ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ, ತಪ್ಪಿದ ಭಾರಿ ದುರಂತ
ಅನೇಕಲ್: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಐ10 ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಬೆಂಗಳೂರು ತಮಿಳುನಾಡು ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ನಡೆದಿದೆ. ಇಂದು ಮುಂಜಾನೆ ಸುಮಾರು ಐದು ಗಂಟೆಯ ಸಮಯದಲ್ಲಿ ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ಸುಳಗಿರಿ ಸಮೀಪದ ಕೊಲ್ಲಪಲ್ಲಿ ಬಳಿ ಸಾಗುತ್ತಿದ್ದ ವೇಳೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತುಕೊಂಡ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾನೆ. ಚಾಲಕನ ಮುಂಜಾಗೃತೆಯಿಂದ ಕಾರಿನಲ್ಲಿದ್ದವರು ಸೇಫ್ ಆಗಿದ್ದಾರೆ. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಸೂಳಗಿರಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ […]
ಅನೇಕಲ್: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಐ10 ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಬೆಂಗಳೂರು ತಮಿಳುನಾಡು ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ನಡೆದಿದೆ. ಇಂದು ಮುಂಜಾನೆ ಸುಮಾರು ಐದು ಗಂಟೆಯ ಸಮಯದಲ್ಲಿ ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ಸುಳಗಿರಿ ಸಮೀಪದ ಕೊಲ್ಲಪಲ್ಲಿ ಬಳಿ ಸಾಗುತ್ತಿದ್ದ ವೇಳೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಎಚ್ಚೆತ್ತುಕೊಂಡ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾನೆ. ಚಾಲಕನ ಮುಂಜಾಗೃತೆಯಿಂದ ಕಾರಿನಲ್ಲಿದ್ದವರು ಸೇಫ್ ಆಗಿದ್ದಾರೆ. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಸೂಳಗಿರಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.