AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ಸಾವು: ತಾಯಿ ಕಣ್ಣೆದುರೇ ಉಸಿರು ಚೆಲ್ಲಿದ ಕಂದಮ್ಮ

Nelamangala Tragedy: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಸನಪುರ ಬಳಿ ಶಾಲಾ ಬಸ್ ಹರಿದು 4 ವರ್ಷದ ಕಂದಮ್ಮ ತಾಯಿಯ ಕಣ್ಣೆದುರೇ ದಾರುಣವಾಗಿ ಮೃತಪಟ್ಟಿದ್ದಾಳೆ. ಕಿಡ್ಸ್ ಇಂಟರ್‌ನ್ಯಾಷನಲ್ ಶಾಲಾ ಬಸ್ ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಘಟನೆ ಬಳಿಕ ವಾಹನ ಬಿಟ್ಟು ಚಾಲಕ ಎಸ್ಕೇಪ್​​ ಆಗಿದ್ದಾನೆ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಕಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ.

ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ಸಾವು: ತಾಯಿ ಕಣ್ಣೆದುರೇ ಉಸಿರು ಚೆಲ್ಲಿದ ಕಂದಮ್ಮ
ಮೃತ ಬಾಲಕಿImage Credit source: Tv9 Kannada
ಮಂಜುನಾಥ ಎಚ್​. ವಿ.
| Edited By: |

Updated on:Aug 03, 2026 | 11:19 PM

Share

ಮುಖ್ಯಾಂಶಗಳು

  • ನೆಲಮಂಗಲದ ದಾಸನಪುರದಲ್ಲಿ ಬಾಲಕಿ ದಾರುಣ ಸಾವು
  • ಶಾಲಾ ಬಸ್​​ ಹರಿದ ಪರಿಣಾಮ ಪ್ರಾಣಬಿಟ್ಟ 4 ವರ್ಷದ ಬಾಲಕಿ
  • ತಾಯಿ ಕಣ್ಣೆದುರೇ ದುರಂತ ಅಂತ್ಯಕಂಡ 4 ವರ್ಷದ ತನುಶಾ

ನೆಲಮಂಗಲ, ಜುಲೈ 08: ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಸನಪುರ ಬಳಿ ನಡೆದಿದೆ. ತನುಶಾ ಮೃತ ದುರ್ದೈವಿ. ವಾಹನ ರಿವರ್ಸ್​​ ತೆಗೆದುಕೊಳ್ಳುವಾಗ ಅವಘಡ ನಡೆದಿದ್ದು, ಬಾಲಕಿ ಬಸ್​ನ ಮುಂಭಾಗದ ಚಕ್ರಕ್ಕೆ ಸಿಲುಕಿ ದುರ್ಮರಣ ಹೊಂದಿದ್ದಾಳೆ. ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ತಾಯಿಯ ಕಣ್ಣೆದುರೇ ಪ್ರಾಣಬಿಟ್ಟ ಬಾಲಕಿ

ತನುಶಾ, ತುಮಕೂರಿನ ಹೆಬ್ಬೂರು ನಿವಾಸಿಗಳಾಗಿರುವ ಕಿಶೋರ್ ಮತ್ತು ಮಧುಸ್ಮಿತಾ ದಂಪತಿಯ ಎರಡನೇ ಮಗು ಎನ್ನಲಾಗಿದೆ. ಶಾಂತಿನಗರದ ಆರ್​​ಟಿಒದಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್, ಮಧ್ಯಾಹ್ನ ಈಕೆಯನ್ನು ಶಾಲೆಯಿಂದ ಕರೆತಂದಿದ್ದರು. ಆ ಬಳಿಕ ಸಂಜೆ ಮೊದಲ ಮಗಳು ಹನಿಕಾ ಕೂಡ ಶಾಲೆಯಿಂದ ಬರಲಿರುವ ಕಾರಣ ಆಕೆಯನ್ನು ಕರೆತರಲೆಂದು ತಾಯಿ ಮಧುಸ್ಮಿತಾ ತೆರಳಿದ್ದರು. ಈ ವೇಳೆ ತನುಶಾಳನ್ನು ಸಹ ಅವರು ಕರೆದೊಯ್ದಿದ್ದರು. ಆದರೆ ದುರ್ದೈವ ಎಂಬಂತೆ ಹನಿಕಾಳನ್ನ ಕರೆತರುವಷ್ಟರಲ್ಲಿ ಅಲ್ಲೇ ಆಡಲು ಶುರುಮಾಡಿದ್ದ ಬಾಲಕಿಯ ಮೇಲೆ ಶಾಲಾ ಬಸ್​​ ಹರಿದಿದೆ. ಪರಿಣಾಮ ತಾಯಿಯ ಕಣ್ಣೆದುರೇ ತನುಶಾ ಉಸಿರು ಚೆಲ್ಲಿದ್ದಾಳೆ.

ಇದನ್ನೂ ಓದಿ: ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು; ಸಿಡಿದೆದ್ದ ಪೋಷಕರು, ಪರಿಸ್ಥಿತಿ ಉದ್ವಿಗ್ನ

ಶಾಲಾ ಬಸ್​​ ಚಾಲಕ ಎಸ್ಕೇಪ್​​!

ಇನ್ನು ಅಪಘಾತದ ಬೆನ್ನಲ್ಲೇ ಶಾಲಾ ಬಸ್​​ನ ಚಾಲಕ ಸ್ಥಳದಿಂದ ಎಸ್ಕೇಪ್​​ ಆಗಿದ್ದು, ಮೃತ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಾಣಾವರ ಸಂಚಾರಿ ಪೊಲೀಸರೂ ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಕಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ. ಬಾಲಕಿ ಬಲಿ ಪಡೆದ ವಾಹನ ಕಿಡ್ಸ್​ ಇಂಟರ್​ನ್ಯಾಷನಲ್​ ಶಾಲೆಗೆ ಸೇರಿದ್ದು ಎಂಬುದು ಗೊತ್ತಾಗಿದೆ.

ವರದಿ: ಮಂಜುನಾಥ್​​, ಟಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:29 pm, Wed, 8 July 26

Follow Us
ಮಂಜುನಾಥ ಎಚ್​. ವಿ.
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು