ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಪಿಯು ವಿದ್ಯಾರ್ಥಿ ಆತ್ಯಹತ್ಯೆ
ದೊಡ್ಡಬಳ್ಳಾಪುರ(Doddaballapura)ದ ತ್ಯಾಗರಾಜನಗರದ ಮನೆಯೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿ ಆತ್ಯಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ, ಜ.09: ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura)ದ ತ್ಯಾಗರಾಜನಗರದ ಮನೆಯೊಂದರಲ್ಲಿ ನಡೆದಿದೆ. ಜಾನ್ಸಿ(17) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ಯೂ. ನಾನು ಲೋಕ ಬಿಟ್ಟು ತೆರಳುತ್ತಿದ್ದೇನೆ, ಎಲ್ಲರೂ ಖುಷಿ ಖುಷಿಯಾಗಿರಿ ಎಂದು ಡೆತ್ ನೋಟ್ ಬರೆದಿಟ್ಟು, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯುತ್ ಕಂಬಕ್ಕೆ ಆ್ಯಂಬುಲೇನ್ಸ್ ಡಿಕ್ಕಿ; ಪ್ರಾಣಾಪಾಯದಿಂದ ಪಾರಾದ ಚಾಲಕ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಪಟ್ಟಣದ ದ ಬೈಚಾಪುರ ರಸ್ತೆಯಲ್ಲಿ ಚಲಿಸುತ್ತಿದ್ದ ಆ್ಯಂಬುಲೇನ್ಸ್ ಕಂಬಕ್ಕೆ ಡಿಕ್ಕಿಯಾಗಿ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಆ್ಯಂಬುಲೇನ್ಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ರೋಗಿಯನ್ನು ಪಿಕಪ್ ಮಾಡಲು ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಆ್ಯಂಬುಲೇನ್ಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಬಳಿಕ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಏರ್ಪೋಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಡೆತ್ ನೋಟ್ ಬರೆದಿಟ್ಟು ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ
ಚಾಲಕನ ನಿರ್ಲಕ್ಷ್ಯದಿಂದ ಬೊಲೆರೋ ವಾಹನ ಪಲ್ಟಿ, 25 ಜನರಿಗೆ ಗಾಯ
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಚ್ಚೋಳ್ಳಿ ಗ್ರಾಮದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಬೊಲೆರೋ ವಾಹನ ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಇಪ್ಪತೈದು ಜನರಿಗೆ ಗಾಯಗಳಾಗಿದ್ದು, ಈ ಪೈಕಿ ಐವರು ಮಹಿಳೆಯರ ಸ್ಥಿತಿ ಗಂಭೀರವಾಗಿದೆ. ಕೂಲಿ ಕೆಲಸಕ್ಕಾಗಿ ಬೊಲೆರೋದಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ. ಇನ್ನು ಈ ಘಟನೆ ಸಿರಗುಪ್ಪ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:51 pm, Tue, 9 January 24



