ನೆಲಮಂಗಲ: ಹಲಸಿನಹಣ್ಣು ಕೀಳಲು ಹೋಗಿ ಮರದಿಂದ ಬಿದ್ದು ಬಿಎಂಟಿಸಿ ಚಾಲಕ ಸಾವು
ಹಲಸಿನ ಹಣ್ಣು ಕೀಳುವಾಗ ಮರದ ಮೇಲಿಂದ ಬಿದ್ದು ಬಿಎಂಟಿಸಿ(BMTC) ಬಸ್ ಚಾಲಕ ಸಾವನ್ನಪ್ಪಿದ ಧಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ, ಮಾ.30: ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ಹಲಸಿನ ಹಣ್ಣು ಕೀಳುವಾಗ ಮರದ ಮೇಲಿಂದ ಬಿದ್ದು ಬಿಎಂಟಿಸಿ(BMTC) ಬಸ್ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಜುನಾಥ್(43) ಮೃತ ರ್ದುದೈವಿ. ಇವರು ಕಳೆದ 15 ವರ್ಷಗಳಿಂದ ಪೀಣ್ಯದ ಬಿಎಂಟಿಸಿ ಡಿಪೋ 9ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಹಿಟ್ ಆ್ಯಂಡ್ ರನ್ಗೆ ಮಾವ, ಅಳಿಯ ಬಲಿ
ಹಾಸನ: ಜಿಲ್ಲೆಯಲ್ಲಿ ಹಿಟ್ ಆ್ಯಂಡ್ ರನ್ಗೆ ಮಾವ ಮತ್ತು ಅಳಿಯ ಕೊನೆಯುಸಿರೆಳೆದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾಸ್ನಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ನಾಗೇನಹಳ್ಳಿ ನಿವಾಸಿ ಮಧು(35) ಹಾಗೂ ಬೇಲೂರು ತಾಲೂಕಿನ ದೇವಿಹಳ್ಳಿ ನಿವಾಸಿ ಜವರಯ್ಯ(65) ಮೃತ ರ್ದುದೈವಿಗಳು. ಬೆಂಗಳೂರಿನಿಂದ ಮಾವ, ಪತ್ನಿ ಜೊತೆ ಕಾರಿನಲ್ಲಿ ಬರುತ್ತಿದ್ದ ಮಧು, ಶೆಟ್ಟಿಹಳ್ಳಿ ಬೈಪಾಸ್ನಲ್ಲಿ ಕಾರಿನ ಟೈರ್ ಪಂಚರ್ ಆದ ಹಿನ್ನೆಲೆ ಟೈರ್ ಬದಲಾಯಿಸುವಾಗ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಬೆಂಗಳೂರು: BMTC ಬಸ್ ಹರಿದು ಇಂಜಿನಿಯರ್ ವಿದ್ಯಾರ್ಥಿ ಸಾವು, 10 ದಿನಗಳಲ್ಲಿ ಬಿಎಂಟಿಸಿಗೆ ಮೂರನೇ ಬಲಿ
ಹೌದು, ಈ ವೇಳೆ ಬೆಂಗಳೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಮಧು ಸ್ಥಳದಲ್ಲೇ ಸಾವನ್ನಪ್ಪಿದರೆ, ತೀವ್ರವಾಗಿ ಗಾಯಗೊಂಡಿದ್ದ ಜವರಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಧು ಪತ್ನಿ ಗೀತಾಗೆ ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇತ್ತ ಲಾರಿ ನಿಲ್ಲಿಸದೆ ಚಾಲಕ ಎಸ್ಕೇಪ್ ಆಗಿದ್ದಾನೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ