ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ

ಇಂಡಿಗೋ ಏರ್​​ಲೈನ್ಸ್​​ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್ (Kempegowda International Airport) ​​ನ ಟರ್ಮಿನಲ್​ 1ರಲ್ಲಿ ಚೆಕ್​​ ಇನ್ ಮತ್ತು ಚೆಕ್​ ಔಟ್ ಆಗಲು ನೂರಾರು ಜನ ಪ್ರಯಾಣಿಕರು ಪರದಾಡುವಂತಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 05, 2024 | 3:18 PM

ಬೆಂಗಳೂರು, ಅ.05: ಇಂಡಿಗೋ ಏರ್​​ಲೈನ್ಸ್​​ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್(Kempegowda International Airport) ​​ನಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಹೌದು, ಚೆಕ್​​ ಇನ್ ಮತ್ತು ಚೆಕ್​ ಔಟ್ ಆಗಲು ಟರ್ಮಿನಲ್​ 1ರಲ್ಲಿ ನೂರಾರು ಜನ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಚೆಕ್​​ಇನ್​ ಸಮಸ್ಯೆ ಹಿನ್ನೆಲೆ ವಿಮಾನಗಳ ಟೇಕಾಫ್​ನಲ್ಲೂ ವಿಳಂಬವಾಗಿದ್ದು, ಏರ್​​ಲೈನ್ಸ್ ಸಿಬ್ಬಂದಿಗಳು  ಕೆಲ ವಿಮಾನಗಳನ್ನು ರಿ ಶೆಡ್ಯೂಲ್ ಮಾಡಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಸಮಯಕ್ಕೆ ಸರಿಯಾಗಿ ಪ್ರಯಾಣ ಮಾಡಲಾಗದೆ ಪ್ರಯಾಣಿಕರು ಕಂಗಾಲಾಗಿದ್ದಾರೆ.

ಇನ್ನು ಕಳೆದ ಜುಲೈ 19 ರಂದು ಕೂಡ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ​ನಲ್ಲಿ ಪ್ರಯಾಣಿಕರು ಪರದಾಡಿದ್ದರು. ನಾಲ್ಕು ಗಂಟೆಗಳ ಕಾಲ ಸರ್ವರ್ ಸಮಸ್ಯೆಯಿಂದ ಕಂಗಾಲಾಗಿದ್ದರು. ಇಂಡಿಗೋ, ಆಕಾಶ್, ಸ್ಪೈಸ್ ಜೆಟ್ ಮತ್ತು ಏರ್ ಇಂಡಿಯಾ ಏಕ್ಸಪ್ರೇಸ್ ಏರ್ಲೈನ್ಸ್ ಸಂಸ್ಥೆಗಳಲ್ಲಿ ಈ ತೊಂದರೆ ಉಂಟಾಗಿತ್ತು. ಪ್ರಯಾಣಿಕರ ಅನುಕೂಲಕ್ಕಾಗಿ ಸಿಬ್ಬಂದಿಗಳು ಮ್ಯಾನುವಲ್​ ಚೆಕ್ ಇನ್ ಮಾಡಿಸುತ್ತಿದ್ದಾರೆ. ಮ್ಯಾನುವಲ್ ಚೆಕಿಂಗ್​ನಿಂದ ಪ್ರಯಾಣಿಕರು ಕ್ಯೂನಲ್ಲಿ ನಿಲ್ಲುವಂತಾಗಿತ್ತು. ಇದೀಗ ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

ಇದನ್ನೂ ಓದಿ:ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ

ಅಷ್ಟೇ ಅಲ್ಲ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಈ ಸಮಸ್ಯೆ ಕಂಡು ಬಂದಿತ್ತು. ಈ ಹಿನ್ನಲೆ ವಿಮಾನ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಸೂಚನೆ ನೀಡಿದ್ದವು. ಈ ಕುರಿತು ಎಷ್ಟೇ ಕ್ರಮಕೈಗೊಂಡರೂ ಸಮಸ್ಯೆ ಮಾತ್ರ ತಪ್ಪುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Sat, 5 October 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ