ನೆಲಮಂಗಲ: ಬಾಯ್ಲರ್ ಸ್ಫೋಟ: ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವು, ಮತ್ತೊಬ್ಬನಿಗೆ ಗಾಯ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 26, 2023 | 4:23 PM

Nelamangala News: ಬಾಯ್ಲರ್ ಸ್ಫೋಟವಾಗಿ ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ವ್ಯಾಪ್ತಿಯ ದಾಬಸ್​ಪೇಟೆ ಕೈಗಾರಿಕಾ ಪ್ರದೇಶದ ಆರ್ಗ್ಯಾನಿಕ್ ಆರೋಮೆಟಿಕ್ಸ್ ಕಂಪನಿಯಲ್ಲಿ ದುರ್ಘಟನೆ ಸಂಭವಿಸಿದೆ. ದಾಬಸ್​ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. 

ನೆಲಮಂಗಲ: ಬಾಯ್ಲರ್ ಸ್ಫೋಟ: ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವು, ಮತ್ತೊಬ್ಬನಿಗೆ ಗಾಯ
ಬಾಯ್ಲರ್ ಸ್ಫೋಟ
Follow us on

ನೆಲಮಂಗಲ, ಅಕ್ಟೋಬರ್​​​ 26: ಬಾಯ್ಲರ್ ಸ್ಫೋಟ (Boiler explosion) ವಾಗಿ ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ವ್ಯಾಪ್ತಿಯ ದಾಬಸ್​ಪೇಟೆ ಕೈಗಾರಿಕಾ ಪ್ರದೇಶದ ಆರ್ಗ್ಯಾನಿಕ್ ಆರೋಮೆಟಿಕ್ಸ್ ಕಂಪನಿಯಲ್ಲಿ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ದಾಸರಹಳ್ಳಿಯ ಚಿಗಾಮಲ್ಲಪ್ಪ ಅಲಿಯಾಸ್ ಮಂಜಪ್ಪ(35) ಮೃತ ವ್ಯಕ್ತಿ. 1 ವರ್ಷದ ಹಿಂದೆ ಕೆಲಸಕ್ಕೆ ಸೇರಿದ್ದರು. ಕಾರ್ಮಿಕ ಮನೋಜ್​ಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ದಾಬಸ್​ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಜೋಯಿಡಾದಲ್ಲಿ ಜಿಂಕೆ ಕೊಂಬುಗಳ ಜಪ್ತಿ, ಓರ್ವ ವ್ಯಕ್ತಿಯ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಜೋಯಿಡಾದ ಶಿವಾಜಿ ವೃತ್ತದ ಮನೆಯಲ್ಲಿ ಜಿಂಕೆಯ ಕೊಂಬುಗಳು ಪತ್ತೆಯಾಗಿದ್ದು, ಓರ್ವನ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ದಾಳಿ ಮಾಡಿ, ಜಿಂಕೆಯ ಕೋಡುಗಳು ವಶಕ್ಕೆ ಪಡೆಯಲಾಗಿದೆ. ಪ್ರಕಾಶ್ ನಾಯ್ಕ್ ಬಂಧಿತ ವ್ಯಕ್ತಿ.

ಇದನ್ನೂ ಓದಿ: Gadag crime: ಪ್ರೇಮ ವಿವಾಹವಾಗಿದ್ದ ವೈದ್ಯೆ ಆತ್ಮಹತ್ಯೆ: ಮಗಳ ಸಾವಿಗೆ ವೈದ್ಯ ಗಂಡನೇ ಕಾರಣ ಅಂತ ಪೋಷಕರ ಆರೋಪ, ನಡೆದಿದ್ದೇನು?

ಆರೋಪಿ ಬಳಿ ಹುಲಿ ಉಗುರು ಕೂಡ ಇರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ದಾಂಡೇಲಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಟ್ ಅವರ ನೇತೃತ್ವದಲ್ಲಿ ಆರೋಪಿಯ ವಿಚಾರಣೆ ಮಾಡಲಾಗಿದ್ದು, ಪ್ರಕರಣದ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಾಗಿದೆ. ಜೊಯಿಡಾ ವಲಯ ಅರಣ್ಯಾಧಿಕಾರಿ ಮಹಮ್ಮದ್ ಶಫಿ, ಬರ್ಚಿ ವಲಯ ಅರಣ್ಯಾಧಿಕಾರಿ ಅಶೋಕ್ ಶೆಳ್ಳೆನ್ನವರ, ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿದ್ದರು.

ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಕಾರು ಉರುಳಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಮೂಡಿಗೆರೆ ತಾಲೂಕಿನ ಜನ್ನಾಪುರ ಬಳಿ ನಡೆದಿದೆ. ರಂಜನ್ (38) ಮೃತ ಚಾಲಕ. ತಡೆಗೋಡೆ ಇಲ್ಲದೆ ಏಕಾಏಕಿ ಪ್ರಪಾತಕ್ಕೆ ಕಾರು ಉರುಳಿ ಬಿದ್ದಿದೆ. ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ಅವಘಡ ಸಂಭವಿಸಿದೆ.

ಇದನ್ನೂ ಓದಿ: ಮಾರುತಿ ನಾಯ್ಕ್ ಆತ್ಮಹತ್ಯೆ ಕೇಸ್​: ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತಿರುವಿನಲ್ಲಿ ತಡೆಗೋಡೆ ನಿರ್ಮಿಸಲು ಹಲವು ಬಾರಿ ಮನವಿ ಮಾಡಲಾಗಿದೆ. ಈ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.