ್ಳತನವಾಗಿದೆ.

ಬಸ್‌ ಹತ್ತುವ ಮುನ್ನ ಇರಲಿ ಎಚ್ಚರ; ಬಿಎಂಟಿಸಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ
ಬಿಎಂಟಿಸಿ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Aug 22, 2021 | 1:11 PM

Share

ನೆಲಮಂಗಲ: ಇತ್ತೀಚೆಗೆ ಖತರ್ನಾಕ್ ಕಳ್ಳರು ಬಸ್ನಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನು ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಈ ಮೊದಲು ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಬಸ್ ಹತ್ತುವಾಗ ಅದೆಷ್ಟೂ ಮಂದಿ ಪರ್ಸ್, ಮೊಬೈಲ್, ಹಣ ಕಳೆದುಕೊಂಡಿದ್ದಾರೆ. ಅದೇ ರೀತಿ ಯಲಹಂಕದ ಸಾವಿತ್ರಮ್ಮ ಎನ್ನವವರು ಬಿಎಂಟಿಸಿ ಬಸ್‌ನಲ್ಲಿ ತನ್ನ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳೆದುಕೊಂಡಿದ್ದಾರೆ.

ಬಿಎಂಟಿಸಿ ರೂಟ್ ಸಂಖ್ಯೆ 401ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯಲಹಂಕದ ಸಾವಿತ್ರಮ್ಮ ಕುಣಿಗಲ್‌ನ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು. ಕಾರ್ಯಕ್ರಮದಲ್ಲಿ ಚಿನ್ನ ಹಾಕಿಕೊಳ್ಳಲು ತನ್ನ ಚಿನ್ನವನ್ನು ಬ್ಯಾಗ್ನಲ್ಲಿ ಹೊತ್ತೊಯ್ಯುತ್ತಿದ್ದರು. ಬಿಎಂಟಿಸಿ ಬಸ್‌ನಲ್ಲಿದ್ದಾಗಲೇ ಬ್ಯಾಗ್‌ನಲ್ಲಿದ್ದ ಚಿನ್ನ ಕಳ್ಳತನವಾಗಿದೆ. ಜಾಲಹಳ್ಳಿಯಲ್ಲಿ ಬಸ್ ಬದಲಿಸುವಾಗ ಬ್ಯಾಗ್ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಚಿನ್ನಾಭರಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾವಿತ್ರಮ್ಮನ ಬ್ಯಾಗ್ನಲ್ಲಿ ಒಂದೂವರೆ ಲಕ್ಷ ಬೆಲೆಬಾಳುವ 35ಗ್ರಾಂ ಚಿನ್ನಾಭರಣಗಳಿದ್ದವು ಎನ್ನಲಾಗಿದೆ. ತಮ್ಮ ತವರೂರಾದ ಕುಣಿಗಲ್ನಲ್ಲಿ ತಮ್ಮನ ಪತ್ನಿ ಗೀತಾ ಅವರ ಸೀಮಂತ ಕಾರ್ಯಕ್ರಮ ಇತ್ತು. ಬಸ್ನಲ್ಲಿ ಚಿನ್ನಾಭರಣ ಧರಿಸಿ ಪ್ರಯಾಣಿಸುವುದು ಅಪಾಯವೆಂದು ಬ್ಯಾಗ್ನಲ್ಲಿ ಇಟ್ಟಿದ್ದರು. ಆದರೆ ಬಸ್ನಲ್ಲಿ ನೂಕು ನುಗ್ಗಲು ಮಾಡಿ ಕಳ್ಳತನ ಮಾಡಿದ್ದಾರೆ. ಇನ್ನು ಬಸ್ ನಂ 401ರಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಈಗಾಗಲೇ ಈ ಬಸ್ನಲ್ಲಿ ಪ್ರಯಾಣಿಸುವ ಅನೇಕ ಮಂದಿ ತಮ್ಮ ವಸ್ತುಗಳನ್ನು ಕಳೆದುಕೊಂಡಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕನಿಗೆ ಈ ಬಗ್ಗೆ ಮಾಹಿತಿ ಇದ್ದರೂ ಪ್ರಕರಣ ದಾಖಲಿಸಲು ಮುಂದಾಗಿಲ್ಲ. ಸದ್ಯ ಚಿನ್ನಾಭರಣ ಕಳೆದುಕೊಂಡ ಸಾವಿತ್ರಮ್ಮ ಪ್ರಕರಣ ದಾಖಲಿಸಿದ್ದು ಆದಷ್ಟು ಬೇಗ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಕಳ್ಳರ ಗ್ಯಾಂಗ್ ಅರೆಸ್ಟ್ ಮಾಡಬೇಕಿದೆ.

ಇದನ್ನೂ ಓದಿ: ಕಳ್ಳತನ, ಕೊರೊನಾ ನಿಯಮ ಉಲ್ಲಂಘನೆಗೆ ಬ್ರೇಕ್ ಹಾಕಲು ವಿನೂತನ ಪ್ರಯತ್ನ; ಅಶರೀರ ವಾಣಿಯಿಂದ ಬರುತ್ತೆ ಎಚ್ಚರಿಕೆ

Published On - 11:46 am, Sun, 22 August 21

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ