Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಪ್ರಯಾಣದ ವೇಳೆ ಶೌಚಾಲಯದಲ್ಲಿ ಸಿಲುಕಿದ ಪ್ರಯಾಣಿಕ; ಡೋರ್ ಓಪನ್ ಆಗದೆ ಪರದಾಟ, ಮುಂದೇನಾಯ್ತು?

ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನೋರ್ವ ಶೌಚಾಲಯದಲ್ಲಿ ಸಿಲುಕಿಕೊಂಡಿದ್ದು ಸುಮಾರು ಒಂದು ಗಂಟೆಗಳ ಕಾರ್ಯಾಚರಣೆ ನಂತರ ಹರಸಾಹಸಪಟ್ಟು ಶೌಚಾಲಯದ ಬಾಗಿಲು ತೆರೆಯಲಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ಶೌಚಾಲಯದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪ್ರಯಾಣಿಕ ಡೋರ್ ಓಪನ್ ಆಗುತ್ತಿದ್ದಂತೆ ನಿಟ್ಟುಸಿರುಬಿಟ್ಟಿದ್ದಾರೆ.

ವಿಮಾನ ಪ್ರಯಾಣದ ವೇಳೆ ಶೌಚಾಲಯದಲ್ಲಿ ಸಿಲುಕಿದ ಪ್ರಯಾಣಿಕ; ಡೋರ್ ಓಪನ್ ಆಗದೆ ಪರದಾಟ, ಮುಂದೇನಾಯ್ತು?
ಗಗನಸಖಿ ಪ್ರಯಾಣಿಕನಿಗೆ ಬರೆದ ಪತ್ರ
Follow us
ನವೀನ್ ಕುಮಾರ್ ಟಿ
| Updated By: ಆಯೇಷಾ ಬಾನು

Updated on: Jan 17, 2024 | 12:14 PM

ದೇವನಹಳ್ಳಿ, ಜ.17: ಮುಂಬೈನಿಂದ ಬೆಂಗಳೂರಿಗೆ ಬರುವಾಗ ವಿಮಾನದ ಶೌಚಾಲಯದಲ್ಲಿ (Toilet) ಸಿಲುಕಿ ಪ್ರಯಾಣಿಕ ಪರದಾಡಿದ ಘಟನೆ ನಡೆದಿದೆ. ಸ್ಪೈಸ್ ಜೆಟ್ ವಿಮಾನದಲ್ಲಿ (Spicejet) ಇಂದು ಮುಂಜಾನೆ ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನೋರ್ವ ಶೌಚಾಲಯದಲ್ಲಿ ಸಿಲುಕಿಕೊಂಡಿದ್ದು ಸುಮಾರು ಒಂದು ಗಂಟೆಗಳ ಕಾರ್ಯಾಚರಣೆ ನಂತರ ಹರಸಾಹಸಪಟ್ಟು ಶೌಚಾಲಯದ ಬಾಗಿಲು ತೆರೆಯಲಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ಶೌಚಾಲಯದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪ್ರಯಾಣಿಕ ಡೋರ್ ಓಪನ್ ಆಗುತ್ತಿದ್ದಂತೆ ನಿಟ್ಟುಸಿರುಬಿಟ್ಟಿದ್ದಾರೆ. ಇನ್ನು ಈ ಕಾರ್ಯಾಚರಣೆ ವೇಳೆ ಶೌಚಾಲಯದಲ್ಲಿ ಸಿಲುಕಿದ್ದ ಪ್ರಯಾಣಿಕನಿಗೆ ಧೈರ್ಯ ತುಂಬಲು ಗಗನಸಖಿ ಪತ್ರ ಬರೆದಿದ್ದು ಶ್ಲಾಘನೀಯವಾಗಿತ್ತು.

ಕಳೆದ ರಾತ್ರಿ ಮುಂಬೈನಿಂದ ಬೆಂಗಳೂರಿಗೆ ಬರಲು ಪ್ರಯಾಣಿಕನೋರ್ವ ಸ್ಪೈಸ್ ಜೆಟ್ ವಿಮಾನ ಹತ್ತಿದ್ದ. ವಿಮಾನ ಪ್ರಯಾಣದ ವೇಳೆ ಶೌಚಾಲಯಕ್ಕೆ ಹೋಗಿದ್ದು ಹಿಂದಿರುಗುವಾಗ ಡೋರ್ ಓಪನ್ ಆಗಿಲ್ಲ. ಇದರಿಂದ ಒಂದು ಕ್ಷಣ ಬೆಚ್ಚಿಬಿದ್ದ ಪ್ರಯಾಣಿಕ ಗಾಬರಿಗೊಂಡು ಕಾಪಾಡುವಂತೆ ಕಿರುಚಾಡಿದ್ದಾನೆ. ಪ್ರಯಾಣಿಕನ ಪರದಾಟ ಕಂಡು ವಿಮಾನ ಸಿಬ್ಬಂದಿ ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ಡೋರ್ ಓಪನ್ ಮಾಡಲು ಹರಸಾಹಸಪಟ್ಟಿದ್ದಾರೆ. ಎಷ್ಟೇ ಪ್ರಯತ್ನ ಪಟ್ಟರೂ ಡೋರ್ ಓಪನ್ ಮಾಡಲು ಆಗದಿದ್ದಾಗ ಶೌಚಾಲಯದಲ್ಲಿದ್ದ ಪ್ರಯಾಣಿಕ ಮತ್ತಷ್ಟು ಗಾಬರಿಗೊಂಡಿದ್ದಾನೆ. ಈ ವೇಳೆ ಗಗನಸಖಿಯೊಬ್ಬರು ಪತ್ರ ಬರೆದು ಶೌಚಾಲಯದ ಒಳಗೆ ಕಳಿಸಿ ಧೈರ್ಯ ತುಂಬು ಕೆಲಸ ಮಾಡಿದ್ದಾರೆ. ನೀವು ಯಾವುದೇ ಕಾರಣಕ್ಕೂ ಗಾಬರಿ ಪಡೆಬೇಡಿ. ನಾವು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಕೆಲವೇ ನಿಮಿಷದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪುತ್ತೇವೆ. ಆಗ ಮೈನ್ ಡೋರ್ ಓಪನ್ ಆಗುತ್ತೆ. ನಮ್ಮ ಇಂಜಿನಿಯರ್ಸ್​ಗಳು ಬಂದು ಶೌಚಾಲಯದ ಬಾಗಿಲು ತೆರೆಯುತ್ತಾರೆ ಎಂದು ಪತ್ರ ಬರೆದು ಧೈರ್ಯ ತುಂಬಿದ್ದಾರೆ.

ಕೊನೆಗೆ ಬೆಳಗ್ಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುತ್ತಿದ್ದಂತೆ ಡೋರ್ ಓಪನ್ ಆಗಿದ್ದು ಒಂದು ಗಂಟೆಯ ಕಾರ್ಯಾಚರಣೆ ಬಳಿಕ ಪ್ರಯಾಣಿಕ ಹೊರ ಬಂದಿದ್ದಾನೆ. ಕೆಐಎಬಿಗೆ ಬಂದ ನಂತರ ಇಂಜಿನಿಯರ್ಸ್​ ಡೋರ್ ಓಪನ್ ಮಾಡಿದ್ದಾರೆ.

ಇದನ್ನೂ ಓದಿ: ಕೋಲಾರ: ಶ್ರೀರಾಮನ ಕಟೌಟ್, ಪ್ಲೆಕ್ಸ್​​ನ್ನು ಬ್ಲೇಡ್​​ನಿಂದ ಹರಿದ ದುಷ್ಕರ್ಮಿಗಳು

ಪೀಣ್ಯ ಫ್ಲೈಓವರ್ ಮತ್ತೆ 3 ದಿನ ಬಂದ್​

ಬೆಂಗಳೂರಿನ ಪೀಣ್ಯ ಫ್ಲೈಓವರ್​​​​ನನ್ನು ಪೊಲೀಸರು ಬಂದ್ ಮಾಡಿದ್ರು. ನಿನ್ನೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆವರೆಗೆ ಪೀಣ್ಯ ಫ್ಲೈಓವರ್ ಬಂದ್ ಆಗಿದೆ. ವಯಾಡಕ್ಟ್ ಸಮಗ್ರತೆ ಪರಿಶೀಲನೆ ಹಿನ್ನೆಲೆಯಲ್ಲಿ ಲೋಡ್ ಟೆಸ್ಟಿಂಗ್ ನಡೆಯಲಿದೆ. ಅದಕ್ಕಾಗಿ ಪೀಣ್ಯ ಫ್ಲೈಓವರ್ ಬಂದ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಸೂಚನೆ ಮೇರೆಗೆ 3 ದಿನ ಬಂದ್ ಆಗಿದೆ. ಜೊತೆಗೆ ತುಮಕೂರು ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್