AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್​​ನಲ್ಲಿ ಪ್ರಧಾನಿ ಮೋದಿಯಿಂದ ಕೆಂಪೇಗೌಡ ಏರ್​ಪೋರ್ಟ್​​​ನಲ್ಲಿ ಕೆಂಪೇಗೌಡರ ಪ್ರತಿಮೆ ಉದ್ಘಾಟನೆ, ರಾಜ್ಯಾದ್ಯಂತ ಕೆಂಪೇಗೌಡರ ಪ್ರತಿಮೆ ಅಭಿಯಾನ

ಥೀಮ್ ಪಾರ್ಕ್ ನಿರ್ಮಾಣಕ್ಕೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಿಎಂ ಬೊಮ್ಮಾಯಿ ಸೇರಿ ಸಚಿವರಿಂದ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಥೀಮ್ ಪಾರ್ಕ್​ಗೆ ಪ್ರತಿ ಹಳ್ಳಿಯಿಂದ ಮಣ್ಣು ಮತ್ತು ನೀರು ಸಂಗ್ರಹವಾಗಲಿದೆ.

Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 31, 2022 | 7:05 PM

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​​​ನಲ್ಲಿ ಕೆಂಪೇಗೌಡರ ಪ್ರತಿಮೆ (Kempegowda statue) ನಿರ್ಮಾಣವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನವೆಂಬರ್​​ನಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಕೆಂಪೇಗೌಡರ ಪ್ರತಿಮೆ ಮುಂಭಾಗ ಥೀಮ್ ಪಾರ್ಕ್ ಸಹ ನಿರ್ಮಾಣವಾಗಲಿದೆ. ವಿಮಾನ ನಿಲ್ದಾಣ ಪ್ರವೇಶ ದ್ವಾರದ ಬಳಿ 64 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿದೆ. 98 ಕೆಜಿ ಕಂಚು, 120 ಕೆಜಿ ಸ್ಟೀಲ್ ಬಳಸಿ ನಿರ್ಮಿಸಿರುವ ಪ್ರತಿಮೆ ಇದಾಗಿದೆ.

ರಾಜ್ಯಾದ್ಯಂತ 45 ದಿನ ಕೆಂಪೇಗೌಡರ ಪ್ರತಿಮೆ ಅಭಿಯಾನಕ್ಕೆ ಸಿದ್ಧತೆ

ಇದೇ ವೇಳೆ, ರಾಜ್ಯಾದ್ಯಂತ ಕೆಂಪೇಗೌಡರ ಪ್ರತಿಮೆ ಅಭಿಯಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ 45 ದಿನಗಳ ಕಾಲ ಪ್ರತಿಮೆ ಉದ್ಘಾಟನಾ ಅಭಿಯಾನ ನಡೆಯಲಿದೆ. ಕಂಚಿನ ಪ್ರತಿಮೆ ಸ್ಥಾಪನೆ ಮತ್ತು ಥೀಮ್ ಪಾರ್ಕ್ ಉದ್ಘಾಟನಾ ಅಭಿಯಾನ ಇದಾಗಿದೆ.

ಥೀಮ್ ಪಾರ್ಕ್ ನಿರ್ಮಾಣಕ್ಕೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಿಎಂ ಬೊಮ್ಮಾಯಿ ಸೇರಿ ಸಚಿವರಿಂದ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಥೀಮ್ ಪಾರ್ಕ್​ಗೆ ಪ್ರತಿ ಹಳ್ಳಿಯಿಂದ ಮಣ್ಣು ಮತ್ತು ನೀರು ಸಂಗ್ರಹವಾಗಲಿದೆ.

ಏರ್ಪೋಟ್ ನಲ್ಲಿ ತಲೆ ಎತ್ತಿದೆ 108 ಅಡಿಯ ಬೃಹತ್ ಕೆಂಪೇಗೌಡ ಪ್ರತಿಮೆ:

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಿರೂ 64 ಕೋಟಿ ರೂ ವೆಚ್ಚದ 108 ಅಡಿಯ ಬೃಹತ್ ಕಂಚಿನ ಪ್ರತಿಮೆ ಅನಾವರಣವಾಗಲಿದೆ. ಹಾಗಾಗಿ ರಾಜ್ಯಾದ್ಯಂತ ನಡೆಯಲಿರುವ ಉದ್ಘಾಟನಾ ಅಭಿಯಾನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ನಾಳೆ ಬೆಳಗ್ಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೃಹತ್ ಎಲ್ಈಡಿ ಸ್ಕ್ರೀನ್ಗಳು ವಾಹನ ಸೇರಿದಂತೆ ಪ್ರತಿಮೆ ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಲಿದ್ದು ಸಿಎಂ ಗೆ ಸಚಿವರಾದ ಅಶ್ವಥ್ ನಾರಾಯಣ್, ಸುಧಾಕರ್ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ.

ಇನ್ನು ಪ್ರತಿಮೆಯ ಮುಂಭಾಗದಲ್ಲಿ 3 ಎಕರೆ ಜಾಗದಲ್ಲಿ 20 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ಸಹ ತಲೆ ಎತ್ತಲಿದ್ದು ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ ಆಡಳಿತದ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯವನ್ನು ಸರ್ಕಾರ ಮಾಡಲಿದೆ.

ಕೆಂಪೇಗೌಡ ಥೀಮ್ ಪಾರ್ಕ್‌ಗೆ ಎಲ್ಲ ಕೆರೆಕಟ್ಟೆಗಳ ಪವಿತ್ರ ಮಣ್ಣಿನ ಸಂಗ್ರಹ – 45 ದಿನಗಳ 31 ಜಿಲ್ಲೆಗಳಲ್ಲೂ ಎಲ್‌ಇಡಿ ವಾಹನಗಳ ಯಾತ್ರೆ:

ದೇವನಹಳ್ಳಿ: ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ನೆನಪನ್ನು ಅಜರಾಮರಗೊಳಿಸಲು ಮತ್ತು ಇದಕ್ಕಾಗಿ ಇಡೀ ನಾಡಿನ ಜನತೆಯನ್ನು ಏಕತೆಯ ಭಾವದಲ್ಲಿ ಒಗ್ಗೂಡಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ 45 ದಿನಗಳ ವಿಶಿಷ್ಟ ಅಭಿಯಾನವನ್ನು ಹಮ್ಮಿಕೊಂಡಿದೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನು ಒಂದೆರಡು ತಿಂಗಳಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿರುವ ಸರ್ಕಾರವು ಇದಕ್ಕೆ ಪೂರ್ವಭಾವಿಯಾಗಿ ‘ಉದ್ಘಾಟನಾ ಅಭಿಯಾನ’ವನ್ನು ನಡೆಸಲಿದೆ. ಸೆಪ್ಟೆಂಬರ್ 1ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ ಹಸಿರು ನಿಶಾನೆ ಕಾಣಲಿರುವ ಅಭಿಯಾನವು ರಾಜ್ಯದ 31 ಜಿಲ್ಲೆಗಳಲ್ಲೂ ನಡೆಯಲಿದೆ.

ರಾಜ್ಯ ಸರಕಾರವು ಪ್ರಧಾನಿ ನರೇಂದ್ರ ಮೋದಿಯವರ ‘ಸಬ್‌ ಕಾ ಸಾಥ್‌, ಸಬ್‌ ಕಾ ವಿಶ್ವಾಸ್’ ಮಂತ್ರಘೋಷಕ್ಕೆ ತಕ್ಕಂತೆ ಎಲ್ಲ ಜನ ಸಮುದಾಯಗಳನ್ನೂ ಒಳಗೊಂಡು ನವಕರ್ನಾಟಕವನ್ನು ಕಟ್ಟಲು ಸಂಕಲ್ಪ ಮಾಡಿದೆ. ಇದಕ್ಕೆ ಪೂರಕವಾಗಿ ಅದು ‘ನಾಡ ಕಟ್ಟೋಣ ಬನ್ನಿ’ ಎನ್ನುವ ಘೋಷವಾಕ್ಯವನ್ನು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರೂಪಿಸಿದೆ.

ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಲು ಕೆಂಪೇಗೌಡರೇ ಮೂಲಕಾರಣ. ಹೀಗಾಗಿ ಅವರ ಪ್ರತಿಮೆಯ ಉದ್ಘಾಟನೆಯಲ್ಲಿ ಇಡೀ ರಾಜ್ಯದ ಜನರು ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಪಾಲ್ಗೊಳ್ಳಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಈ ಕನಸಿನೊಂದಿಗೆ ರೂಪು ಪಡೆದಿರುವ ಅಭಿಯಾನದ ಅಡಿಯಲ್ಲಿ ಎಲ್ಲ ಜಿಲ್ಲೆಗಳ ಪ್ರತಿ ಹಳ್ಳಿಯ ಪವಿತ್ರ ಮೃತ್ತಿಕೆ (ಮಣ್ಣು)ಯನ್ನು ಆಯಾಯಾ ಊರುಗಳಲ್ಲಿರುವ ಕೆರೆಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಕೊಳ, ಚಿಲುಮೆ ಮತ್ತು ಝರಿಗಳಿಂದ ಸಂಗ್ರಹಿಸಲು ಯೋಜನೆ ರೂಪಿಸಲಾಗುತ್ತಿದೆ. ಜತೆಗೆ ನಾಡಿನ ಉದ್ದಗಲಕ್ಕೂ ಇರುವ ಅನುಕರಣೀಯ ಸಾಧಕರ ಮನೆಗಳಿಂದಲೂ ಪವಿತ್ರ ಮಣ್ಣನ್ನು ಸಂಗ್ರಹಿಸಲಾಗುತ್ತದೆ.

ಇದಕ್ಕೆ ಮುಖ್ಯಮಂತ್ರಿ ಕೂಡ ಒಪ್ಪಿಗೆ ಸೂಚಿಸಿದ್ದು ಅದನ್ನು ಯಾವ ರೀತಿ ಅನುಷ್ಠಾನ ಮಾಡಬೇಕು ಎನ್ನುವುದರ ಬಗ್ಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದು, ಗುರುವಾರದಂದೇ ಕಾರ್ಯ ಯೋಜನೆ ಹೊರಬೀಳುತ್ತದೆ.

ಇದಕ್ಕಾಗಿ ಬೃಹತ್ ಎಲ್‌ಇಡಿ ಪರದೆಯನ್ನು ಅಳವಡಿಸಿರುವ ತಲಾ ಒಂದು ವಾಹನವನ್ನು ಪ್ರತಿ ಜಿಲ್ಲೆಗೂ ನಿಯೋಜಿಸಲಾಗುವುದು. ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮತ್ತು ಈ ಪರಿಕಲ್ಪನೆಯ ರೂವಾರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ನಾಡಿನ ಪ್ರಮುಖ ಸ್ವಾಮೀಜಿಗಳ ಸಂದೇಶಗಳು ಬಿತ್ತರವಾಗಲಿವೆ. ಜೊತೆಗೆ, ಕೆಂಪೇಗೌಡರಿಗೆ ಸಂಬಂಧಿಸಿದ ಸಾಕ್ಷ್ಯಚಿತ್ರವೂ ಪ್ರಸಾರವಾಗಲಿದ್ದು, ಜನರನ್ನು ಆಕರ್ಷಿಸಲಿದೆ ಎಂದು ತಿಳಿದುಬಂದಿದೆ. ಇದಲ್ಲದೆ ಎಲ್ಲ ಜಿಲ್ಲೆಗಳಲ್ಲೂ ಇರುವ ಮಠ ಮಾನ್ಯಗಳ ಶ್ರೀಗಳು, ದೇವಸ್ಥಾನಗಳು, ಸ್ವಾತಂತ್ರ ಹೋರಾಟಗಾರರು, ತಾರಾ ವರ್ಚಸ್ಸಿನ ಸಾಧಕರನ್ನು ಕೂಡ ಒಳಗೊಳ್ಳಲು ರಾಜ್ಯ ಬಿಜೆಪಿ ಸರಕಾರವು ತೀರ್ಮಾನಿಸಿದೆ.

ರಾಜ್ಯ ಬಿಜೆಪಿ ಸರಕಾರವು ಮಾಡಿರುವ ಅಂದಾಜಿನ ಪ್ರಕಾರ, ಎಲ್ಲ ಹಳ್ಳಿಗಳಲ್ಲಿ ನಡೆಯಲಿರುವ ‘ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನ’ವು ಗಿನ್ನಿಸ್ ದಾಖಲೆಯಾಗಲಿದೆ. ಇಲ್ಲದಿದ್ದರೆ ಈ ಅಭಿಯಾನ ನಡೆಯುವ ಒಂದೂವರೆ ತಿಂಗಳುದ್ದಕ್ಕೂ ರಾಜ್ಯದ 10 ಸಾವಿರ ದೇಗುಲಗಳಲ್ಲಿ ನಂದಾದೀಪಗಳು ಪ್ರಜ್ವಲಿಸಲಿದ್ದು, ಇದೂ ಗಿನ್ನಿಸ್ ದಾಖಲೆಯಾಗುವುದು ನಿಚ್ಚಳವಾಗಿದೆ. ಅಭಿಯಾನದ ಬಗ್ಗೆ ಭಾರೀ ಉತ್ಸಾಹದಿಂದಿರುವ ರಾಜ್ಯ ಸರಕಾರವು, ಆರಂಭದ ದಿನವಾದ ಸೆ.1ರ ಗುರುವಾರ ದೇವನಹಳ್ಳಿಯ ವಿಮಾನ ನಿಲ್ದಾಣದ ಬಳಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಕ್ಕೆ ಹೆಚ್ಚು ಜನರನ್ನು ಒಗ್ಗೂಡಿಸುವ ಒಲವಿನಲ್ಲಿದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.

ಈ ಅಭಿಯಾನವನ್ನು ಯಶಸ್ವಿಯಾಗಿ ನಡೆಸುವ ವಿಶ್ವಾಸ ರಾಜ್ಯ ಸರಕಾರದ್ದಾಗಿದೆ. ಇದಾದ ಬಳಿಕ, ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿ, ವಿಮಾನ ನಿಲ್ದಾಣದ ಸಮುಚ್ಚಯದಲ್ಲಿ ತಲೆ ಎತ್ತಿರುವ ಕೆಂಪೇಗೌಡರ ಭವ್ಯವಾದ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸುವುದು ಅದರ ಸದುದ್ದೇಶವಾಗಿದೆ.

ಕೆಂಪೇಗೌಡರದ್ದು ಪ್ರಗತಿ ಪ್ರತಿಮೆ: ಅಮೆರಿಕದ ಸ್ವಾತಂತ್ರ ಪ್ರತಿಮೆ, ಗುಜರಾತಿನ ಏಕತಾ ಪ್ರತಿಮೆಗಳ ಸಾಲಿಗೆ 108 ಅಡಿಯ ಕೆಂಪೇಗೌಡರ ಪ್ರತಿಮೆ ಕೂಡ ಸೇರಲಿದ್ದು ಅದಕ್ಕೆ ‘ಪ್ರಗತಿ ಪ್ರತಿಮೆ’ (statue of prosperity) ಎಂದು ನಾಮಕರಣ ಮಾಡುವ ಬಗ್ಗೆ ಚಿಂತನೆ ನಡೆದಿದೆ.

Published On - 4:58 pm, Wed, 31 August 22

ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ