ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಪೋಲಿಸ್ ಹೆಡ್ ಕಾನ್‌ಸ್ಟೇಬಲ್ ಸ್ಥಳದಲ್ಲೇ ಸಾವು!
ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾగి ಪೋಲಿಸ್ ಹೆಡ್ ಕಾನ್‌ಸ್ಟೇಬಲ್ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು- ಹಾಸನ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಕರ್ತವ್ಯ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರು (ಅಕ್ಟೋಬರ್.06): ಎರಡು ಬೈಕ್‌ಗಳ (Buke) ನಡುವೆ ಮುಖಾಮುಖಿ ಡಿಕ್ಕಿಯಾగి (Accident) ಪೋಲಿಸ್ ಹೆಡ್ ಕಾನ್‌ಸ್ಟೇಬಲ್ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರು- ಹಾಸನ ಹೆದ್ದಾರಿಯ ಸೋಲೂರು ಗ್ರಾಮದ ಬಳಿ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಕಮಲನಗರದಲ್ಲಿ ವಾಸವಾಗಿದ್ದ ಶ್ರೀನಿವಾಸ್ (45) ಮೃತ ಪೋಲಿಸ್ ಹೆಡ್ ಕಾನ್‌ಸ್ಟೇಬಲ್. ಸೋಲೂರು ಮೂಲದ ಮೃತ ಪೋಲಿಸ್ ಹೆಡ್ ಕಾನ್‌ಸ್ಟೇಬಲ್ ಬೆಂಗಳೂರಿನ ಉಪ್ಪಾರಪೇಟೆ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಡ್ಯೂಟಿ ಮುಗಿಸಿ ಬೈಕ್ನಲ್ಲಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹೆಡ್ ಕಾನ್‌ಸ್ಟೇಬಲ್ ಶ್ರೀನಿವಾಸ್ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಇನ್ನು ಮತ್ತೊಂದು ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದ್ರೆ, ಆ ಬೈಕ್ ಸವಾರ ಘಟನೆ ನಡೆದ ಸ್ಥಳದಲ್ಲೇ ಬೈಕ್ ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ಕುದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೃತದೇಹವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆಗೆ ಉಪ್ಪಾರಪೇಟೆ ಸಂಚಾರಿ ಎಸಿಪಿ ಪುಟ್ಟಮ್ಮ ಭೇಟಿ ನೀಡಿದ್ದು, ಶ್ರೀನಿವಾಸ್ ಮೃತ ದೇಹವನ್ನು ಪರಿಶೀಲಿಸಿ ಬಳಿಕ ಮರಣೋತ್ತರ ಪರೀಕ್ಷೆಗೆ ಅನುಮತಿ ನೀಡಿದರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ