AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನಿಗೂಢವಾಗಿ ನವ ವಿವಾಹಿತೆ ಸಾವು

ನವ ವಿವಾಹಿತೆಯೋರ್ವರು ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಪತಿಯೇ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಮದುವೆಯಾಗಿ ತಿಂಗಳು ಕಳೆಯುವದರ ಒಳಗೆಯೇ ಆತ ಆಕೆಗೆ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ರಾಜಿ ಪಂಚಾಯ್ತಿಯೂ ನಡೆದಿತ್ತು. ಹೀಗಿದ್ದರೂ ಆತ ಮತ್ತೆ ಆಕೆ ಮೇಲೆ ಹಲ್ಲೆ ನಡೆಸಿದ್ದ ಎಂದು ಯುವತಿಯ ಹೆತ್ತವರು ಆರೋಪಿಸಿದ್ದಾರೆ.

ನೆಲಮಂಗಲ: ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನಿಗೂಢವಾಗಿ ನವ ವಿವಾಹಿತೆ ಸಾವು
ನವ ವಿವಾಹಿತೆ ಸಾವು
ಮಂಜುನಾಥ ಕೆಬಿ
| Edited By: |

Updated on: Dec 25, 2025 | 12:39 PM

Share

ನೆಲಮಂಗಲ, ಡಿಸೆಂಬರ್​​ 25: ಮದುವೆಯಾಗಿ ಒಂದು ತಿಂಗಳು ಕಳೆಯುವ ಒಳಗೆ ನವ ವಿವಾಹಿತೆ ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಐಶ್ವರ್ಯ (26) ಮೃತ ಯುವತಿಯಾಗಿದ್ದು, ಗಂಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪೋಷಕರು ಆರೋಪಿಸಿದ್ದಾರೆ. 27 ದಿನಗಳ ಹಿಂದೆಯಷ್ಟೇ ಲಿಖಿತ್ ಸಿಂಹ ಜೊತೆ ಐಶ್ವರ್ಯ ಮದುವೆ ನಡೆದಿತ್ತು. ಸುಂದರ ಸಂಸಾರದ ಕನಸು ಕಂಡಿದ್ದ ಐಶ್ವರ್ಯ, ಸಾಂಸಾರಿಕ ಬದುಕನ್ನು ಸರಿಯಾಗಿ ಆರಂಭಿಸುವ ಮುನ್ನವೇ ಪ್ರಾಣ ಕಳೆದುಕೊಂಡಿದ್ದಾರೆ.

ಪತ್ನಿಗೆ ಕಿರುಕುಳ ಆರೋಪ

ಮೂಲತಃ ನಾಗಮಂಗಲ ನಿವಾಸಿಗಳಾದ ಮಮತಾ ಹಾಗೂ ಕೃಷ್ಣಮೂರ್ತಿ ದಂಪತಿಯ ಹಿರಿ ಮಗಳು ಐಶ್ವರ್ಯಳನ್ನು ಬಾಗಲಗುಂಟೆ ಪೈಪ್ ಲೈನ್ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಅವರಿಗೆ ಕೊಟ್ಟು ಮದುವೆ ಮಾಡಲಾಗಿತ್ತು. ಕುಟುಂಬಸ್ಥರ ಒಪ್ಪಿಗೆಯ ಮೇರೆಗೆ ಮದುವೆ ನಡೆದಿತ್ತಾದರೂ ತಿಂಗಳು ಕಳೆಯುವದರ ಒಳಗೆ ಐಶ್ವರ್ಯಗೆ ಕಿರುಕುಳ ನೀಡಲಾಗಿದೆ. ಇದೇ ವಿಚಾರವಾಗಿ ನಿನ್ನೆ ಬೆಳಿಗ್ಗೆ ಕುಟುಂಬಸ್ಥರು ರಾಜಿ ಪಂಚಾಯ್ತಿ ಮಾಡಿದ್ದರು. ಇಷ್ಟಾದ್ರೂ ಸಂಜೆ ಐಶ್ವರ್ಯಾಳ ಮೇಲೆ ಮತ್ತೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದಳೇ ಅಜ್ಜಿ? ಮರ್ಯಾದಾ ಹತ್ಯೆ ಶಂಕೆ

ನಿನ್ನೆ ಸಂಜೆ ವೇಳೆಗೆ ಲಿಖಿತ್​​ ತಮ್ಮ ಕರೆ ಮಾಡಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ಮನೆಗೆ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಆದರೆ ಬಾಗಿಲು ಒಡೆಯದ ಪರಿಣಾಮ, ಗಂಡನೇ ನೇಣುಹಾಕಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,  ಐಶ್ವರ್ಯ ಪತಿ ಲಿಖಿತ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.