ಬೆಂಗಳೂರು: ಹಿಟ್​ ಆ್ಯಂಡ್ ರನ್​ಗೆ ಚಿರತೆ ಸಾವು ಶಂಕೆ

ಕಳೆದ 6 ತಿಂಗಳಿನಿಂದ ಬೆಂಗಳೂರಿನ ದಾಸನಪುರ ಮತ್ತು ಸುತ್ತಮುತ್ತಲಿನ ಜನರಿಗೆ ಉಪಟಳ ನೀಡುತ್ತಿದ್ದ ಚಿರತೆಯ ಮೃತದೇಹ ಬೆಂಗಳೂರಿನ ದಾಸನಪುರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಹಿಟ್​ ಌಂಡ್ ರನ್​ಗೆ ಚಿರತೆ ಸಾವಿಗೀಡಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಹಿಟ್​ ಆ್ಯಂಡ್ ರನ್​ಗೆ ಚಿರತೆ ಸಾವು ಶಂಕೆ
ಚಿರತೆ ಸಾವು
Edited By: ವಿವೇಕ ಬಿರಾದಾರ

Updated on: Jun 15, 2024 | 10:15 AM

ನೆಲಮಂಗಲ, ಜೂನ್​ 15: ಬೆಂಗಳೂರಿನ (Bengaluru) ದಾಸನಪುರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 6 ವರ್ಷದ ಗಂಡು ಚಿರತೆಯ (Leopard) ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಹಿಟ್​ ಆ್ಯಂಡ್ ರನ್​ಗೆ ಚಿರತೆ ಸಾವಿಗೀಡಾಗಿದೆ ಎಂದು ತಿಳಿದುಬಂದಿದೆ. ಆದರೆ, ಯಾರೊ ಚಿರತೆಯನ್ನು ಕೊಂದು ಬಿಸಾಡಿದಿದ್ದಾರೆ ಎಂಬ  ಅನುಮಾನ ಕೂಡ ವ್ಯಕ್ತವಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ (Nelamangala Traffic Police Station) ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಚಿರತೆ ಸಾವಿಗೆ ಕಾರಣ ತಿಳಿದು ಬರಲಿದೆ. ಆರ್​ಎಫ್​ಒ ಗೋವಿಂದರಾಜು ನೇತೃತ್ವದಲ್ಲಿ ಚಿರತೆ ಮರಣೋತ್ತರ ಪರೀಕ್ಷೆ ನೆರವೇರಲಿದೆ.

ಚಿರತೆ ಕಳೆದ 6 ತಿಂಗಳಿಂದ ಉಪಟಳ ನೀಡುತ್ತಿತ್ತು. ದಾಸನಪುರ ಮತ್ತು ಸುತ್ತಮುತ್ತಲಿನ ಪ್ರದೇಶದ ಸಾಕು ಪ್ರಾಣಿಗಳನ್ನು ಚಿರತೆ ಬಲಿ ಪಡೆದಿತ್ತು. ಚಿರತೆ ಉಪಟಳಕ್ಕೆ ಹೆದರಿ ಜನರು ಹೊರಗಡೆ ತಿರುಗಾಡಲು ಭಯ ಪಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗಾಗಿ ಬೋನ್​ ಇರಿಸಿದ್ದರು. ಆದರೆ, ಚಿರತೆ ಅರಣ್ಯ ಇಲಾಖೆಯ ಬೋನ್​ಗೆ ಬಿದ್ದಿರಲಿಲ್ಲ. ಇಂದು (ಜೂ.15) ಚಿರತೆಯ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳನ್ನು ಹುಟ್ಟಿ ಹಾಕಿದೆ.

ಇದನ್ನೂ ಓದಿ: ಸಫಾರಿ ಹೋಗುವವರಿಗೆ ಗುಡ್​ನ್ಯೂಸ್: ಸಿಂಹ, ಹುಲಿ ಜೊತೆಗೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ ಆರಂಭ

ಪ್ರಕರಣ ಸಂಬಂಧ ಬೆಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಮಾತನಾಡಿ, ಬೆಳಗಿನ ಜಾವ 3ಗಂಟೆಗೆ ನೆಲಮಂಗಲ ಸಂಚಾರಿ ಪೊಲೀಸರು ಅಪಘಾತದಲ್ಲಿ ಚಿರತೆ ಸಾವನ್ನಪ್ಪಿದರ ಬಗ್ಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ, 6 ವರ್ಷದ ಗಂಡು ಚಿರತೆ ಮೃತಪಟ್ಟಿದೆ. ಸದ್ಯ ಚಿರತೆ ಶವವನ್ನು ನಗರೂರಿನ ನರ್ಸರಿಯಲ್ಲಿ ಇಡಲಾಗಿದೆ. ದಾಸನಪುರ ಪಶು ಚಿಕಿತ್ಸಾಲಯದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಚಿರತೆ ಸಾವಿಗೆ ಕಾರಣ ತಿಳಿದು ಬರಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:13 am, Sat, 15 June 24

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us