ಪೆಟ್ರೋಲ್ ದಾಳಿ: ಸುಟ್ಟ ಗಾಯಗಳಿಂದ ಬಳಲುತ್ತಿದ್ದ ವ್ಯಕ್ತಿ ಸಾವು
ಆನೇಕಲ್: ಪೆಟ್ರೋಲ್ ದಾಳಿಯಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೆನ್ನಾಗರ ಗ್ರಾಮದ ನಿವಾಸಿ ಜ್ಯೋತಪ್ಪ ಮೃತ ವ್ಯಕ್ತಿ. ಆನೇಕಲ್ ಹೆನ್ನಾಗರ ಗ್ರಾಮದ ರೇಣುಕಾ ಯಲ್ಲಮ್ಮ ದೇವಿ ದೇವಾಲಯದ ಬಳಿ ತಡರಾತ್ರಿ ಘಟನೆ ನಡೆದಿದೆ. ಬೈಕ್ನಲ್ಲಿ ಜ್ಯೋತಪ್ಪ ಮನೆಗೆ ಬರುವ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಬೈಕ್ಗೂ ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಜ್ಯೋತಪ್ಪನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. […]
ಆನೇಕಲ್: ಪೆಟ್ರೋಲ್ ದಾಳಿಯಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೆನ್ನಾಗರ ಗ್ರಾಮದ ನಿವಾಸಿ ಜ್ಯೋತಪ್ಪ ಮೃತ ವ್ಯಕ್ತಿ.
ಆನೇಕಲ್ ಹೆನ್ನಾಗರ ಗ್ರಾಮದ ರೇಣುಕಾ ಯಲ್ಲಮ್ಮ ದೇವಿ ದೇವಾಲಯದ ಬಳಿ ತಡರಾತ್ರಿ ಘಟನೆ ನಡೆದಿದೆ. ಬೈಕ್ನಲ್ಲಿ ಜ್ಯೋತಪ್ಪ ಮನೆಗೆ ಬರುವ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಬೈಕ್ಗೂ ಬೆಂಕಿ ಹಚ್ಚಿ ಪರಾರಿಯಾಗಿದ್ದರು.
ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಜ್ಯೋತಪ್ಪನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
Published On - 10:05 am, Sat, 4 January 20