ವಿದೇಶಗಳಿಂದ ಬೆಂಗಳೂರಿಗೆ ಇಂದು 2,634ಕ್ಕೂ ಹೆಚ್ಚು ಜನ ಆಗಮನ; ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 43 ಸಿಬ್ಬಂದಿ ನಿಯೋಜನೆ

ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲು ಏರ್​ಪೋರ್ಟ್​ನಲ್ಲಿ ಸುಮಾರು 43 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ವಿದೇಶಗಳಿಂದ ಬೆಂಗಳೂರಿಗೆ ಇಂದು 2,634ಕ್ಕೂ ಹೆಚ್ಚು ಜನ ಆಗಮನ; ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 43 ಸಿಬ್ಬಂದಿ ನಿಯೋಜನೆ
ಕೆಂಪೇಗೌಡ ವಿಮಾನ ನಿಲ್ದಾಣ
Follow us
TV9 Web
| Updated By: sandhya thejappa

Updated on:Dec 05, 2021 | 9:18 AM

ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ಆತಂಕದ ನಡುವೆ ಇಂದು (ನ.5) ರಾಜ್ಯಕ್ಕೆ ಸಾವಿರಾರು ವಿದೇಶಿ ಪ್ರಯಾಣಿಕರು ಆಗಮಿಸಲಿದ್ದಾರೆ. ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲು ಏರ್​ಪೋರ್ಟ್​ನಲ್ಲಿ ಸುಮಾರು 43 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. 19 ವಿಮಾನಗಳಲ್ಲಿ 2,634ಕ್ಕೂ ಹೆಚ್ಚು ಜನ ಆಗಮಿಸಲಿದ್ದು, ವಿದೇಶದಿಂದ ಬರುವ ಎಲ್ಲರಿಗೂ ಟೆಸ್ಟ್ ಮಾಡಲು ಸಿದ್ಧತೆ ನಡೆಯುತ್ತಿದೆ.

ದೋಹ, ಶಾರ್ಜಾ, ಮಲೈ, ದುಬೈ, ಮಸ್ಕಟ್, ಸಿಂಗಾಪುರ, ಶ್ರೀಲಂಕಾ ಸೇರಿದಂತೆ ಹಲವು ದೇಶಗಳಿಂದ 19 ವಿಮಾನಗಳು ಕೆಂಪೇಗೌಡ ಏರ್​ಪೋರ್ಟ್​ಗೆ ಆಗಮಿಸಲಿವೆ. ಎಲ್ಲಾ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಟ್ಟಿರುವ ಆರೋಗ್ಯ ಇಲಾಖೆ, ಟೆಸ್ಟ್ ಮಾಡಲು ಸಿದ್ಧತೆ ನಡೆಸಿಕೊಳ್ಳುತ್ತಿದೆ. ಪ್ರತಿಯೊಬ್ಬ ಪ್ರಯಾಣಿಕನಿಗೂ ಆರ್​ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತದೆ. ಟೆಸ್ಟ್ ರಿಸಲ್ಟ್ ಬರುವವರೆಗೂ ವೈಟಿಂಗ್ ರೂಂಮಲ್ಲಿ ಕೂರಿಸಲಾಗುವುದು.

ಫ್ರೀ ವೈ-ಫೈ ವ್ಯವಸ್ಥೆ ವಿಮಾನ ನಿಲ್ದಾಣದಲ್ಲಿ ಅಲರ್ಟ್ ಮಾಡಲಾಗಿದೆ. ಕೊವಿಡ್ ಟೆಸ್ಟ್ ಮಾಡುವುದಕ್ಕೆ 4 ಪ್ರತ್ಯೇಕ ಕೌಂಟರ್ ಓಪನ್ ಮಾಡಲಾಗಿದೆ. ಟೆಸ್ಟ್ ವರದಿ ಬರುವವರೆಗೂ ಪ್ರಯಾಣಿಕರು ಕಾಯಬೇಕು. ಹೀಗಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ  ಪ್ರಯಾಣಿಕರು ಸಮಯ ಕಳೆಯಲು ಫ್ರೀ ವೈ-ಫೈ ವ್ಯವಸ್ಥೆ ಮಾಡಲಾಗಿದ್ದು, ಜೊತೆಗೆ ಅಂತರ ಪಾಲಿಸಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ

ಜಾಕ್ವೆಲಿನ್​ಗೆ 36 ಲಕ್ಷ ರೂಪಾಯಿ ಬೆಲೆಯ ಬೆಕ್ಕನ್ನು ಗಿಫ್ಟ್​ ನೀಡಿದ್ದ ಬಹುಕೋಟಿ ವಂಚನೆ ಆರೋಪಿ ಸುಕೇಶ್​

ಮೀಸೆ ಚಿಗುರದ ವಯಸ್ಸಲ್ಲೇ ಗಾಂಜಾ ಸೇವನೆ; ಮತ್ತಿನಲ್ಲಿ ಗೂಂಡಾಗಿರಿ, ಮೂವರು ಅಪ್ರಾಪ್ತರು ಅರೆಸ್ಟ್

Published On - 9:14 am, Sun, 5 December 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ