AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ: ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಹಳೇ ನಿಜಗಲ್ ಗ್ರಾಮದಲ್ಲಿ ಮಹಿಳೆಯ ಅಸ್ಥಿ ಪಂಜರ ಪತ್ತೆ ಆಗಿರುವ ಘಟನೆ ನಡೆದಿದೆ. ಅಕ್ರಮ ಸಂಬಂಧವೇ ಕೃತ್ಯಕ್ಕೆ ಕಾರಣವಾಗಿರಬಹುದು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ: ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?
ಯಮುನಾImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: Apr 16, 2026 | 7:36 PM

Share

ನೆಲಮಂಗಲ, ಏಪ್ರಿಲ್​ 16: ಮಹಿಳೆಯೊಬ್ಬರ (Woman) ಅಸ್ಥಿಪಂಜರ (Skeleton) ಪತ್ತೆಯಾದ ಘಟನೆ ನೆಲಮಂಗಲ ತಾಲೂಕಿನ ಗಡಿ ಗ್ರಾಮವಾದ ಹಳೇ ನಿಜಗಲ್‌ನಲ್ಲಿ ಗ್ರಾಮದಲ್ಲಿ ನಡೆದಿದೆ. ಅಡಿಕೆ ತೋಟದ ಪಕ್ಕದಲ್ಲಿ ಮಹಿಳೆಯ ತಲೆ ಬುರುಡೆ, ಕೈ-ಕಾಲುಗಳ ಕೆಲ ಮೂಳೆಗಳು ಪತ್ತೆ ಆಗಿವೆ. ಯಮುನಾ (35) ಮೃತ ಮಹಿಳೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಸದ್ಯ ಇವರ ಅಸ್ಥಿಪಂಜರ ಪತ್ತೆಯಾಗಿದೆ. ಅಕ್ರಮ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ನಡೆದಿದ್ದೇನು?

ಮೃತ ಮಹಿಳೆ ಯಮುನಾ ತುಮಕೂರು ನಿವಾಸಿ. 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ್ ಎಂಬುವವರನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ, ಎಂಟು ವರ್ಷಗಳ ಹಿಂದೆ ರಾಘವೇಂದ್ರ ಎಂಬಾತನ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ ಯಮುನಾ, ಪತಿಯನ್ನು ಬಿಟ್ಟು ಐದು ವರ್ಷಗಳ ಕಾಲ ಆತನೊಂದಿಗೆ ದೊಡ್ಡಬಳ್ಳಾಪುರದಲ್ಲಿ ವಾಸವಿದ್ದರು.

ಇದನ್ನೂ ಓದಿ: ವಿಜಯಪುರದಲ್ಲೊಂದು ಅಮಾನವೀಯ ಘಟನೆ: ನೋಡಲು ತನ್ನಂತಿಲ್ಲ ಎಂದು ಮಗನನ್ನೇ ಕೊಂದ ತಂದೆ

ತನ್ನ ತಪ್ಪಿನ ಅರಿವಾಗಿ ಎರಡು ವರ್ಷಗಳ ಹಿಂದೆ ಯಮುನಾ ಮರಳಿ ಪತಿಯ ಮನೆಗೆ ಬಂದು ಜೀವನ ನಡೆಸುತ್ತಿದ್ದರು. ಆದರೆ, ಕಳೆದ ಮಾರ್ಚ್ 21ರಂದು ಯಮುನಾ ಹುಟ್ಟುಹಬ್ಬ ಇತ್ತು. ಹೀಗಾಗಿ ಭೇಟಿ ಮಾಡುವಂತೆ ರಾಘವೇಂದ್ರ ಒತ್ತಾಯಿಸಿದ್ದ. ಕೆಲಸ ಮುಗಿಸಿ ಆತನನ್ನು ಭೇಟಿ ಮಾಡಲು ಹೋದ ಯಮುನಾ ಅಂದಿನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ತುಮಕೂರು ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು.

ಅಸ್ಥಿಪಂಜರವಾಗಿ ಪತ್ತೆ

ಹಳೇ ನಿಜಗಲ್ ಗ್ರಾಮದ ಅಡಿಕೆ ತೋಟದ ಪಕ್ಕದಲ್ಲಿ ತಲೆಬುರುಡೆ ಹಾಗೂ ಕೈಕಾಲುಗಳ ಮೂಳೆಗಳು ಪತ್ತೆಯಾಗಿವೆ. ಮೂಳೆಗಳ ಪಕ್ಕದಲ್ಲೇ ಮಹಿಳೆಯ ಬ್ಯಾಗ್ ಹಾಗೂ ಐಡಿ ಕಾರ್ಡ್ ಸಿಕ್ಕಿದ್ದರಿಂದ, ಯಮುನಾ ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಬಂದ ಕುಟುಂಬಸ್ಥರು ಮೃತದೇಹವನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: 6 ಸುತ್ತು ಫೈರಿಂಗ್ ಮಾಡಿ ಗ್ರಾ.ಪಂ ಸದಸ್ಯನ ಹತ್ಯೆ

ಸ್ಥಳಕ್ಕೆ ಡಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ರಾಘವೇಂದ್ರ ಎಂಬಾತನೇ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಅಡಿಕೆ ತೋಟದ ಬಳಿ ಎಸೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ವರದಿ: ಮಂಜುನಾಥ್​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More