ದಾಬಸ್ ಪೇಟೆ: ಫ್ಲೈ ಓವರ್ ಮೇಲೆ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳ ವಿರುದ್ಧ ಸ್ಥಳೀಯರ ಪ್ರತಿಭಟನೆ
ಫ್ಲೈ ಓವರ್ ಕೆಳಗೆ ಸಂಚಾರ ಮಾಡುವಂತೆ ಸಾರಿಗೆ ಇಲಾಖೆ ಅದೇಶವಿದ್ದರೂ ಅದನ್ನು ಗಣನೆಗೆ ತೆಗೆದುಕೊಳ್ಳದ ಬಸ್ ಚಾಲಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ರಸ್ತೆಯಲ್ಲಿ ಚಲಿಸುತ್ತಿರುವ ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು: ಫ್ಲೈಓವರ್ ಮೇಲೆ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ನಡೆದಿದೆ. ಫ್ಲೈಓವರ್ ಮೇಲೆ ಸಂಚರಿಸುವ ಬಸ್ಗಳು, ವಿದ್ಯಾರ್ಥಿಗಳು ಸೇರಿದಂತೆ ಇತರರಿಗೆ ದಾಬಸ್ ಪೇಟೆಯಲ್ಲಿ ನಿಲ್ಲಿಸದೆ ಹಾಗೆಯೇ ಹೋಗುತ್ತಿದ್ದವು. ಇದರಿಂದ ಸಾರ್ವಜನಿಕರು ಪ್ರತಿದಿನ ಸಂಕಷ್ಟ ಎದುರಿಸುವಂತಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಕಾರಣ ಸ್ಥಳೀಯರು ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ.
ಫ್ಲೈ ಓವರ್ ಕೆಳಗೆ ಸಂಚಾರ ಮಾಡುವಂತೆ ಸಾರಿಗೆ ಇಲಾಖೆ ಅದೇಶವಿದ್ದರೂ ಅದನ್ನು ಗಣನೆಗೆ ತೆಗೆದುಕೊಳ್ಳದ ಬಸ್ ಚಾಲಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು, ರಸ್ತೆಯಲ್ಲಿ ಚಲಿಸುತ್ತಿರುವ ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯರೊಂದಿಗೆ ಬಿಜೆಪಿ ಕಾರ್ಯಕರ್ತರೂ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಬೆಂಗಳೂರಿಗೆ ಬರುತ್ತಿರುವ ಬಸ್ ಸಂಚಾರದಲ್ಲಿ ಇಂದು ವ್ಯತ್ಯಯ ಕಂಡುಬಂದಿದೆ.
ಬಾಗಲಕೋಟೆ: ಬಾರ್ ಅಂಡ್ ರೆಸ್ಟೊರೆಂಟ್ ಸ್ಥಳಾಂತರಕ್ಕೆ ಆಗ್ರಹ ಬಾರ್ ಅಂಡ್ ರೆಸ್ಟೊರೆಂಟ್ ಸ್ಥಳಾಂತರಕ್ಕೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಚನಾಳ ಗ್ರಾಮದಲ್ಲಿ ಕಳೆದ ಎಂಟು ದಿನಗಳಿಂದ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಚನಾಳ ಗ್ರಾಮದ ಬಳಿಯ ಕಿಂಗ್ಸ್ ಬಾರ್ ಸ್ಥಳಾಂತರಕ್ಕೆ ಒತ್ತಾಯಿಸಿ ಮಹಿಳೆಯರು ಬಾರ್ ಎದುರಿಗೆ ಅಡುಗೆ ಮಾಡಿ, ಉಪಹಾರ ಸೇವಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬಾರ್ನಿಂದ ಗ್ರಾಮದ ಯುವಕರು ಹಾಳಾಗುತ್ತಿದ್ದಾರೆ. ಮನೆಯಲ್ಲಿ ನಿತ್ಯವೂ ಜಗಳ ಶುರುವಾಗಿದೆ. ಮನೆಯಲ್ಲಿನ ವಸ್ತುಗಳನ್ನು ಕುಡಿಯುವುದಕ್ಕಾಗಿಯೇ ಮಾರಾಟ ಮಾಡುತ್ತಿದ್ದಾರೆ. ನಮ್ಮ ಸಂಸಾರ ಬೀದಿಗೆ ಬರುತ್ತಿದೆ. ಹೀಗಾಗಿ ಬಾರ್ ಸ್ಥಳಾಂತರ ಮಾಡಿ. ಬಾರ್ ಸ್ಥಳಾಂತರ ಮಾಡುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾನೀರತ ಮಹಿಳೆಯರು ತಿಳಿಸಿದ್ದಾರೆ.
ಇದನ್ನೂ ಓದಿ: ನೂತನ ಶಿಕ್ಷಣ ಪದ್ಧತಿಯಲ್ಲಿ ಮೌಢ್ಯತೆ ತುಂಬಿದೆ, ವರ್ಣಾಶ್ರಮ ಮತ್ತೆ ಬರಲಿದೆ; ಮಂಗಳೂರು ವಿವಿ ಬಳಿ ಸಿಎಫ್ಐ ಪ್ರತಿಭಟನೆ
ಬಾಗಲಕೋಟೆ: ಬಾರ್ ಅಂಡ್ ರೆಸ್ಟೊರೆಂಟ್ ಸ್ಥಳಾಂತರಕ್ಕೆ ಆಗ್ರಹ; ಎಂಟನೇ ದಿನಕ್ಕೆ ಕಾಲಿಟ್ಟ ಮಹಿಳೆಯರ ಪ್ರತಿಭಟನೆ
Published On - 11:17 am, Tue, 31 August 21