ಬೆಂಗಳೂರು ವಿಮಾನ ನಿಲ್ದಾಣದಲ್ಲಿ 26 ಕೋಟಿ ರೂ. ಮೌಲ್ಯದ ಕೊಕೇನ್, ಕೀನ್ಯಾ ಮೂಲದ ಮಹಿಳೆ ವಶ
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವೀಸಾ ಮೆರೆಗೆ ದೇಶಕ್ಕೆ ಬಂದಿದ್ದ ಕೀನ್ಯಾ ಮೂಲದ 36 ವರ್ಷದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಲಗೇಜ್ ಬ್ಯಾಗ್ನಲ್ಲಿ ಕೊಕೇನ್ ಮರೆಮಾಚಿ ಬೆಂಗಳೂರಿನಿಂದ ದೆಹಲಿಗೆ ಸಾಗಿಸಲು ಯತ್ನಿಸುತ್ತಿದ್ದಳು. ಈ ವೇಳೆ ಸಿಕ್ಕಿಬಿದ್ದಿದ್ದಾಳೆ.
ದೇವನಹಳ್ಳಿ, ಜ.20: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರಿನಿಂದ ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 26 ಕೋಟಿ ಮೌಲ್ಯದ 2.6 ಕೆಜಿ ಕೊಕೇನ್ ವಶಕ್ಕೆ ಪಡೆದಿದ್ದಾರೆ. ಕೊಕೇನ್ ಸಮೇತ ಮಹಿಳೆಯನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದು ಬೆಂಗಳೂರಿನ ಡಿಆರ್ಐ ಕಚೇರಿಯಲ್ಲಿ ಮಹಿಳೆಯ ವಿಚಾರಣೆ ನಡೆಸಲಾಗುತ್ತಿದೆ.
ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವೀಸಾ ಮೆರೆಗೆ ದೇಶಕ್ಕೆ ಬಂದಿದ್ದ ಕೀನ್ಯಾ ಮೂಲದ 36 ವರ್ಷದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಲಗೇಜ್ ಬ್ಯಾಗ್ನಲ್ಲಿ ಕೊಕೇನ್ ಮರೆಮಾಚಿ ಬೆಂಗಳೂರಿನಿಂದ ದೆಹಲಿಗೆ ಸಾಗಿಸಲು ಯತ್ನಿಸುತ್ತಿದ್ದಳು. ಈ ವೇಳೆ ಸಿಕ್ಕಿಬಿದ್ದಿದ್ದಾಳೆ. ಇಂಡಿಗೋ ವಿಮಾನದಲ್ಲಿ ದೆಹಲಿಗೆ ತೆರಳಲು ಚೆಕ್ ಇನ್ ಆಗ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾಳೆ. ಕೊಕೇನ್ ಸಮೇತ ಮಹಿಳೆಯನ್ನ ವಶಕ್ಕೆ ಪಡೆದ ಅಧಿಕಾರಿಗಳು ಬೆಂಗಳೂರಿನ ಡಿಆರ್ಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ ಆರೋಪ; ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು
ಮನೆಗಳ್ಳತನ; 700 ಗ್ರಾಂ ಚಿನ್ನ, 6 ಲಕ್ಷ ರೂಪಾಯಿ ನಗದು ಕಳ್ಳತನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಶೆಟ್ಟರ ಮನೆಯಲ್ಲಿ ಮನೆಗಳ್ಳತನ ನಡೆದಿದೆ. ಅನ್ನಪೂರ್ಣೇಶ್ವರಿ ಲೇಔಟ್ ನರಸಿಂಹ ರಾಜ ಶೆಟ್ಟಿ ಎಂಬುವವರಿಗೆ ಸೇರಿರುವ ಮನೆಗೆ ಕೊರಿಯರ್ ಪಾರ್ಸೆಲ್ ಬಾಯ್ ತರ ಬಂದಿದ್ದ ಮನೆಗಳ್ಳರು 700 ಗ್ರಾಂ ಚಿನ್ನಾಭರಣ, 6 ಲಕ್ಷ ರೂಪಾಯಿ ನಗದು ಕದ್ದು ಪರಾರಿಯಾಗಿದ್ದಾರೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಂಕೆ ಭೇಟಿಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಯುವಕರ ಬಂಧನ
ಜಿಂಕೆ ಭೇಟಿಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಯುವಕರನ್ನು ಯಾದಗಿರಿ ತಾಲೂಕಿನ ಸೈದಾಪುರ ಬಳಿ ಬಂಧಿಸಲಾಗಿದೆ. ಮಹೇಶ್ ದುಪ್ಪಲ್ಲಿ, ಆನಂದ ಅರೆಸ್ಟ್ ಆದವರು. ಎರಡು ಕೆ.ಜಿ ಜಿಂಕೆ ಮಾಂಸದ ಜೊತೆ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಯಾದಗಿರಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಜಾಗೃತದಳ, ಬೆಂಗಳೂರಿನ ಅಧಿಕಾರಿಗಳು ದಾಳಿ ನಡೆಸಿ ಈ ಕಾರ್ಯಾಚರಣೆ ಮಾಡಲಾಗಿದೆ. ಈ ಹಿಂದೆ ಇದೇ ಆರೋಪಿಗಳು ಮುಳ್ಳು ಹಂದಿ, ಕೃಷ್ಣ ಮೃಗ, ಉಡಗಳು, ಮೊಲಗಳು, ನವೀಲುಗಳು ಹಾಗೂ ಕಾಡು ಹಂದಿಗಳನ್ನ ಭೇಟಿಯಾಡಿದ್ದರು. ನಾನಾ ಕಡೆ ಭೇಟಿಯಾಡಿ ಬೆಂಗಳೂರಿಗೆ ಮಾಂಸ ತಂದು ಮಾರಾಟ ಮಾಡುತ್ತಿದ್ದರು. ಇದೇ ಕಾರಣಕ್ಕೆ ಅಧಿಕಾರಿಗಳು ಬೆಂಗಳೂರಿನಿಂದ ಬಂದು ದಾಳಿ ಮಾಡಿದ್ದಾರೆ. ಬಂಧನಕ್ಕೆ ಒಳಗಾದ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ