AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಪ್ರೇಯಸಿಯೊಂದಿಗಿನ ಕಾಮದಾಟಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದ ಗೆಳೆಯ

ನೆಲಮಂಗಲದಲ್ಲಿ ನಡೆದ ವಿಜಯ್ ಕೊಲೆ ಪ್ರಕರಣವನ್ನು ಪೊಲೀಸರು 48 ಗಂಟೆಯೊಳಗೆ ಭೇದಿಸಿದ್ದಾರೆ. ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರೇಯಸಿಯೊಂದಿಗಿನ ಕಾಮದ ಆಟಕ್ಕೆ ಕೊಲೆ ಆರೋಪಿ ಧನಂಜಯ್ ತನ್ನ ಬಾಲ್ಯ ಸ್ನೇಹಿತ ವಿಜಯ್​​ನನ್ನೇ ಕೊಲೆ ಮಾಡಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಪ್ರೇಯಸಿಯೊಂದಿಗಿನ ಕಾಮದಾಟಕ್ಕೆ ಬಾಲ್ಯ ಸ್ನೇಹಿತನನ್ನೇ ಕೊಂದ ಗೆಳೆಯ
ಆರೋಪಿ ಆಶಾ, ಧನಂಜಯ್​
ವಿವೇಕ ಬಿರಾದಾರ
|

Updated on: Aug 13, 2025 | 10:29 PM

Share

ನೆಲಮಂಗಲ, ಆಗಸ್ಟ್​ 13: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangala) ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಜನಪ್ರಿಯ ಲೇಔಟ್​ನಲ್ಲಿ ಸೋಮವಾರ (ಆ. 11) ರಾತ್ರಿ ವಿಜಯ್ ಎಂಬುವರನ್ನು ಕೊಲೆ ಮಾಡಲಾಗಿತ್ತು. ಕೊಲೆ ನಡೆದು 48 ಗಂಟೆಯಲ್ಲಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಧನಂಜಯ್, ರಮೇಶ್, ವಿವೇಕ್, ಸಾಗರ್, ಹೇಮಂತ್, ರೋಹಿತ್, ವಿಜಯ್ ​ ಪತ್ನಿ ಆಶಾ ಬಂಧಿತ ಆರೋಪಿಗಳು.

ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಧನುಂಜಯ್​ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇತ್ತ ತಟಸ್ಥವಾಗಿದ್ದ ಪತ್ನಿ ಆಶಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಪ್ರಣಯರಾಜ ಧನಂಜಯ್ ಜೊತೆಗಿನ ಲವ್ವಿಡವ್ವಿ, ಕೈ ಮೇಲೆ ಹಚ್ಚೆ, ಫೋನ್​ನಲ್ಲಿದ್ದ ಪೋಟೋಗಳು ಪತ್ತೆಯಾಗಿದ್ದವು. ಆದರೆ, ಕೊಲೆ ಬಗ್ಗೆ ತನಗೆ ಏನೂ ಗೊತ್ತಿಲ್ಲ ಅಂತ ಆಶಾ ಹೇಳಿದ್ದಳು.

ಬಳಿಕ, ಪೊಲೀಸರು ಆರೋಪಿ ಧನುಂಜಯ್​ನನ್ನು ಪತ್ತೆ ಹಚ್ಚಿ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಯಲಾಗಿದೆ. “ನಾನು (ಧನಂಜಯ್​) ಮತ್ತು ವಿಜಯ್ ​ಬಾಲ್ಯ ಸ್ನೇಹತರು. ವಿಜಯ್ ​ ಪತ್ನಿ, ಆಶಾ ಜೊತೆಯಲ್ಲಿ ಕರೆದುಕೊಂಡು ಹೋಗು ಅಂತ ನನಗೆ ಹೇಳುತ್ತಿದ್ದಳು. ನಿನ್ನ ಜೊತೆಗೆ ಬಂದುಬಿಡುತ್ತೇನೆ ಅಂತಿದ್ಲು. ನನ್ನ ಗಂಡನನ್ನು ಏನಾದರೂ ಮಾಡಿಕೊ. ನಿನ್ನ ಜೊತೆಗೆ ಬರುತ್ತಿದ್ದೇನೆ ಅಂತಿದ್ಲು. ಅಲ್ಲದೇ, ನನ್ನ (ಧನಂಜಯ್) ತಾಯಿಗೆ, ವಿಜಯ್ ​ ಬೆದರಿಕೆ ಹಾಕಿದ್ದನು. “ನಿನ್ನ ಮಗನನ್ನು ಬಿಡುವುದಿಲ್ಲ ಕೊಲೆ ಮಾಡುತ್ತೇನೆ” ಅಂತ ಅಂದಿದ್ದನು. ಇದೇ ಕಾರಣಕ್ಕೆ ನಾನು (ಧನಂಜಯ್)​ ಸ್ನೇಹಿತರನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿದೆ” ಎಂದು ಬಾಯಿ ಬಿಟ್ಟಿದ್ದಾನೆ.

ಇದನ್ನೂ ಓದಿ: ಪತಿಯ ಕೊಲೆ ಅಳಿಯನ ತಲೆಗೆ ಕಟ್ಟಿ ಪ್ರಿಯಕರನ ಜೊತೆ ಜಾಲಿಯಾಗಿರಲು ಪ್ಲಾನ್​ ಮಾಡಿದ್ದ ಪತ್ನಿ

ಸದ್ಯ ಪೊಲೀಸರು ಏಳೂ ಮಂದಿ ಆರೋಪಿಗಳನ್ನ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು, ಆರೋಪಿ ಆಶಾ ವಿಚಾರಣೆ ವೇಳೆ ಏನನ್ನೂ ಹೇಳದೆ ತಟಸ್ಥವಾಗಿದ್ದು, ಬೇರೆ ಬೇರೆ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

ವರದಿ: ಮಂಜುನಾಥ್ ಟಿವಿ9 ನೆಲಮಂಗಲ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ