AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಗರ್ಭಿಣಿ ಹೆಂಡತಿಗೆ ಬೇರೆ ಜಾತಿ ಎಂದು ಕಿರುಕುಳ: ಹೆತ್ತವರ ಮೇಲೆ ದೂರು ನೀಡಿದ ಮಗ

ನೆಲಮಂಗಲದಲ್ಲಿ ಅಂತರ-ಜಾತಿ ಪ್ರೇಮ ವಿವಾಹವಾದ ದಂಪತಿಗೆ ಪತಿಯ ಪೋಷಕರಿಂದ ಜಾತಿ ನಿಂದನೆ, ಕಿರುಕುಳ ಹಾಗೂ ಕೊಲೆ ಬೆದರಿಕೆ ಎದುರಾಗಿದೆ. 6 ತಿಂಗಳ ಗರ್ಭಿಣಿಯಾದ ಸೊಸೆಗೆ ಜೀವಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮಗ ಅಭಿಷೇಕ್ ತನ್ನ ಪತ್ನಿಯ ರಕ್ಷಣೆಗಾಗಿ ಸ್ವಂತ ತಂದೆ-ತಾಯಿ ವಿರುದ್ಧ ನೆಲಮಂಗಲ ಟೌನ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮನೆಯಲ್ಲಿ ಗರ್ಭಿಣಿ ಹೆಂಡತಿಗೆ ಬೇರೆ ಜಾತಿ ಎಂದು ಕಿರುಕುಳ: ಹೆತ್ತವರ ಮೇಲೆ ದೂರು ನೀಡಿದ ಮಗ
ಅತ್ತೆ - ಮಾವ ಕಿರುಕುಳ ಆರೋಪ
ಮಂಜುನಾಥ ಕೆಬಿ
| Edited By: |

Updated on: Apr 14, 2026 | 10:34 AM

Share

ನೆಲಮಂಗಲ, ಏ.14: ಪ್ರೀತಿಸಿ ಮದುವೆಯಾದ ಜೋಡಿಗೆ ಜಾತಿಯ ಹೆಸರಿನಲ್ಲಿ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್‌ನಲ್ಲಿ ಬೆಳಕಿಗೆ ಬಂದಿದೆ. ಸದ್ಯ 6 ತಿಂಗಳ ಗರ್ಭಿಣಿಯಾಗಿರುವ ಸೊಸೆಗೆ ಸ್ವಂತ ಅತ್ತೆ-ಮಾವನೇ ಜಾತಿ ನಿಂದನೆ ಮಾಡಿ ಜೀವಬೆದರಿಕೆ ಹಾಕಿದ್ದು, ಈ ಸಂಬಂಧ ದಂಪತಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಹೆತ್ತವರ ಮೇಲೆ ಸ್ವತಃ ಮಗನೇ ದೂರು ನೀಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ನೆಲಮಂಗಲದ ಸುಭಾಷ್ ನಗರದ ನಿವಾಸಿಗಳಾದ ಅಭಿಷೇಕ್ ಮತ್ತು ವಿದ್ಯಾಶ್ರೀ ಕಳೆದ ಎರಡು ವರ್ಷಗಳ ಹಿಂದೆ ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾಗಿ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಮನೆಯವರ ವಿರೋಧವಿದ್ದರೂ, ಎಂಟು ತಿಂಗಳ ಹಿಂದೆ ಈ ಜೋಡಿ ಕರಿ ಕಾಟೇರಮ್ಮ ದೇವಾಲಯದಲ್ಲಿ ಸರಳವಾಗಿ ಮದುವೆಯಾಗಿದ್ದರು.

ವಿದ್ಯಾಶ್ರೀ ಬೇರೆ ಜಾತಿಯವರು ಎಂಬ ಕಾರಣಕ್ಕೆ ಮದುವೆಯಾದ ದಿನದಿಂದಲೂ ಅಭಿಷೇಕ್ ಪೋಷಕರಾದ ಮುನಿಶಂಕರಯ್ಯ ಮತ್ತು ಆನಂದಮ್ಮ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದೀಗ ವಿದ್ಯಾಶ್ರೀ 6 ತಿಂಗಳ ಗರ್ಭಿಣಿಯಾಗಿದ್ದು, ಇಂತಹ ಸಂದರ್ಭದಲ್ಲೂ ಆಕೆಯನ್ನು ಮನೆಗೆ ಸೇರಿಸಿಕೊಳ್ಳದೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: “ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್

ತಮ್ಮ ಪ್ರೀತಿಯ ಸಂಕೇತವಾಗಿ ಮಗು ಬರಲಿರುವ ಈ ಸುಸಂದರ್ಭದಲ್ಲಿ ಪತ್ನಿಯ ರಕ್ಷಣೆಗಾಗಿ ಪತಿ ಅಭಿಷೇಕ್ ಸಾಹಸಕ್ಕೆ ಮುಂದಾಗಿದ್ದಾರೆ. ಸ್ವಂತ ತಂದೆ-ತಾಯಿ ವಿರುದ್ಧವೇ ಅವರು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಈ ಸಂಬಂಧ ಎನ್‌ಸಿಆರ್ (NCR) ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ
ಬಸ್ ತಂಗುದಾಣ ವಿರೂಪಗೊಳಿಸಿ ಬೇಕರಿ ನಿರ್ಮಾಣ
ಬಸ್ ತಂಗುದಾಣ ವಿರೂಪಗೊಳಿಸಿ ಬೇಕರಿ ನಿರ್ಮಾಣ
ಸ್ಯಾಂಡಿ ಸ್ವಾರ್ಥಿ; ನೇರವಾಗಿ ಹೇಳಿದ ಕಿಚ್ಚ ಸುದೀಪ್
ಸ್ಯಾಂಡಿ ಸ್ವಾರ್ಥಿ; ನೇರವಾಗಿ ಹೇಳಿದ ಕಿಚ್ಚ ಸುದೀಪ್
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು