ಪ್ರೀತಿಸಿ ಮೂರು ತಿಂಗಳಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ

ಮನೆಯವರ ವಿರೋಧದ ನಡುವೆಯೇ ಪ್ರೀತಿಸಿ ಮೂರು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿದ್ದ ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಪ್ರೀತಿಸಿ ಮೂರು ತಿಂಗಳಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ
Edited By:

Updated on: Jul 31, 2023 | 10:44 AM

ವಿಜಯಪುರ, (ಜುಲೈ 31): ಮೂರು ತಿಂಗಳಿಂದಷ್ಟೇ ಸಪ್ತಪದಿ ತುಳಿದಿದ್ದ ಜೋಡಿ ಹೊಸ ಸಂಸಾರದ ಬಂಡಿ ಸಾಗಿಸಬೇಕಿತ್ತು. ಆದ್ರೆ, ಅದೇನಾಯ್ತೋ ಏನೋ ನವದಂಪತಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಬೆಂಗಳೂರು(Bengaluru) ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದ ಕೃಷಿಹೊಂಡಕ್ಕೆ ಬಿದ್ದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಪಟ್ಟಣದ ನಿವಾಸಿ ರಮೇಶ್ ( 28 ) ಸಹನಾ ( 26 ) ಆತ್ಮಹತ್ಯೆಗೆ ಶರಣಾದ ನವ ದಂಪತಿ.

ಇದನ್ನೂ ಓದಿ: 10 ವರ್ಷದ ಹಿಂದಿನ ಪ್ರೇಮ ವಿವಾಹದ ಸಿಟ್ಟು: ಮೊಹರಂ ಹಬ್ಬದ ವೇಳೆ ಎರಡು ಕುಟುಂಬಗಳ ನಡುವೆ ಗಲಾಟೆ, 8 ಜನರಿಗೆ ಗಾಯ

ಮನೆಯವರ ವಿರೋಧದ ನಡುವೆಯೇ ಪ್ರೀತಿಸಿ ತಿಂಗಳಿಂದಷ್ಟೇ ಮದುವೆಯಾಗಿ ಬಾಡಿಗೆ ಮನೆಲ್ಲಿ ಸಂಸಾರ ನಡೆಸುತ್ತಿದ್ದರು. ಎರಡು ದಿನದಿಂದೆ ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ದಂಪತಿ, ಆದ್ರೆ, ರಾತ್ರಿ ಮನೆಯಿಂದ ಹೊರಟವರು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ವಿಷಯ ತಿಳಿದು ಸ್ಥಳಕ್ಕೆ ವಿಜಯಪುರ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ನೀರಿ‌ನಲ್ಲಿದ್ದ ಮೃತದೇಹಗಳನ್ನು ಹೊರತೆಗೆದು ತನಿಖೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:23 am, Mon, 31 July 23