AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ

ಪರ ಸ್ತ್ರೀ ವ್ಯಾಮೋಹದಿಂದ ಪತ್ನಿಗೆ ಕಿರುಕುಳ ನೀಡಿ, ವಿಚ್ಛೇದನಕ್ಕಾಗಿ ಒತ್ತಾಯಿಸುತ್ತಿರುವ ಪತಿಯ ವಿರುದ್ಧ ಪತ್ನಿ ಡಿವೈಎಸ್ಪಿ ಮೊರೆ ಹೋಗಿದ್ದಾರೆ. ನೆಲಮಂಗಲದ ದಾಬಸ್‌ಪೇಟೆ ವ್ಯಾಪ್ತಿಯ ಬೈಲಪ್ಪನ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, 200 ಗ್ರಾಂ ಒಡವೆ ಹಿಂತಿರುಗಿಸದೆ ಪತಿ ಸತಾಯಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ನೆಲಮಂಗಲ: ಪರ ಸ್ತ್ರೀ ವ್ಯಾಮೋಹಕ್ಕಾಗಿ ಪತ್ನಿಗೆ ಕಿರುಕುಳ, ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿದ ಮಹಿಳೆ
ಸಂತ್ರಸ್ತೆ ಜತೆ ಆರೋಪಿ ಪುನೀತ್Image Credit source: tv9
ಗಣಪತಿ ಶರ್ಮಾ
|

Updated on: Apr 16, 2026 | 10:49 AM

Share

ನೆಲಮಂಗಲ, ಏಪ್ರಿಲ್ 16: ಪರ ಸ್ತ್ರೀ ವ್ಯಾಮೋಹಕ್ಕೆ ಬಿದ್ದ ಪತಿಯೊಬ್ಬ ತನ್ನ ಪತ್ನಿಗೆ ವಿಚ್ಛೇದನ ನೀಡಲು ಮುಂದಾಗಿ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವ ಘಟನೆ ನೆಲಮಂಗಲ (Nelamangala) ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯ ನಿವಾಸಿ ಪುನೀತ್ ಕುಮಾರ್ ಹಾಗೂ ಪವಿತ್ರಾ ಅವರ ವಿವಾಹ ಐದು ವರ್ಷಗಳ ಹಿಂದೆ ನಡೆದಿತ್ತು. ಪವಿತ್ರಾ ಅವರ ಪೋಷಕರು ಮಗಳ ಮದುವೆಗೆ 200 ಗ್ರಾಂ ಚಿನ್ನಾಭರಣ ನೀಡಿ ಅದ್ದೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ಮದುವೆಯಾದ ಒಂದು ವರ್ಷ ದಂಪತಿಗಳು ಅನ್ಯೋನ್ಯವಾಗಿದ್ದರು. ಆದರೆ, ನಂತರದ ದಿನಗಳಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಜಗಳ ಶುರುವಾಗಿದ್ದು, ಪುನೀತ್ ಪತ್ನಿಯ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದ್ದ ಎನ್ನಲಾಗಿದೆ.

ಪರ ಸ್ತ್ರೀ ಸಂಬಂಧವೇ ವಿವಾದಕ್ಕೆ ಕಾರಣ

ಈ ಮಧ್ಯೆ ಪುನೀತ್ ಬೇರೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ ಎನ್ನಲಾಗಿದ್ದು, ಇದೇ ಕಾರಣಕ್ಕೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಇದೆ. ಪತಿಯ ಕಿರುಕುಳ ತಾಳಲಾರದೆ ಪವಿತ್ರಾ ಕಳೆದ ನಾಲ್ಕು ವರ್ಷಗಳಿಂದ ದಾಬಸ್‌ಪೇಟೆಯಲ್ಲಿರುವ ತನ್ನ ಅಜ್ಜಿ-ತಾತನ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಈ ನಡುವೆ ಪುನೀತ್ ಪತ್ನಿಗೆ ವಿಚ್ಛೇದನ ನೀಡುವಂತೆ ಒತ್ತಾಯಿಸುತ್ತಿದ್ದಾನೆ ಎನ್ನಲಾಗಿದೆ.

ಒಡವೆ ಕೊಡದೆ ಸತಾಯಿಸುತ್ತಿರುವ ಪತಿ

ಪವಿತ್ರಾ ಅವರ 200 ಗ್ರಾಂ ಒಡವೆಗಳು ಪತಿಯ ಮನೆಯಲ್ಲೇ ಇವೆ. ಸಮಾರಂಭಗಳಿಗೆ ಹೋಗಲು ಒಡವೆ ಕೇಳಿದಾಗ ಪುನೀತ್ ಮತ್ತು ಆತನ ಕುಟುಂಬಸ್ಥರು ಒಡವೆ ನೀಡದೆ ಗಲಾಟೆ ಮಾಡುತ್ತಿದ್ದಾರೆ ಎಂದು ಸಂತ್ರಸ್ತೆ ಪವಿತ್ರಾ ದೂರಿದ್ದಾರೆ. ಈ ಬಗ್ಗೆ ದಾಬಸ್‌ಪೇಟೆ ಪೊಲೀಸರಿಗೆ ದೂರು ನೀಡಿದ್ದರೂ ಸರಿಯಾಗಿ ಸ್ಪಂದಿಸದ ಕಾರಣ, ಅನಾಥೆಯಾಗಿರುವ ತನಗೆ ನ್ಯಾಯ ಕೊಡಿಸುವಂತೆ ಪವಿತ್ರಾ ಅವರು ನೆಲಮಂಗಲ ಡಿವೈಎಸ್ಪಿ ಕಚೇರಿಯ ಮೆಟ್ಟಿಲೇರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವರದಿ: ಮಂಜುನಾಥ್, ಟಿವಿ9 ನೆಲಮಂಗಲ

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್