ದೇವನಹಳ್ಳಿ: ಶ್ರಾವಣ ಮಾಸದ ನಾಗರಪಂಚಮಿ(Nagara Panchami) ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ(Ghati Subrahmanya) ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(BS Yediyurappa) ಭೇಟಿ ನೀಡಿದ್ದಾರೆ. ಈ ವೇಳೆ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪುತ್ರ ವಿಜಯೇಂದ್ರ ಹಾಗೂ ಶಾಸಕ ಎಸ್.ಆರ್ ವಿಶ್ವನಾಥ್ ಸಾಥ್ ನೀಡಿದ್ದಾರೆ. ನಾಗರಪಂಚಮಿ ಹಿನ್ನೆಲೆ ದೇವಸ್ಥಾನಕ್ಕೆ ಹೆಚ್ಚಿನ ಭಕ್ತರ ಬರುವ ಸಾಧ್ಯತೆ ಇದ್ದು ಜಿಲ್ಲಾಡಳಿತ ಇಂದು ದೇವಾಲಯ ಬಂದ್ ಮಾಡಿ ಆದೇಶ ಹೊರಡಿಸಿತ್ತು. ಆದ್ರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಯಿಂದಾಗಿ ಆಡಳಿತ ಮಂಡಳಿ ದೇವಸ್ಥಾನ ತೆರೆದಿದೆ.
ನಿನ್ನೆ ದೇಗುಲಕ್ಕೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿತ್ತು ನಾಗರಪಂಚಮಿ ಹಬ್ಬವಿರುವ ಕಾರಣ ಕೊರೊನಾ ಮೂರನೆ ಅಲೆಯ ಆತಂಕದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಸರ್ಪದೋಷ ಸೇರಿದಂತೆ ನಾಗರಪಂಚಮಿಯಂದು ವಿವಿಧ ಪೂಜೆಗೆ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಪ್ರತಿವರ್ಷ ಭಕ್ತರು ಆಗಮಿಸುತ್ತಿದ್ದರು. ಕೊವಿಡ್ ಸೋಂಕು ಹರಡುವಿಕೆ ತಡೆಯುವ ಕಾರಣ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದರು. ಸದ್ಯ ಇಂದು ಬಿ.ಎಸ್. ಯಡಿಯೂರಪ್ಪ ಭೇಟಿ ಹಿನ್ನೆಲೆ ದೇವಸ್ಥಾನವನ್ನು ತೆರೆಯಲಾಗಿದೆ.
ಇದನ್ನೂ ಓದಿ: Naga Panchami 2021: ಕೃಷಿಕ ಮಹಿಳೆಯರ ಹಬ್ಬ ನಾಗರಪಂಚಮಿ, ಶ್ರಾವಣ ಮಾಸದಲ್ಲಿ ಆಚರಿಸುವ ನಾಗಪೂಜೆಯ ವಿಶೇಷವೇನು?