AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಗಂಡ್ಸಾಗಿದ್ದರೆ ಪೊಲೀಸ್​​ಗೆ ಹೊಡಿ ಎಂದ ತಾಯಿ, ಹೊಡೆದೇ ಬಿಟ್ಟ ಮಗ

ನೆಲಮಂಗಲದಲ್ಲಿ ತಾಯಿ ಮತ್ತು ಮಗನ ನಡುವಿನ ಜಗಳದಿಂದ ಒಂದು ಅಹಿತಕರ ಘಟನೆ ನಡೆದಿದೆ. ಠಾಣೆಯಲ್ಲಿ ಜಗಳದ ವೇಳೆ ತಾಯಿಯ ಪ್ರಚೋದನೆಯಿಂದ ಮಗ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದ ಪಿಎಸ್ಐ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ.

ನೆಲಮಂಗಲ: ಗಂಡ್ಸಾಗಿದ್ದರೆ ಪೊಲೀಸ್​​ಗೆ ಹೊಡಿ ಎಂದ ತಾಯಿ, ಹೊಡೆದೇ ಬಿಟ್ಟ ಮಗ
ಪಿಎಸ್​ಐ ಜಯಂತಿ, ಆರೋಪಿ ಮಧುಸೂದನ್​
ಬಿ ಮೂರ್ತಿ, ನೆಲಮಂಗಲ
| Edited By: |

Updated on: Nov 08, 2024 | 11:26 AM

Share

ನೆಲಮಂಗಲ, ನವೆಂಬರ್​ 08: ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್​ಐ (PSI) ಮೇಲೆ ಹಲ್ಲೆ ಮಾಡಿದ್ದಾನೆ. ಮಧಸೂದನ್​ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್​ಔಟ್ ಆಗಿರುವ ಮಧುಸೂದನ್​ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲದ (Nelamangala) ಮುಕ್ತಿನಾಥೇಶ್ವರ ಬಡಾವಣೆಯಲ್ಲಿ ವಾಸವಾಗಿದ್ದಾನೆ.

ಮಧುಸೂದನ್​ ಕೆಲಸಕ್ಕೆ ಹೋಗದೆ ಮನೆಯಲ್ಲೇ ಕಾಲ ಕಳೆಯುತ್ತಿದ್ದನು. ಈ ವಿಚಾರವಾಗಿ ತಾಯಿ ಸುಶೀಲಮ್ಮ ಮತ್ತು ಮಧುಸೂದನ್​ ನಡುವೆ ಗಲಾಟೆ ನಡೆದಿದೆ. ಬಳಿಕ, ತಾಯಿ ಸುಶೀಲಮ್ಮ ಮಗನ ವಿರುದ್ಧ ನೆಲಮಂಗಲ ಟೌನ್​ ಠಾಣೆಗೆ ದೂರು ನೀಡಿದ್ದಾರೆ.

ನಂತರ, ಪೊಲೀಸರು ವಿಚಾರಣೆಗೆಂದು ಇಬ್ಬರನ್ನೂ ಠಾಣೆಗೆ ಕರೆಸಿದ್ದಾರೆ. ಪೊಲೀಸ್​ ಠಾಣೆಯಲ್ಲೇ ತಾಯಿ ಮತ್ತು ಮಗ ಜಗಳವಾಡಲು ಆರಂಭಿಸಿದ್ದಾರೆ. ಈ ವೇಳೆ ಮಹಿಳಾ ಪಿಎಸ್​ಐ ಜಯಂತಿ, ಮಧುಸೂದನ್​ಗೆ ಗದರಿಸಿ ಒಂದೇಟು ಹೊಡೆದಿದ್ದಾರೆ.

ಇದನ್ನೂ ಓದಿ: ಕಾರ್ ಪಾರ್ಕಿಂಗ್​ಗೆ ಅಡ್ಡಿಯಾಗಿದೆ ಅಂತ ಮರ ಕಡಿಸಿದ ಮನೆ ಮಾಲೀಕ

ಈ ಸಂದರ್ಭದಲ್ಲಿ ಸುಶೀಲಮ್ಮ, “ದೂರು ಕೊಟ್ಟು ಪೊಲೀಸರಿಂದ ಹೊಡೆಸಿದರೇ, ಪೊಲೀಸರಿಗೆ ತಿರುಗಿ ಹೊಡೆಯುವೆ ಅಂತ ಹೇಳುತ್ತಿದ್ದಿಯಲ್ಲ. ಈಗ ಹೊಡಿ ನೋಡೋಣ. ನೀನು ಗಂಡಸಾಗಿದ್ದರೆ ಪೊಲೀಸರಿಗೆ ಹೊಡೆದು ತೋರಿಸು. ಹೊಡಿ ಈಗ ಪೊಲೀಸರಿಗೆ ನೋಡೋಣ” ಎಂದು ಮಗ ಮಧುಸೂದನ್​ನನ್ನು ಪ್ರಚೋದಿಸಿದ್ದಾಳೆ. ಪ್ರಚೋದನೆಗೊಂಡ ಮಧುಸೂದನ್​ ಮಹಿಳಾ ಪಿಎಸ್​ಐ ಜಯಂತಿ ಮೇಲೆ ಹಲ್ಲೆ ಮಾಡಿದ್ದಾನೆ. ಮಹಿಳಾ ಪಿಎಸ್​​ಐ ಜಯಂತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ರಾತ್ರಿ 10 ಗಂಟೆ ಸುಮಾರು ನೆಲಮಂಗಲ ಟೌನ್ ಠಾಣೆಯಲ್ಲಿ ಘಟನೆ ನಡೆದಿದೆ. ಮಧುಸೂದನ್​ ವಿರುದ್ಧ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಧುಸೂದನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮಧುಸೂದನ್​ ವಿರುದ್ಧ ಕಲಂ-132 ,121(1 ),121(2),352, 54, ಜೊತೆಗೆ 3(5) ಬಿಎನ್ಎಸ್ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ