AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಆಘಾತ: ಆಮಂತ್ರಣ ಕೊಡಲು ಹೋದ ವೇಳೆ ಮನೆಗೆ ಕನ್ನ, ವಧುವಿಗೆಂದು ತಂದಿದ್ದ ಆಭರಣ ಕದ್ದ ಕಳ್ಳರು

ನೆಲಮಂಗಲದಲ್ಲಿ ಮಗಳ ಮದುವೆ ತಯಾರಿಯಲ್ಲಿದ್ದ ಕುಟುಂಬಕ್ಕೆ ಆಘಾತ ಎದುರಾಗಿದೆ. ಆಮಂತ್ರಣ ನೀಡಲು ಪರವೂರಿಗೆ ಹೋದಾಗ ಮನೆಗೆ ಕನ್ನ ಹಾಕಿರುವ ಖದೀಮರು, ವಧುವಿಗೆಂದು ತಂದಿದ್ದ 60 ಗ್ರಾಂಗೂ ಅಧಿಕ ಚಿನ್ನಾಭರಣ ದೋಚಿದ್ದಾರೆ. ಈ ಕಳ್ಳತನದಿಂದ ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ತೀವ್ರ ಸಂಕಷ್ಟ ಎದುರಾಗಿದ್ದು, ವಿವಾಹ ನಡೆಸುವುದು ಹೇಗೆಂದು ಆತಂಕಕ್ಕೀಡಾಗಿದೆ. ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಆಘಾತ: ಆಮಂತ್ರಣ ಕೊಡಲು ಹೋದ ವೇಳೆ ಮನೆಗೆ ಕನ್ನ, ವಧುವಿಗೆಂದು ತಂದಿದ್ದ ಆಭರಣ ಕದ್ದ ಕಳ್ಳರು
ಬಂಗಾರದ ಆಭರಣಗಳ ಕಳವುImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:May 05, 2026 | 4:46 PM

Share

ನೆಲಮಂಗಲ, ಮೇ 05: ಮಗಳ ಮದುವೆ ತಯಾರಿಯಲ್ಲಿದ್ದ ಕುಟುಂಬವೊಂದು ಆಮಂತ್ರಣಪತ್ರ ಕೊಡಲು ಪರವೂರಿಗೆ ಹೋಗಿಬರುವುದರ ಒಳಗೆ ವಿವಾಹಕ್ಕೆಂದು ಮಾಡಿಸಿಟ್ಟ ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನೆಲಮಂಗಲ ಬಳಿಯ ದಾಸನಪುರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ. ಶಿವ ಮತ್ತು ಲೋಕೇಶ್ವರಿ ಎಂಬುವವರ ಮನೆಯ ಡೋರ್ ಒಡೆದು ಒಳ ನುಗ್ಗಿರುವ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ, ನಗದು ದೋಚಿ ಎಸ್ಕೇಪ್​​ ಆಗಿದ್ದಾರೆ.

  • ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಬಿಗ್​​ ಶಾಕ್​​
  • ಆಮಂತ್ರಣ ಕೊಡಲು ಹೋದ ವೇಳೆ ಮನೆಗೆ ಕನ್ನ
  • ವಧುವಿಗೆಂದು ತಂದಿದ್ದ ಬಂಗಾರದ ಆಭರಣಗಳು ಕಳವು

ತಮಿಳುನಾಡಿನ ಮೂಲವರಾದ ಲೋಕೇಶ್ವರಿ ಹಾಗೂ ಶಿವ ಎಂಬವರು ಸಾಕಷ್ಟು ವರ್ಷದಿಂದ ನೆಲಮಂಗಲದಲ್ಲಿ ನೆಲೆಸಿ ತಮ್ಮ ಜೀವನ ಕಟ್ಟುಕೊಂಡಿದ್ದರು. ಕೂಲಿ ನಾಲಿ ಮಾಡಿ ಜೀವನ ನಡೆಸುತ್ತಿದ್ದ ಇವರು ತಮ್ಮ ಮೂರನೇ ಮಗಳಾದ ಶಂಕರಿ ಮದುವೆ ತಯಾರಿಯಲ್ಲಿದ್ದರು. ಈ ಹಿನ್ನೆಲೆ ಕೂಡಿಟ್ಟ ಹಣದ ಜೊತೆಗೆ ಸಾಲ ಮಾಡಿ ಮಗಳಿಗೆ ಚಿನ್ನಾಭರಣ ತಂದಿದ್ದರು. ಈ ನಡುವೆ ಮದುವೆ ಆಮಂತ್ರಣ ಪತ್ರಿಕೆಯನ್ನ ವರನ ಮನೆಯವರಿಗೆ ಕೊಡಲೆಂದು ತಮಿಳುನಾಡಿಗೆ ಹೋಗಿ ಬರುವುದರ ಒಳಗೆ ಅವು ಕಳ್ಳರಪಾಲಾಗಿವೆ. ವಧುವಿಗೆಂದು ಖರೀದಿಸಿದ್ದ ನೆಕ್ಲೆಸ್, ಕಿವಿ ಓಲೆ, ಸೇರಿದಂತೆ 60 ಗ್ರಾಂಗಳಿಗೂ ಅಧಿಕ ಒಡವೆ ಮನೆಯಲ್ಲಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಸಚಿವ ಜಮೀರ್ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ

ಮಗಳ ಮದುವೆಯನ್ನು ಸಡಗರದಿಂದ ಮಾಡಬೇಕೆಂಬ ಆಸೆಯಲ್ಲಿದ್ದ ಕುಟುಂಬಕ್ಕೆ ಈ ಘಟನೆ ಭಾರಿ ಆಘಾತ ತಂದಿದ್ದು, ವಿವಾಹ ನೆರವೇರಿಸೋದು ಹೇಗೆಂಬ ಆತಂಕ ಕಾಡತೊಡಗಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೀಘ್ರ ಕಳ್ಳರನ್ನು ಪತ್ತೆ ಮಾಡಿ ತಮ್ಮ ಬಂಗಾರ ಮರಳಿ ಸಿಗುವಂತೆ ಮಾಡಿ ಎಂದು ಕುಟುಂಬ ಅಂಗಲಾಚಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕೂಡ ಬಲೆ ಬೀಸಿದ್ದಾರೆ. ಘಟನೆಯಿಂದ ಸ್ಥಳೀಯರೂ ಬೆಚ್ಚಿಬಿದ್ದಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಆತಂಕ ಮನೆ ಮಾಡಿದೆ.

ವರದಿ: ಮಂಜುನಾಥ್​​, ಟಿವಿ9, ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:41 pm, Tue, 5 May 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ