AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಲಾರಿ-ಕೆಎಸ್​ಆರ್​ಟಿಸಿ ಬಸ್​ ಮಧ್ಯೆ ಭೀಕರ ಅಪಘಾತ, ಮೂವರು ಸಾವು

ಕುರಿ ಮತ್ತು ಮೇಕೆಗಳನ್ನು ತುಂಬಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಗುಂಡೇನಹಳ್ಳಿ ಬಳಿ ನಡೆದಿದೆ. ಸದ್ಯ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಲಾರಿ-ಕೆಎಸ್​ಆರ್​ಟಿಸಿ ಬಸ್​ ಮಧ್ಯೆ ಭೀಕರ ಅಪಘಾತ, ಮೂವರು ಸಾವು
ಲಾರಿಗೆ KSRTC ಬಸ್ ಡಿಕ್ಕಿ
ಗಂಗಾಧರ​ ಬ. ಸಾಬೋಜಿ
|

Updated on:Aug 16, 2025 | 12:06 PM

Share

ಬೆಂಗಳೂರು ಗ್ರಾಮಾಂತರ, ಆಗಸ್ಟ್​ 16: ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಬೆಳಗ್ಗಿನಜಾವ 3:30 ಗಂಟೆ ಸುಮಾರಿಗೆ ಕುರಿ, ಮೇಕೆ ತುಂಬಿದ್ದ ಲಾರಿಗೆ ಕೆಎಸ್​​ಆರ್​ಟಿಸಿ ಬಸ್​ ಡಿಕ್ಕಿಯಾಗಿ (accident) ಮೂವರು ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಲಾರಿಯಲ್ಲಿದ್ದ ಸೀನಪ್ಪ(50), ನಜೀರ್ ಅಹ್ಮದ್(36), ಆನಂದ್(42) ಮೃತರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುರಿ, ಮೇಕೆ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಲಾರಿ ತೆರಳುತ್ತಿತ್ತು. ಟೈಯರ್ ಪಂಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್​ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮರಕ್ಕೆ ಕಾರು ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯ

ವೇಗ ಹಿನ್ನಲೆ ನಿಯಂತ್ರಣಕ್ಕೆ ಸಿಗದೆ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಬೆಂಗಳೂರಿನ ಹೆಸರಘಟ್ಟ ಸಮೀಪದ ತೋಟಗೆರೆಯಲ್ಲಿ ನಡೆದಿದೆ. ರಾಮದೇವನಹಳ್ಳಿಯ ರಾಕೇಶ್, ಕಾರ್ತಿಕ್ ಮತ್ತು ನವೀನ್​ಗೆ ಗಾಯಗಳಾಗಿದ್ದು, ಮೂವರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಯಲ್ಲಾಪುರ: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ; ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಹೂವು ತರಲು ಹೋಗಿದ್ದ ಮೂವರು, K.R​.ಮಾರುಕಟ್ಟೆಯಿಂದ ವಾಪಸಾಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಚಿಕ್ಕಬಾಣಾವರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮನೆ ಗೋಡೆ ಕುಸಿದುಬಿದ್ದು ಮಹಿಳೆ ಸಾವು

ಮಳೆಗೆ ನೆನೆದಿದ್ದ ಮನೆಯ ಗೋಡೆ ಕುಸಿದುಬಿದ್ದು ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹೊಳೆಭೋಸಗಾ ಗ್ರಾಮದಲ್ಲಿ‌ ನಡೆದಿದೆ. ಲಕ್ಷ್ಮೀಬಾಯಿ(50) ಮೃತ ಮಹಿಳೆ. ಕಳೆದ ವಾರ ಸುರಿದಿದ್ದ ಮಳೆಯಿಂದ ಗೋಡೆ ಶಿಥಿಲಗೊಂಡಿತ್ತು. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:32 am, Sat, 16 August 25