ನೆಲಮಂಗಲ: ಮಕ್ಕಳಾಗಿಲ್ಲ ಎಂದು ಮನನೊಂದು ನೀರಿನ ಸಂಪ್‌ಗೆ ಬಿದ್ದು ಗೃಹಿಣಿ ಆತ್ಮಹತ್ಯೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 02, 2023 | 3:15 PM

ನೆಲಮಂಗಲ ತಾಲೂಕಿನ ವೀರ ರಾಘವನಪಾಳ್ಯದಲ್ಲಿ ನೀರಿನ ಸಂಪ್‌ಗೆ ಬಿದ್ದು ಗೃಹಿಣಿವೊಬ್ಬರು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಮಕ್ಕಳಾಗಿಲ್ಲ ಎಂದು ಮನನೊಂದು ನೀರಿನ ಸಂಪ್‌ಗೆ ಬಿದ್ದು ಗೃಹಿಣಿ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
Follow us on

ಬೆಂಗಳೂರು ಗ್ರಾಮಾಂತರ, ಡಿ.02: ಮಕ್ಕಳಾಗಿಲ್ಲವೆಂದು ಮನನೊಂದು ನೀರಿನ ಸಂಪ್‌ಗೆ ಬಿದ್ದು ಗೃಹಿಣಿವೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ
ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ನೆಲಮಂಗಲ ತಾಲೂಕಿನ ವೀರ ರಾಘವನಪಾಳ್ಯದಲ್ಲಿ ನಡೆದಿದೆ.  ಸವಿತಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 12 ವರ್ಷದ ಹಿಂದೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆರೆಗೂಡು ಗ್ರಾಮದ ರವಿಕುಮಾರ್ ಎಂಬುವವರ ಜೊತೆ ಮದುವೆಯಾಗಿತ್ತು. ಇನ್ನು ಕಳೆದ ಎರಡು ವರ್ಷಗಳಿಂದ ನೆಲಮಂಗಲದಲ್ಲಿ ದಂಪತಿ ವಾಸವಿದ್ದರು.

ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣು

ಇನ್ನು 12 ವರ್ಷವಾದರೂ ಮಕ್ಕಳಾಗಿಲ್ಲವೆಂಬ ಕೊರಗು ಹೊಂದಿದ್ದ ಗೃಹಿಣಿ ಸವಿತಾ, ಪತಿ ಬಳಿ ಮಕ್ಕಳಿಲ್ಲದ ವಿಷಯ ಪದೇ ಪದೇ ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ತೀವ್ರ ಮನನೊಂದಿದ್ದ ಅವರು, ಇಂದು(ಡಿ.02) ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕ ಬಾರಿ ಪತ್ನಿಗೆ ಪೋನ್ ಮಾಡಿದರೂ ಕರೆ ಸ್ವೀಕರಿಸದ ಹಿನ್ನಲೆ ಮನೆ ಬಳಿ ಬಂದು ಹುಡುಕುವ ವೇಳೆ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪುರುಷರಲ್ಲಿ ಹೆಚ್ಚಿನ ಆತ್ಮಹತ್ಯೆ ದರಗಳಿಗೆ ಆರ್ಥಿಕ ಬಿಕ್ಕಟ್ಟುಗಳು ಕಾರಣವಾಗುತ್ತಿವೆ: ಅಧ್ಯಯನ

ಸಾಲಬಾಧೆ ತಾಳಲಾರದೆ ಉದ್ಯೋಗಿ ಆತ್ಮಹತ್ಯೆ

ಉತ್ತರ ಕನ್ನಡ: ಜಿಲ್ಲೆಯ ಕಾರವಾರದ ಪದ್ಮನಾಭನಗರದಲ್ಲಿ ಸಾಲಬಾಧೆ ತಾಳಲಾರದೆ ಬಿಣಗಾದ ಆದಿತ್ಯ ಬಿರ್ಲಾ ಕಂಪನಿ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಜಯ್ ಕಾಮತ್(39) ಆತ್ಮಹತ್ಯೆ ಮಾಡಿಕೊಂಡ ಯುವಕ. ಈ ಕುರಿತು ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ