ಪ್ರತ್ಯೇಕ ಘಟನೆ: ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ, ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ವಂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್​ಪೇಟೆಯಲ್ಲಿ 17 ವರ್ಷದ ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಮದುವೆ ಆಗುವುದಾಗಿ 24 ವರ್ಷದ ದಲಿತ ಯುವತಿಯನ್ನು ನಂಬಿಸಿ ಅತ್ಯಾಚಾರ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರತ್ಯೇಕ ಘಟನೆ: ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ, ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ವಂಚನೆ
ಪ್ರತ್ಯೇಕ ಘಟನೆ: ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ, ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ವಂಚನೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 30, 2024 | 9:18 PM

ನೆಲಮಂಗಲ, ನವೆಂಬರ್​ 30: 17 ವರ್ಷದ ಬಾಲಕಿ (Girl) ಮೇಲೆ ಬಲವಂತವಾಗಿ ದೈಹಿಕ ಶಿಕ್ಷಕನಿಂದ ಅತ್ಯಾಚಾರ ಎಸಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆನಲ್ಲಿ ನಡೆದಿದೆ. 22 ವರ್ಷದ ದೈಹಿಕ ಶಿಕ್ಷಕ ದಾದಾಪೀರ್​ನಿಂದ ಅತ್ಯಾಚಾರ ಮಾಡಲಾಗಿದೆ. ಸಂತ್ರಸ್ತೆ ದೂರು ಆಧರಿಸಿ ದೈಹಿಕ ಶಿಕ್ಷಕನ ಬಂಧಿಸಲಾಗಿದೆ. ದಾಬಸ್​ಪೇಟೆ ಠಾಣೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.

ದೈಹಿಕ ಶಿಕ್ಷಕ ದಾದಾಪೀರ್​ ಬಾಲಕಿಯನ್ನು ನಂಬಿಸಿ ದೇವರಾಯನ ದುರ್ಗ ಬೆಟ್ಟಕ್ಕೆ ಕರೆದೊಯ್ದಿದ್ದ. ನಂತರ ತುಮಕೂರಿಗೆ ಕರೆದೊಯ್ದು ಲಾಡ್ಜ್​​ವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ. 10 ದಿನದ ನಂತರ ಮತ್ತೆ ಮನೆಗೆ ಕರೆಸಿಕೊಂಡು ಅತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ಬಾಯಿಬಿಟ್ಟರೆ ಕೊಲ್ಲುವುದಾಗಿ ಬೆದರಿಕೆ ಕೂಡ ಹಾಕಿದ್ದ.

ಮದುವೆ ಆಗುವುದಾಗಿ ನಂಬಿಸಿ ಲವ್, ಸೆಕ್ಸ್, ದೋಖಾ

ಮತ್ತೊಂದು ಪ್ರಕರಣದಲ್ಲಿ ಮದುವೆ ಆಗುವುದಾಗಿ 24 ವರ್ಷದ ದಲಿತ ಯುವತಿಯನ್ನು ನಂಬಿಸಿ ಅತ್ಯಾಚಾರ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಕಾಂತ್​ ಬಂಧತ ಆರೋಪಿ.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ಮೋಸ: ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಕುಳಿತ ಮಹಿಳೆ

ಸೊಂಡೆಕೊಪ್ಪಕ್ಕೆ ಮನೆ ಸಾಮಾನು ತರಲು ಹೋಗಿದ್ದಾಗ ಯುವತಿಗೆ ಶ್ರೀಕಾಂತ್ ಪರಿಚಯವಾಗಿದೆ. ಫೋನ್ ನಂಬರ್‌ ಪಡೆದು ಪ್ರೀತಿಸಿ ಮದುವೆಯಾಗುತ್ತೇನೆಂದು ನಂಬಿಸಿದ್ದ. ಬಳಿಕ ನೆಲಮಂಗಲದ ಲಾಡ್ಜ್​ಗೆ ಕರೆದೊಯ್ದು ಯುವತಿ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆ.

ದಲಿತ ಜಾತಿಯವಳು ನಾನು ಮದುವೆಯಾಗುವುದಿಲ್ಲ. ಎಂಜಾಯ್ ಮಾಡುವುದಷ್ಟೇ ನನ್ನ ಕೆಲಸ ಎಂದಿದ್ದ. ಇದೇ ವಿಷಯವಾಗಿ ಇಬ್ಬರ ನಡುವೆ ಗಲಾಟೆ ಆಗಿದೆ. ಬಳಿಕ ಯುವತಿಯನ್ನು ಲಾಡ್ಜ್​​ನಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದ. ಹೀಗಾಗಿ ನೆಲಮಂಗಲ ನಗರ ಪೊಲೀಸ್​ ಠಾಣೆಗೆ ಯುವತಿ ದೂರು ನೀಡಿದ್ದರು. ಇದೀಗ ಶ್ರೀಕಾಂತ್​ನನ್ನು ಬಂಧಿಸಿದ ಪೊಲೀಸರು ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು

ಇತ್ತೀಚಿಗೆ 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿತ್ತು. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರವೆಸಗಲಾಗಿತ್ತು. ವೃದ್ದನಿಗೆ ಗ್ರಾಮಸ್ಥರು ಹಲ್ಲೆ ಮಾಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್