ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ: ಸಚಿವ ಸುಧಾಕರ್​ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ರೈತರ ಯತ್ನ

ಕೆಐಎಡಿಬಿಗೆ ರೈತರ ಭೂಸ್ವಾಧೀನ ವಿರೋಧಿಸಿ ರಾಮನಗರ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಕಳೆದ 134 ದಿನಗಳಿಂದ ಧರಣಿ ಮಾಡಲಾಗುತ್ತಿದೆ. ಸರ್ಕಾರ ಸ್ಪಂದಿಸದ ಹಿನ್ನೆಲೆ ಸಚಿವರಿಗೆ ಮುತ್ತಿಗೆಗೆ ಯತ್ನಿಸಲಾಗಿದೆ.

ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ: ಸಚಿವ ಸುಧಾಕರ್​ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ರೈತರ ಯತ್ನ
ಕೆಐಎಡಿಬಿಗೆ ರೈತರ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 15, 2022 | 1:42 PM

ದೇವನಹಳ್ಳಿ: ಕೆಐಎಡಿಬಿಗೆ (KIADB) ರೈತರ ಭೂಸ್ವಾಧೀನ ವಿರೋಧಿಸಿ ಸಚಿವ ಸುಧಾಕರ್​ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಬಳಿ ನಡೆದಿದೆ. 75 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಸಚಿವ ಡಾ.ಕೆ.ಸುಧಾಕರ್ ಭಾಷಣದ ವೇಳೆ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ರೈತರಿಂದ ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ರೈತರನ್ನ ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಲಾಯಿತು. ಲಾಠಿ ಬೀಸಿ ರೈತರನ್ನ ಪೊಲೀಸ್​ ಸಿಬ್ಬಂದಿ ವಶಕ್ಕೆ ಪಡೆದಿದ್ದು, ಕೆಲಕಾಲ ಮೈದಾನದ ಬಳಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಇದನ್ನೂ ಓದಿ: ಮಂಡ್ಯ ಜಿಲ್ಲಾಡಳಿತದ ಮಹಾ ಎಡವಟ್ಟು: ಶಾಲಾ ಮಕ್ಕಳಿಗೆ ಗದರಿದ ಮಂಡ್ಯ ಎಸ್​ಪಿ

ಪ್ರತಿಭಟನೆ ಮಾಡಿದ ರೈತರ ವಿರುದ್ದ ಗರಂ ಆದ ಸಚಿವ ಡಾ.ಕೆ.ಸುಧಾಕರ್

ರೈತರ ಮುತ್ತಿಗೆ ಯತ್ನ ವಿಚಾರಕ್ಕೆ ಸಚಿವ ಡಾ.ಕೆ ಸುಧಾಕರ್ ಹೇಳಿಕೆ ನೀಡಿದ್ದು, ರೈತರ ಜತೆ ಮಾತುಕತೆಯನ್ನ ಮಾಡಬೇಕು ಅಹವಾಲು ಕೇಳಬೇಕು. ಕೈಗಾರಿಕಾ ಇಲಾಖೆ ಸುತ್ತೋಲೆಗಳು ಏನು, ಯಾವ ಉದ್ದೇಶಕ್ಕೆ ಮಾಡಲಾಗುತ್ತಿದೆ. ಇವೆಲ್ಲಾ ಮಾಹಿತಿಯನ್ನ ನಾನು ತೆಗೆದುಕೊಂಡು ರೈತರ ಬಳಿ ಮಾತುಕತೆ ನಡೆಸುತ್ತೇನೆ. ಆದರೆ ಇವತ್ತು ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿ ರೈತರು ಈ ರೀತಿ ಮಾಡಿರೋದಕ್ಕೆ ನಾನು ಖೇದವನ್ನ ವ್ಯಕ್ತಪಡಿಸುತ್ತೇನೆ. ನಮ್ಮ ಪೂರ್ವಿಕರು ರಕ್ತವನ್ನ ಹರಿಸಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಇಂತಹ ಸಂಭ್ರಮದಲ್ಲಿ ಕೆಲವರು ರೈತರ ಹೆಸರೇಳಿಕೊಂಡು ಅಗೌರವ ತೋರಿದ್ದಾರೆ. ರೈತ ಹೋರಾಟಗಾರರ ಹೆಸರಿನಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ಬಂದು ಈ ರೀತಿ ಮಾಡಿದ್ದಾರೆ ಖೇದವನ್ನ ವ್ಯಕ್ತಪಡಿಸುತ್ತೇನೆ.

ಇದು ಪುನರಾವರ್ತನೆ ಆಗಬಾರದು, ನಿಮಗೆ ಶೋಭೆ ತರುವಂತದಲ್ಲ ಅಂತಾ ಪ್ರತಿಭಟನೆ ಮಾಡಿದ ರೈತರ ವಿರುದ್ದ ಗರಂ ಆದರು. ಸ್ವಾತಂತ್ರ್ಯ ದಿನದಂದು ಪ್ರತಿಭಟನೆ ಮಾಡಿ ಅಗೌರವ ತೋರಿದ ರೈತರ ಬಗ್ಗೆ ಪೊಲೀಸರು ಕಾನೂನಾತ್ಮಕ ಕ್ರಮ ಕೈಗೋಳ್ತಾರೆ. ಈ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಅಧಿಕೃತವಾಗಿ ದೇವನಹಳ್ಳಿ ಜಿಲ್ಲಾ ಕೇಂದ್ರ ಘೋಷಣೆ

ಸ್ವಾತಂತ್ರ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ದೇವನಹಳ್ಳಿಯನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಲಾಯಿತು. ಒಂದು ತಿಂಗಳಲ್ಲಿ ಅಧಿಕೃತ ಆದೇಶ ಸರ್ಕಾರದಿಂದ ಪ್ರಕಟವಾಗುತ್ತೆ ಎಂದು ಬೆಂಗಳೂರು ಗ್ರಾಮಾಂತರಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ಮಾದ್ಯಮಗಳಿಗೆ ಹೇಳಿಕೆ ನೀಡಿದರು. ದೇವನಹಳ್ಳಿ ಜಿಲ್ಲಾ ಕೇಂದ್ರದ ಬಹುದಿನಗಳ ಬೇಡಿಕೆಗೆ ಸ್ವಾತಂತ್ರ್ಯ ಸಂಭ್ರಮದಲ್ಲಿ ಸರ್ಕಾರದಿಂದ ಗಿಪ್ಟ್ ನೀಡಲಾಗಿದೆ. ಜಿಲ್ಲಾ ಕೇಂದ್ರಕ್ಕಾಗಿ ದೇವನಹಳ್ಳಿ ದೊಡ್ಡಬಳ್ಳಾಪುರ ನಡುವೆ ಪೈಟ್ ಶುರುವಾಗಿತ್ತು, ಇದೀಗ ಜಿಲ್ಲಾ ಕೇಂದ್ರ ಘೋಷಣೆಯಿಂದ ಗೊಂದಲಕ್ಕೆ ತೆರೆ ಎಳೆಯಲಾಗಿದೆ.

ಕೆಐಎಡಿಬಿಗೆ ರೈತರ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ

ಕೆಐಎಡಿಬಿಗೆ ರೈತರ ಭೂಸ್ವಾಧೀನ ವಿರೋಧಿಸಿ ರಾಮನಗರ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಕಳೆದ 134 ದಿನಗಳಿಂದ ಧರಣಿ ಮಾಡಲಾಗುತ್ತಿದೆ. ಸರ್ಕಾರ ಸ್ಪಂದಿಸದ ಹಿನ್ನೆಲೆ ಸಚಿವರಿಗೆ ಮುತ್ತಿಗೆಗೆ ಯತ್ನಿಸಲಾಗಿದೆ. ಸಚಿವರ ಮುಂದೆ ಪ್ರತಿಭಟನೆ ನಡೆಸಲು  ರೈತರು ಬಂದಿದ್ದು, ರೈತ ಮುಖಂಡರನ್ನು ವಶಕ್ಕೆ ಪಡೆದ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಲಾಗಿದೆ.

ತ್ರಿವರ್ಣ ಧ್ವಜಗಳನ್ನು ಹಿಡಿದು ಮೈದಾನಕ್ಕೆ ನುಗ್ಗಲು ರೈತರು ಯತ್ನಿಸಿದ್ದು, ಪೊಲೀಸರು ಒಳಗಡೆ ಬಿಡದ ಹಿನ್ನೆಲೆ ಗೇಟ್ ಮುಂದೆ ಧರಣಿ ಮಾಡಿದರು. ನಂತರ  ಪ್ರತಿಭಟನಾನಿರತ ರೈತರನ್ನ ಪೊಲೀಸರು ಎಳೆದೊಯ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:07 pm, Mon, 15 August 22

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!