AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್​​ ದರೋಡೆಗೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ

Nelamangala gold shop firing: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದಂಗಡಿ ಮಾಲೀಕನ ಮೇಲೆ ದರೋಡೆಕೋರ ಗ್ಯಾಂಗ್​​ ಫೈರಿಂಗ್ ಮಾಡಿ ಪರಾರಿ ಆಗಿರುವಂತಹ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್​ಪೇಟೆಯಲ್ಲಿ ನಡೆದಿದೆ. ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್​​ ದರೋಡೆಗೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ
ದರೋಡೆಗೆ ಯತ್ನImage Credit source: tv9 kannada
ಮಂಜುನಾಥ ಎಚ್​. ವಿ.
| Edited By: |

Updated on: Aug 06, 2026 | 4:38 PM

Share

ಮುಖ್ಯಾಂಶಗಳು

  • ದುಷ್ಕರ್ಮಿಗಳಿಂದ ಚಿನ್ನದಂಗಡಿ ದರೋಡೆಗೆ ಯತ್ನ
  • ನೆಲಮಂಗಲ ತಾಲೂಕಿನ ಡಾಬಸ್​ಪೇಟೆಯಲ್ಲಿ ನಡೆದ ಘಟನೆ
  • ಚಿನ್ನದಂಗಡಿ ಮಾಲೀಕನ ಮೇಲೆ ಫೈರಿಂಗ್

ನೆಲಮಂಗಲ, ಆಗಸ್ಟ್​ 06: ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ (firing) ನಡೆಸಿ ದರೋಡೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ (bengaluru rural) ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ನಡೆದಿದೆ. ದಾಬಸ್‌ಪೇಟೆಯ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದ್ದು, ದಾಳಿಯಲ್ಲಿ ಮಾಲೀಕ ಪುನ್ನಾರಾಮ್ ಗಾಯಗೊಂಡಿದ್ದಾರೆ. ಸದ್ಯ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಡೆದಿದ್ದೇನು?

ಬೊಲೆರೋ ಕಾರಿನಲ್ಲಿ ಆಗಮಿಸಿದ್ದ ಐದಾರು ಜನರ ತಂಡ, ಆಭರಣ ಖರೀದಿಸುವವರಂತೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿದೆ. ಬಳಿಕ ಚಿನ್ನಾಭರಣಗಳನ್ನು ದರೋಡೆ ಮಾಡಲು ಯತ್ನಿಸಿದ್ದು, ಈ ವೇಳೆ ಮಾಲೀಕ ಪುನ್ನಾರಾಮ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕೆರಳಿದ ದರೋಡೆಕೋರರು ಅವರ ಮೇಲೆ ಏಕಾಏಕಿ ಫೈರಿಂಗ್ ಮಾಡಿ ಪರಾರಿ ಆಗಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ಗುಂಡಿನ ಸದ್ದು: ಬೆಚ್ಚಿಬಿದ್ದ ಅಪಾರ್ಟ್‌ಮೆಂಟ್‌ ಜನರು; ನಡೆದಿದ್ದೇನು?

ಇನ್ನು ಘಟನಾ ಸ್ಥಳ ಪರಿಶೀಲನೆ ವೇಳೆ ಅಂಗಡಿಯಲ್ಲಿ 2 ಜೀವಂತ ಗುಂಡುಗಳು ಪತ್ತೆಯಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದು, ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಆಟೋ ಕದ್ದು ಪರಾರಿಯಾದ ಖದೀಮರು

ಮನೆ ಮುಂದೆ ನಿಲ್ಲಿಸಿದ್ದ ಆಟೋ ಕದ್ದು ಖದೀಮರು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಜಕ್ಕಸಂದ್ರ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಚಿಕ್ಕಮಗಳೂರು ನಿವಾಸಿ  ಸುನೀಲ್ ಅವರು 9 ತಿಂಗಳ ಹಿಂದಷ್ಟೇ ಹೊಸ ಆಟೋ ಖರೀದಿ ಮಾಡಿದ್ದರು.

ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಲಕ್ಷಾಂತರ ರೂ. ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ

ತಡರಾತ್ರಿ ಹೊಂಚುಹಾಕಿದ್ದ ಮೂವರು ಕಳ್ಳರು ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಆಟೋ ಕದ್ದು ಪರಾರಿ ಆಗಿದ್ದಾರೆ. ಕಳ್ಳರು ಆಟೋ ಕದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಂಜುನಾಥ ಎಚ್​. ವಿ.
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿಯ ಸಾಧ್ಯತೆ
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿಯ ಸಾಧ್ಯತೆ
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!
ಜನರಿಗೆ ಎರಡು ಶಾಕ್ ನೀಡಲಿದೆ ಸರ್ಕಾರ
ಜನರಿಗೆ ಎರಡು ಶಾಕ್ ನೀಡಲಿದೆ ಸರ್ಕಾರ
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು