AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ PMOಗೆ ನೀಡುವ ಅಗತ್ಯವಿಲ್ಲ, ಕೇಜ್ರಿವಾಲ್‌ಗೆ 25 ಸಾವಿರ ದಂಡ: ಗುಜರಾತ್ ಹೈಕೋರ್ಟ್

ಪ್ರಧಾನಿ ಮೋದಿ ತಮ್ಮ ಪದವಿ ಪ್ರಮಾಣ ಪತ್ರಗಳನ್ನು ಪ್ರಧಾನ ಮಂತ್ರಿ ಕಚೇರಿಗೆ ಒದಗಿಸುವ ಅಗತ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. 

Narendra Modi: ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ PMOಗೆ ನೀಡುವ ಅಗತ್ಯವಿಲ್ಲ, ಕೇಜ್ರಿವಾಲ್‌ಗೆ 25 ಸಾವಿರ ದಂಡ: ಗುಜರಾತ್ ಹೈಕೋರ್ಟ್
ಪ್ರಧಾನಿ ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Mar 31, 2023 | 3:57 PM

Share

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣಪತ್ರವನ್ನು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ನೀಡಬೇಕು ಎಂದು ಪ್ರಧಾನಿ ಪದವಿ ಪ್ರಮಾಣಪತ್ರದ ವಿವರಗಳನ್ನು ನೀಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರು ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಇದೀಗ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಪ್ರಧಾನಿ ಮೋದಿ ತಮ್ಮ ಪದವಿ ಪ್ರಮಾಣ ಪತ್ರಗಳನ್ನು ಪ್ರಧಾನ ಮಂತ್ರಿ ಕಚೇರಿಗೆ ಒದಗಿಸುವ ಅಗತ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಶುಕ್ರವಾರ ತೀರ್ಪು ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ. ಇದರ ಜೊತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ 25 ಸಾವಿರ ದಂಡ ವಿಧಿಸಿದೆ.

ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ಏಕಸದಸ್ಯ ಪೀಠವು ಪ್ರಧಾನ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ರದ್ದುಗೊಳಿಸಿತು, ಪಿಎಂಒದ ಸಾರ್ವಜನಿಕ ಮಾಹಿತಿ ಅಧಿಕಾರಿ (ಪಿಐಒ) ಮತ್ತು ಗುಜರಾತ್ ವಿಶ್ವವಿದ್ಯಾಲಯ ಮತ್ತು ದೆಹಲಿ ವಿಶ್ವವಿದ್ಯಾಲಯದ ಪಿಐಒಗಳಿಗೆ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿವರಗಳನ್ನು ಒದಗಿಸುವಂತೆ ನಿರ್ದೇಶಿಸಿದೆ.

ಪ್ರಧಾನಿ ಪದವಿ ಪ್ರಮಾಣಪತ್ರದ ವಿವರಗಳನ್ನು ಕೋರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಗುಜರಾತ್ ಹೈಕೋರ್ಟ್  25,000 ರೂ, ದಂಡ ವಿಧಿಸಿದೆ. ಮುಖ್ಯ ಮಾಹಿತಿ ಆಯೋಗದ ಆದೇಶವನ್ನು ಪ್ರಶ್ನಿಸಿ ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಪ್ರಜಾಪ್ರಭುತ್ವದಲ್ಲಿ, ಕಚೇರಿಯಲ್ಲಿ ವ್ಯಕ್ತಿಯು ಡಾಕ್ಟರೇಟ್ ಅಥವಾ ಅನಕ್ಷರಸ್ಥ ಎಂದು ವ್ಯತ್ಯಾಸವಿರುವುದಿಲ್ಲ. ಅಲ್ಲದೆ, ಈ ವಿಷಯದಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿಲ್ಲ. ಅವರ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಕಾನೂನು ವೆಬ್‌ಸೈಟ್ ಬಾರ್ ಮತ್ತು ಬೆಂಚ್ ವಿಶ್ವವಿದ್ಯಾಲಯದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದಿಸಿದರು.

ಇದನ್ನೂ ಓದಿ: ರಣ ರೋಚಕ ಕದನಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಸಜ್ಜು

ಪ್ರಧಾನಿ ನರೇಂದ್ರ ಮೋದಿಯವರ ಪ್ರಕಾರ, ಅವರು 1978 ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಪದವಿ ಮತ್ತು 1983 ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು. ಮತ್ತೊಂದೆಡೆ, ಕೇಜ್ರಿವಾಲ್ ಪರ ವಕೀಲ ಪರ್ಸಿ ಕವಿನಾ ವಾದಿಸಿದರು, ನೀವು ನಾಮನಿರ್ದೇಶನ ಫಾರ್ಮ್ ಅನ್ನು (ಚುನಾವಣೆಯಲ್ಲಿ ಸಲ್ಲಿಸಿದ) ನೋಡಿದರೆ ಅದು ಅವರ ಶೈಕ್ಷಣಿಕ ಅರ್ಹತೆಯನ್ನು ಕೇಳುತ್ತದೆ. ಹೀಗಾಗಿ, ನಾವು ಪದವಿ ಪ್ರಮಾಣಪತ್ರವನ್ನು ಕೇಳುತ್ತಿದ್ದೇವೆ ಮತ್ತು ಅವರ ಅಂಕಪಟ್ಟಿ ಅಲ್ಲ ಎಂದು ವಾದಿಸಿದರು.

Published On - 3:25 pm, Fri, 31 March 23

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್