ಮದ್ಯದ ಪಾರ್ಟಿ ಬಳಿಕ ಕೊಲೆ? ಜನನಿಬಿಡ ಪ್ರದೇಶದಲ್ಲಿ ನಿರ್ಮಾಣ ಕಟ್ಟಡದಲ್ಲಿ ವಿವಸ್ತ್ರಗೊಳಿಸಿ ಕೈಕಾಲು ಕಟ್ಟಿ ವ್ಯಕ್ತಿಯ ಹತ್ಯೆ

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಯಾರಂಡಹಳ್ಳಿ ಗ್ರಾಮದಲ್ಲಿ ಜನನಿಬಿಡ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮದ್ಯದ ಪಾರ್ಟಿ ಬಳಿಕ ವಿವಸ್ತ್ರಗೊಳಿಸಿ ಕೈಕಾಲು ಕಟ್ಟಿ ವ್ಯಕ್ತಿಯ ಹತ್ಯೆ

ಮದ್ಯದ ಪಾರ್ಟಿ ಬಳಿಕ ಕೊಲೆ? ಜನನಿಬಿಡ ಪ್ರದೇಶದಲ್ಲಿ ನಿರ್ಮಾಣ ಕಟ್ಟಡದಲ್ಲಿ ವಿವಸ್ತ್ರಗೊಳಿಸಿ ಕೈಕಾಲು ಕಟ್ಟಿ ವ್ಯಕ್ತಿಯ ಹತ್ಯೆ
ನಿರ್ಮಾಣ ಹಂತದ ಕಟ್ಟಡದಲ್ಲಿ ವಿವಸ್ತ್ರಗೊಳಿಸಿ ಕೈಕಾಲು ಕಟ್ಟಿ ಹತ್ಯೆ
Follow us
ರಾಮು, ಆನೇಕಲ್​
| Updated By: ಸಾಧು ಶ್ರೀನಾಥ್​

Updated on:Jul 27, 2023 | 3:28 PM

ಆನೇಕಲ್, ಜುಲೈ 27:​ ಅದು ಜನನಿಬಿಡ ಪ್ರದೇಶದಲ್ಲಿರುವ ನಿರ್ಮಾಣ ಹಂತದ ಕಟ್ಟಡ.. ಕಾರ್ಮಿಕರು ಎಂದಿನಂತೆ ಕೆಲಸ ಮಾಡ್ತಿರುವಾಗ ಗಬ್ಬು ವಾಸನೆ ಮೂಗಿಗೆ ಬಡಿಯೋಕೆ ಶುರುವಾಗಿತ್ತು.. ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ವಾಸನೆ ಬರ್ತಿದ್ದ ಜಾಗಕ್ಕೆ ಹೋಗಿ ಏನಾಗಿದೆ ಎಂದು ನೋಡಿದ್ದಾರೆ. ಆ ಘೋರ ದೃಶ್ಯ ಕಂಡು ಅಲ್ಲಿದ್ದ ಜನರೆಲ್ಲ ಭಯಭೀತರಾಗಿದ್ರು.. ಬೆಂಗಳೂರಿನ ಹೊರವಲಯದಲ್ಲಿ ನಡೆಯಿತೊಂದು ಭೀಕರ ಹತ್ಯೆ (Murder)… ಹೀಗೆ ನಿರ್ಮಾಣ ಹಂತದ ಕಟ್ಟಡದಲ್ಲಿ ಅತ್ಯಂತ ಭೀಕರವಾಗಿ ಕೊಲೆಯಾಗಿರುವ ಅಪರಿಚಿತ ವ್ಯಕ್ತಿಯ ಮೃತದೇಹ.. ಇನ್ನೊಂದೆಡೆ ಸಾಕ್ಷ್ಯ ಕಲೆಹಾಕುತ್ತಿರುವ ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರು ಹಾಗೂ ಬೆರಳಚ್ಚು ತಜ್ಞರ ತಂಡ.. ಈ ಎಲ್ಲಾ ದೃಶ್ಯ ಕಂಡು ಬಂದಿದ್ದು, ಬೆಂಗಳೂರು ಹೊರವಲಯ (Bangalore outskirts) ಆನೇಕಲ್ ತಾಲ್ಲೂಕಿನ (Anekal) ಯಾರಂಡಹಳ್ಳಿ ಗ್ರಾಮದಲ್ಲಿ..

ಹೌದು ಗ್ರಾಮದ ಜನನಿಬಿಡ ಪ್ರದೇಶದಲ್ಲಿ ಅರ್ಧಕ್ಕೆ ನಿಂತಿದ್ದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಇಂದು ಮಧ್ಯಾಹ್ನ ದುರ್ವಾಸನೆಯೊಂದು ಬಂದಿದೆ. ಅಲ್ಲಿನ ಸುತ್ತಮುತ್ತಲಿನ ಜನರು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಅಲ್ಲಿಗೆ ಬಂದ ಪೋಲೀಸರು ನಿರ್ಮಾಣ ಹಂತದ ಕಟ್ಟಡದ ಒಳಗೆ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಮೈಮೇಲೆ ಬಟ್ಟೆ ಇಲ್ಲದೆ ಕೈಕಾಲು ಕಟ್ಟಿದ್ದ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ. ಇನ್ನು, ಈ ಘಟನೆ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದ್ದು, ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ, ದುಷ್ಕರ್ಮಿಗಳು ವ್ಯಕ್ತಿಯನ್ನ ಘೋರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಇಂಥದೊಂದು ಘಟನೆಯನ್ನ ಕಂಡ ಅಲ್ಲಿನ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.

ಬೊಮ್ಮಸಂದ್ರ- ಜಿಗಣಿ ಕೈಗಾರಿಕಾ ಪ್ರದೇಶಕ್ಕೆ ಸಮೀಪದಲ್ಲಿರುವ ಯಾರಂಡಹಳ್ಳಿ ಗ್ರಾಮದಲ್ಲಿ ಹೊರರಾಜ್ಯದ ಜನರೇ ಅತಿಹೆಚ್ಚಾಗಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಅರ್ಧಕ್ಕೆ ನಿಂತಿದ್ದ ನಿರ್ಮಾಣ ಹಂತದ ಕಟ್ಟಡಕ್ಕೆ ಬಂದಿದ್ದ ಅಸಾಮಿಗಳು ಮದ್ಯದ ಪಾರ್ಟಿ ಮಾಡಿ ಬಳಿಕ ಕೊಲೆ ಮಾಡಿದ್ದಾರೆ.

ಅದಲ್ಲದೇ ವ್ಯಕ್ತಿಯನ್ನ ಸಂಪೂರ್ಣ ವಿವಸ್ತ್ರ ಗೊಳಿಸಿ ಕೈಕಾಲುಗಳನ್ನ ಕಟ್ಟಿಹಾಕಿ ಅತ್ಯಂತ ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಮೃತ ದೇಹದ ಮೇಲೆ ಹಳೆಯ ಚಾಪೆಯೊಂದನ್ನ ಹೊದಿಸಿ ಆರೋಪಿಗಳು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಅಲ್ಲಿನ ಸುತ್ತಮುತ್ತಲಿನ ಜನರಿಗೆ ದುರ್ವಾಸನೆ ಬಂದಾಗ ಕೂಡಲೇ ಸೂರ್ಯನಗರ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದು, ಸ್ಥಳಕ್ಕೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರು, ಬೆರಳಚ್ಚು ತಜ್ಞರು, ಡಾಗ್ ಸ್ಕ್ವಾಡ್ ಭೇಟಿ ನೀಡಿ ಸಾಕ್ಷ್ಯ ಕಲೆಹಾಕಿದ್ದಾರೆ. ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ಪುರುಷೋತ್ತಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೊಲೆಯಾದ ವ್ಯಕ್ತಿ ಯಾರೆಂದು ಪತ್ತೆ ಹಚ್ಚಿ, ಬಳಿಕ ಕೊಲೆ ಮಾಡಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:40 am, Thu, 27 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್