ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ಆತಂಕದ ನಡುವೆ ಇಂದು (ನ.5) ರಾಜ್ಯಕ್ಕೆ ಸಾವಿರಾರು ವಿದೇಶಿ ಪ್ರಯಾಣಿಕರು ಆಗಮಿಸಲಿದ್ದಾರೆ. ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲು ಏರ್ಪೋರ್ಟ್ನಲ್ಲಿ ಸುಮಾರು 43 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. 19 ವಿಮಾನಗಳಲ್ಲಿ 2,634ಕ್ಕೂ ಹೆಚ್ಚು ಜನ ಆಗಮಿಸಲಿದ್ದು, ವಿದೇಶದಿಂದ ಬರುವ ಎಲ್ಲರಿಗೂ ಟೆಸ್ಟ್ ಮಾಡಲು ಸಿದ್ಧತೆ ನಡೆಯುತ್ತಿದೆ.
ದೋಹ, ಶಾರ್ಜಾ, ಮಲೈ, ದುಬೈ, ಮಸ್ಕಟ್, ಸಿಂಗಾಪುರ, ಶ್ರೀಲಂಕಾ ಸೇರಿದಂತೆ ಹಲವು ದೇಶಗಳಿಂದ 19 ವಿಮಾನಗಳು ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿಸಲಿವೆ. ಎಲ್ಲಾ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಟ್ಟಿರುವ ಆರೋಗ್ಯ ಇಲಾಖೆ, ಟೆಸ್ಟ್ ಮಾಡಲು ಸಿದ್ಧತೆ ನಡೆಸಿಕೊಳ್ಳುತ್ತಿದೆ. ಪ್ರತಿಯೊಬ್ಬ ಪ್ರಯಾಣಿಕನಿಗೂ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತದೆ. ಟೆಸ್ಟ್ ರಿಸಲ್ಟ್ ಬರುವವರೆಗೂ ವೈಟಿಂಗ್ ರೂಂಮಲ್ಲಿ ಕೂರಿಸಲಾಗುವುದು.
ಫ್ರೀ ವೈ-ಫೈ ವ್ಯವಸ್ಥೆ
ವಿಮಾನ ನಿಲ್ದಾಣದಲ್ಲಿ ಅಲರ್ಟ್ ಮಾಡಲಾಗಿದೆ. ಕೊವಿಡ್ ಟೆಸ್ಟ್ ಮಾಡುವುದಕ್ಕೆ 4 ಪ್ರತ್ಯೇಕ ಕೌಂಟರ್ ಓಪನ್ ಮಾಡಲಾಗಿದೆ. ಟೆಸ್ಟ್ ವರದಿ ಬರುವವರೆಗೂ ಪ್ರಯಾಣಿಕರು ಕಾಯಬೇಕು. ಹೀಗಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಸಮಯ ಕಳೆಯಲು ಫ್ರೀ ವೈ-ಫೈ ವ್ಯವಸ್ಥೆ ಮಾಡಲಾಗಿದ್ದು, ಜೊತೆಗೆ ಅಂತರ ಪಾಲಿಸಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ
ಜಾಕ್ವೆಲಿನ್ಗೆ 36 ಲಕ್ಷ ರೂಪಾಯಿ ಬೆಲೆಯ ಬೆಕ್ಕನ್ನು ಗಿಫ್ಟ್ ನೀಡಿದ್ದ ಬಹುಕೋಟಿ ವಂಚನೆ ಆರೋಪಿ ಸುಕೇಶ್
ಮೀಸೆ ಚಿಗುರದ ವಯಸ್ಸಲ್ಲೇ ಗಾಂಜಾ ಸೇವನೆ; ಮತ್ತಿನಲ್ಲಿ ಗೂಂಡಾಗಿರಿ, ಮೂವರು ಅಪ್ರಾಪ್ತರು ಅರೆಸ್ಟ್
Published On - 9:14 am, Sun, 5 December 21