ನೆಲಮಂಗಲ ಟೌನ್ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೈಕ್ ಕಳ್ಳತನ ಮಾಡುತ್ತಿದ್ದ ಐವರು ಅರೆಸ್ಟ್

ಅಲ್ತಮಷ್ ಶರೀಷ್ ಕೀ ಮೇಕರ್ ಆಗಿದ್ದ. ಇವನ ಬಳಿ ಕೀ ಮಾಡಿಸಿಕೊಂಡು ಸ್ಪಾಟ್​ನಲ್ಲೇ ಬೈಕ್ ಕದಿಯುತ್ತಿದ್ದರು. ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್​ಗಳನ್ನೇ ಟಾರ್ಗೆಟ್ ಮಾಡಿ ರಾತ್ರಿ ವೇಳೆ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ಸದ್ಯ ನೆಲಮಂಗಲ ಟೌನ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬೈಕ್ ಕಳ್ಳತನ ಮಾಡುತ್ತಿದ್ದ 5 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ನೆಲಮಂಗಲ ಟೌನ್ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೈಕ್ ಕಳ್ಳತನ ಮಾಡುತ್ತಿದ್ದ ಐವರು ಅರೆಸ್ಟ್
ಆರೋಪಿಗಳಿಂದ ವಶಕ್ಕೆ ಪಡೆಯಲಾದ ವಸ್ತುಗಳು
Follow us
ಬಿ ಮೂರ್ತಿ, ನೆಲಮಂಗಲ
| Updated By: ಆಯೇಷಾ ಬಾನು

Updated on: Sep 13, 2023 | 12:56 PM

ನೆಲಮಂಗಲ, ಸೆ.13: ಬೆಂಗಳೂರು ಸುತ್ತಮುತ್ತ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಬೈಕ್ ಕಳ್ಳತನ, ಮನೆಗಳ್ಳತನ, ಹತ್ಯೆಗೆ ಯತ್ನದಂತಹ ಘಟನೆಗಳು ನಡೆಯುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೊಲೀಸರು(Nelamangala Town Police) ಭರ್ಜರಿ ಕಾರ್ಯಾಚರಣೆ ನಡೆಸಿ ಬೈಕ್ ಕಳ್ಳತನ(Bike Theft) ಮಾಡುತ್ತಿದ್ದ 5 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ರಿಜ್ವಾನ್(23), ನಂದನ್ (20), ಹರ್ಷಿತ್(24), ಸೋಪಿಯಾನ್(21), ಅಲ್ತಮಷ್ ಶರೀಷ್(24) ಬಂಧಿತ ಆರೋಪಿಗಳು. ಬಂಧಿತರಿಂದ 24 ಬೈಕ್​ಗಳನ್ನ ವಶಕ್ಕೆ ಪಡೆಯಲಾಗಿದೆ.

ಅಲ್ತಮಷ್ ಶರೀಷ್ ಕೀ ಮೇಕರ್ ಆಗಿದ್ದ. ಇವನ ಬಳಿ ಕೀ ಮಾಡಿಸಿಕೊಂಡು ಸ್ಪಾಟ್​ನಲ್ಲೇ ಬೈಕ್ ಕದಿಯುತ್ತಿದ್ದರು. ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್​ಗಳನ್ನೇ ಟಾರ್ಗೆಟ್ ಮಾಡಿ ರಾತ್ರಿ ವೇಳೆ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ ಸೇರಿದಂತೆ 11 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಪ್ರಕರಣಗಳು ದಾಖಲಾಗಿದ್ದು 20 ಲಕ್ಷ ಬೆಲೆ ಬಾಳುವ 24 ಬೈಕ್ 11 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದೆ.

ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್, 107 ಗ್ರಾಂ ಚಿನ್ನಾಭರಣ ಜಪ್ತಿ

ಬೆಂಗಳೂರು: ಮನೆ ಕಳ್ಳತನ ಮಾಡುತ್ತಿದ್ದ ಕೋಣನಕುಂಟೆಯ ಗೋಪಿನಾಥ್​ನನ್ನು(44) ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದನ್ನ ನೋಡಿ ಗೋಪಿನಾಥ್​ ಕಳ್ಳತನ ಮಾಡುತ್ತಿದ್ದ. ಆರೋಪಿಯಿಂದ 6.5 ಲಕ್ಷ ಮೌಲ್ಯದ 107 ಗ್ರಾಂ ಚಿನ್ನಾಭರಣ ಹಾಗೂ 1.14 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆ ನೆಫ್ರೋಯುರಾಲಜಿ ಅವ್ಯವಸ್ಥೆ: ಆಸ್ಪತ್ರೆಗೆ ದಾಖಲಾದವರು ಬದುಕಿಬರುವುದೇ ಅನುಮಾನ!

ಅವಾಜ್ ಹಾಕಿದ್ದ ಯುವಕನ ಅಟ್ಟಾಡಿಸಿ ಮಚ್ವಿನೇಟು

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿಪುರದ ಅಂಬಾ ಮಹೇಶ್ವರಿ ದೇವಾಲಯದ ಸಮೀಪ ಸೆಪ್ಟಂಬರ್ 1 ರಂದು ರೋಹಿತ್ ಎಂಬ ಯುವಕನ ಮೇಲೆ ರಾಜು, ಧನುಶ್, ಗುರು ಪ್ರಸಾದ್ ಅಂಡ್ ಟೀಂ ಏಕಾಏಕಿ‌ ಹಲ್ಲೆ ನಡೆಸಿದ್ದರು. ಘಟನೆಗೂ ಒಂದು ವಾರದ ಹಿಂದೆ ಗಾಯಾಳು ರೋಹಿತ್ ಗೂ ಈ ರಾಜು ಮತ್ತು ಸಹಚರರ ನಡುವೆ ಕಿರಿಕ್ ಆಗಿತ್ತು. ಈ ವೇಳೆ ರೋಹಿತ್ ಅವಾಜ್ ಹಾಕಿದ್ದನಂತೆ. ಇವನ್ನನ್ನ ಹೀಗೆ ಬಿಟ್ಟರೇ ಏರಿಯಾದಲ್ಲಿ ಹವಾ ಮೇಂಟೆನ್ ಮಾಡ್ತಾನೆ ಅಂತಾ ರೋಹಿತ್ ಕೊಲ್ಲಲು ಸ್ಕೆಚ್ ರೂಪಿಸಿದ ಡೆಡ್ಲಿ ಅಟ್ಯಾಕರ್ಸ್ ಸೆಪ್ಟಂಬರ್ 1 ರಂದು ಸ್ಕೆಚ್ ಹಾಕಿ ಹಾಡಹಗಲೇ ಮಚ್ವು ಲಾಂಗ್ ಬೀಸಿ ಹತ್ಯೆ ಗೆ ಯತ್ನಿಸಿದ್ದರು. ಅದೃಷ್ಟವಶಾತ್ ಹಲ್ಲೆಕೋರರಿಂದ ಕೂದಲೆಳೆ ಅಂತರದಲ್ಲಿ ಯುವಕ ಬಚಾವಾಗಿದ್ದು, ಘಟನೆ ವೇಳೆ ಬೆನ್ನು ಮೂಳೆ ಮುರಿದು ಗಂಭೀರವಾಗಿ ಗಾಯಾಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ದೃಶ್ಯ ಏರಿಯಾದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಪೊಲೀಸರು ಆರು ಜನ ಆರೋಪಿಗಳ ಲಾಕ್ ಮಾಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ