AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಆರ್​​ಟಿಒ ಅಧಿಕಾರಿಗಳು

ನೆಲಮಂಗಲ RTO ಕಚೇರಿಯ ಇಬ್ಬರು ಅಧಿಕಾರಿಗಳು ವಾಹನ ತಪಾಸಣೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಓವರ್‌ಲೋಡ್ ಟ್ರಕ್‌ಗಳನ್ನು ಬಿಡಲು ಲಂಚ ಪಡೆದ ಬಗ್ಗೆ ದೂರು ದಾಖಲಾಗಿತ್ತು. ಇವರು ಗೂಗಲ್​​ ಪೇ ಮೂಲಕ ಲಂಚ ಪಡೆದಿದ್ದು, ಖಾಸಗಿ ವ್ಯಕ್ತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಆರ್​​ಟಿಒ ಅಧಿಕಾರಿಗಳು
ಆರ್​​ಟಿಒ ಕಚೇರಿImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Apr 13, 2026 | 6:03 PM

Share

ನೆಲಮಂಗಲ, ಏಪ್ರಿಲ್​​ 13: ನೈಸ್ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ನೆಲಮಂಗಲ ಆರ್​ಟಿಒ ಕಚೇರಿಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 30,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಆರ್​ಟಿಒ ಕಚೇರಿಯ ಪ್ರೊಬೇಷನರಿ ಇನ್ಸ್​ಪೆಕ್ಟರ್​ಗಳಾದ ದಿನೇಶ್ ಕುಮಾರ್, ಕಿರಣ್ ಮತ್ತು ಖಾಸಗಿ ವ್ಯಕ್ತಿ ರಮೇಶ್ ಎಂಬಾತನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದೇಗೆ?

ತಪಾಸಣೆ ನೆಪದಲ್ಲಿ ವಾಹನಗಳನಗಳನ್ನು ತಡೆಯುತ್ತಿದ್ದ ಅಧಿಕಾರಿಗಳು ಗೂಗಲ್ ಪೇ ಮೂಲಕ 2,000, 1,000 ರೂಪಾಯಿ ಹಣವನ್ನು ಲಂಚ ಪಡೆದಿದ್ದರು. ಇಂದು ಖಾಸಗಿ ವ್ಯಕ್ತಿ ರಮೇಶ್ 300 ರೂ. ಲಂಚ ಪಡೆವಾಗ ಲೋಕಾಯುಕ್ತ ಪೊಲೀಸರು ಇವರನ್ನು ಖೆಡ್ಡಾಕೆ ಕೆಡವಿದ್ದಾರೆ. ಓವರ್​ಲೋಡ್ ಟ್ರಕ್ ಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಮಹಾರಾಷ್ಟ್ರ ಮೂಲದ ಪ್ರಶಾಂತ್ ದತ್ತಾತ್ರೇಯ ಎಂಬುವವರು ಲೋಕಾಯುಕ್ತಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆ ಲೋಕಾಯುಕ್ತ ಎಸ್​ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಇದನ್ನೂ ಓದಿ: ಕೆಜಿಗಟ್ಟಲೆ ಚಿನ್ನ, 14 ಕೋಟಿ ರೂ. ಅಕ್ರಮ ಆಸ್ತಿ; ದಿನಗೂಲಿ ನೌಕರ ಕೋಟಿ ಕುಬೇರನಾಗಿದ್ದೇ ರೋಚಕ!

ಪ್ರತಿನಿತ್ಯ ವಾಹನಗಳ ತಪಾಸಣೆ ನಡೆಸುತ್ತಿದ್ದ ಇಬ್ಬರು ಆರ್‌ಟಿಓ ಅಧಿಕಾರಿಗಳು ವಾಹನಗಳ ಚಾಲಕರ ಬಳಿ ಲಂಚ ಪಡೆದು ಕಳುಹಿಸುತ್ತಿರುವ ಆರೋಪ ಕೇಳಿಬಂದಿತ್ತು. ದೂರುದಾರರ ಪ್ರಕಾರ ವಾಹನ ವಾಹನವನ್ನು ಸಾಗಲು ಅನುಮತಿ ನೀಡಿದ ನಂತರ ಉಳಿದ ಹಣವನ್ನು ಪಾವತಿಸಬೇಕೆಂದು ಅಧಿಕಾರಿಗಳು ಅವರಿಗೆ ತಿಳಿಸಿದ್ದರು ಎನ್ನಲಾಗಿದೆ. ಈ ಕುರಿತ ದೂರಿನ ಆಧಾರದದಲ್ಲಿ ಲೋಕಾಯುಕ್ತ ಪೊಲೀಸರು ಆರ್​​ಟಿಒ ಅಧಿಕಾರಿಗಳನ್ನು ಟ್ರ‍್ಯಾಪ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.

ವರದಿ: ಮಂಜುನಾಥ್​​, ಟಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:34 pm, Mon, 13 April 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ