ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ, ತಪ್ಪಿದ ಭಾರಿ ದುರಂತ

|

Updated on: Dec 31, 2019 | 1:25 PM

ಅನೇಕಲ್: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಐ10 ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಬೆಂಗಳೂರು ತಮಿಳುನಾಡು ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ನಡೆದಿದೆ. ಇಂದು ಮುಂಜಾನೆ ಸುಮಾರು ಐದು ಗಂಟೆಯ ಸಮಯದಲ್ಲಿ ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ಸುಳಗಿರಿ ಸಮೀಪದ ಕೊಲ್ಲಪಲ್ಲಿ ಬಳಿ ಸಾಗುತ್ತಿದ್ದ ವೇಳೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೆತ್ತುಕೊಂಡ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾನೆ. ಚಾಲಕನ ಮುಂಜಾಗೃತೆಯಿಂದ ಕಾರಿನಲ್ಲಿದ್ದವರು ಸೇಫ್ ಆಗಿದ್ದಾರೆ. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಸೂಳಗಿರಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ […]

ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ, ತಪ್ಪಿದ ಭಾರಿ ದುರಂತ
Follow us on

ಅನೇಕಲ್: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಐ10 ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಬೆಂಗಳೂರು ತಮಿಳುನಾಡು ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ನಡೆದಿದೆ. ಇಂದು ಮುಂಜಾನೆ ಸುಮಾರು ಐದು ಗಂಟೆಯ ಸಮಯದಲ್ಲಿ ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ಸುಳಗಿರಿ ಸಮೀಪದ ಕೊಲ್ಲಪಲ್ಲಿ ಬಳಿ ಸಾಗುತ್ತಿದ್ದ ವೇಳೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಎಚ್ಚೆತ್ತುಕೊಂಡ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾನೆ. ಚಾಲಕನ ಮುಂಜಾಗೃತೆಯಿಂದ ಕಾರಿನಲ್ಲಿದ್ದವರು ಸೇಫ್ ಆಗಿದ್ದಾರೆ. ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಸೂಳಗಿರಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.