ನೆಲಮಂಗಲ: ಹಬ್ಬದ ದಿನವೇ ಈಜಲು ಹೋಗಿದ್ದ ಯುವಕ, ನೀರಿನಲ್ಲಿ ಮುಳುಗಿ ಸಾವು

ಅವನು ಜೀವನ ಕಟ್ಟಿಕೊಳ್ಳೋಕೆ ದೂರದ ಕೇರಳದಿಂದ ಕಳೆದ 2 ವರ್ಷದ ಹಿಂದೆ ರಾಜ್ಯಕ್ಕೆ ಬಂದಿದ್ದ, ಇಲ್ಲಿಯೇ ಖಾಸಗಿ ಕಂಪನಿಯ ಗೌಡನ್​ನಲ್ಲಿ ಕೆಲಸ ಮಾಡುತ್ತಿದ್ದ. ಎಲ್ಲವೂ ಚೆನ್ನಾಗೆ ನಡೆಯುತ್ತಿತ್ತು. ಆದ್ರೆ, ಗೌರಿ-ಗಣೇಶ ಹಬ್ಬದ ರಜೆ ಸಿಕ್ಕಿತು ಎಂದು ಕ್ವಾರಿಯಲ್ಲಿ ಈಜಲು ಹೋಗಿ ಆ ಯುವಕ ತನ್ನ ಪ್ರಾಣವನ್ನೆ ಬಿಟ್ಟಿದ್ದಾನೆ.

ನೆಲಮಂಗಲ: ಹಬ್ಬದ ದಿನವೇ ಈಜಲು ಹೋಗಿದ್ದ ಯುವಕ, ನೀರಿನಲ್ಲಿ ಮುಳುಗಿ ಸಾವು
ಮೃತ ಯುವಕ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 19, 2023 | 10:34 PM

ಬೆಂಗಳೂರು ಗ್ರಾಮಾಂತರ, ಸೆ.19: ವಿಶಾಲವಾದ ಕಲ್ಲಿನ ಕ್ವಾರಿ, ಸುತ್ತಲೂ ನಿಂತಿರುವ ಪೊಲೀಸರು ಹಾಗೂ ಅಗ್ನಿಶಾಮಕ ತುರ್ತು ಸೇವೆಗಳ ಸಿಬ್ಬಂದಿ. ಸತತ6 ಗಂಟೆ ಪ್ರಯತ್ನ ನಡೆಸಿದ ಅಗ್ನಿಶಾಮಕ ದಳದ ಅಧಿಕಾರಿಗಳು, 21 ವರ್ಷದ ಅಜ್ಮಲ್ ಎನ್ನುವ ಯುವಕನ ಮೃತ ದೇಹ ಹೊರತೆಗೆದಿದ್ದಾರೆ. ಹೌದು, ಈ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ (Bengaluru Rural)ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಕ್ವಾರಿಯಲ್ಲಿ. ಹೆಲ್ಪರ್ ವೃತ್ತಿ ಮಾಡುತ್ತಾ ನೆಲಮಂಗಲದಲ್ಲಿ ವಾಸವಿದ್ದ ಮೃತ ಅಜ್ಮಲ್, ನಿನ್ನೆ(ಸೆ.18) ಸಂಜೆ ಈಜಲು ಕ್ವಾರಿಗೆ ಹೋಗಿ ಶವವಾಗಿ ಪತ್ತೆಯಾಗಿದ್ದಾನೆ.

ಮೃತ ಅಜ್ಮಲ್​ಗೆ ನೀರು ಎಂದರೆ ಎಲ್ಲಿಲ್ಲದ ಪ್ರೀತಿ, ಅಲ್ಲದೆ ಈತ ಈಜು ಕೂಡ ಕಲಿತಿದ್ದ. ಹೀಗಿದ್ದಾಗ ಕ್ವಾರೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಈ ವೇಳೆ, ಆಳವನ್ನು ತಿಳಿಯದೆಯೇ ಕ್ವಾರೆ ನೀರಿಗೆ ಇಳಿದು ಮುಳುಗಿದ್ದಾನೆ. ಕೂಡಲೇ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ, 6 ಗಂಟೆಗಳ‌ ಸತತ ಪ್ರಯತ್ನದ ಬಳಿಕ ಹಲವು ಸಲಕರಣೆಗಳನ್ನು ಬಳಸಿ ಮೃತ ದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:ನೆಲಮಂಗಲ: ಡಿವೈಡರ್‌ಗೆ ಗುದ್ದಿದ ಕಾರು; 5ಜನ ಇಂಜಿನಿಯರ್​ಗಳ ಪೈಕಿ ಮೂವರು ಸ್ಥಳದಲ್ಲೇ ಸಾವು

ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬದ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಇತ್ತ ದೂರದಿಂದ ಬಂದು, ಬದುಕು ಕಟ್ಟಿಕೊಂಡು ಕುಟುಂಬದ ಜವಾಬ್ದಾರಿ ಹೊತ್ತಿದ್ದವನು ನೀರು ಪಾಲಾಗಿದ್ದಾನೆ.

ಕ್ಯಾಂಟರ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ: ಕ್ಯಾಂಟರ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ, ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯ ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಡೆದಿದೆ. ತಾಲೂಕಿನ ಹೊನ್ನೇನಹಳ್ಳಿಯ ಯುವಕ ಮಣಿ(27)ಮೃತ ಸವಾರ. ಸುರಿಯುವ ಮಳೆಯಲ್ಲಿ ದಾರಿ ಕಾಣದೆ ಕ್ಯಾಂಟರ್​ಗೆ ಬೈಕ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಈ ಕುರಿತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ