ನೆಲಮಂಗಲದಲ್ಲಿ ಹಿಟ್ ಆ್ಯಂಡ್ ರನ್​ಗೆ ವೃದ್ಧೆ ಬಲಿ

ನೆಲಮಂಗಲ(Nelamangala) ತಾಲೂಕಿನ ರಾಷ್ಟ್ರೀಯ ಹೆದ್ದಾರಿ4 ಆನಂದನಗರದಲ್ಲಿ ಹಿಟ್ ಆ್ಯಂಡ್ ರನ್​(Hit And Run)ಗೆ ವೃದ್ಧೆ ಬಲಿಯಾಗಿದ್ದಾರೆ. ರಸ್ತೆ ದಾಟುವ ವೇಳೆ ವೃದ್ದೆಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೆಲಮಂಗಲದಲ್ಲಿ ಹಿಟ್ ಆ್ಯಂಡ್ ರನ್​ಗೆ ವೃದ್ಧೆ ಬಲಿ
ನೆಲಮಂಗಲದಲ್ಲಿ ಹಿಟ್ ಆ್ಯಂಡ್ ರನ್​ಗೆ ವೃದ್ಧೆ ಬಲಿ
Edited By:

Updated on: Apr 07, 2024 | 1:27 PM

ಬೆಂಗಳೂರು ಗ್ರಾಮಾಂತರ, ಏ.07: ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ರಾಷ್ಟ್ರೀಯ ಹೆದ್ದಾರಿ4 ಆನಂದನಗರದಲ್ಲಿ ಹಿಟ್ ಆ್ಯಂಡ್ ರನ್​(Hit And Run)ಗೆ ವೃದ್ಧೆ ಬಲಿಯಾಗಿದ್ದಾರೆ. ರಸ್ತೆ ದಾಟುವ ವೇಳೆ ವೃದ್ದೆಗೆ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಿರೇಸಂದ್ರದ ನಾರಯಣಮ್ಮ(66) ಮೃತ ರ್ದುದೈವಿ. ಅಪಘಾತದ ಬಳಿಕ ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಆಸ್ಪತ್ರೆಯಿಂದ ವಾಪಸ್ ಮನೆಗೆ ತೆರಳುವಾಗ ಈ ಅವಘಡ ಸಂಭವಿಸಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಗೂಡ್ಸ್​​ ವಾಹನ ಡಿಕ್ಕಿ; ಟ್ರ್ಯಾಕ್ಟರ್​​ನಲ್ಲಿದ್ದ ರೈತ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ತಾಲೂಕಿನ ಹಲಗಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್​​ ವಾಹನ ಡಿಕ್ಕಿಯಾಗಿ ಟ್ರ್ಯಾಕ್ಟರ್​​ನಲ್ಲಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ್(41) ಮೃತ ರ್ದುದೈವಿ. ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಘಟನೆ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:Arunachal Crime: ಹೋಟೆಲ್​ವೊಂದರಲ್ಲಿ ಕೇರಳದ ದಂಪತಿ ಹಾಗೂ ಸ್ನೇಹಿತೆ ಸೇರಿ ಮೂವರ ನಿಗೂಢ ಸಾವು

ಚಳ್ಳಕೆರೆಯಲ್ಲಿ ಬೈಕ್ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಚಿತ್ರದುರ್ಗ: ಚಳ್ಳಕೆರೆಯ ಚಿತ್ರಯ್ಯನಹಟ್ಟಿಯಲ್ಲಿ ಕೆಎಸ್​ಆರ್​ಟಿಸಿ ನಿರ್ವಾಹಕ ‌ನಾಗರಾಜು ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:23 pm, Sun, 7 April 24