ಬೆಂಗಳೂರು: ಡೆತ್​​ ನೋಟ್​​​ ಬರೆದಿಟ್ಟು ಪಿಯು ವಿದ್ಯಾರ್ಥಿ ಆತ್ಯಹತ್ಯೆ

ದೊಡ್ಡಬಳ್ಳಾಪುರ(Doddaballapura)ದ ತ್ಯಾಗರಾಜನಗರದ ಮನೆಯೊಂದರಲ್ಲಿ ಡೆತ್​​ ನೋಟ್​​​ ಬರೆದಿಟ್ಟು ಪಿಯುಸಿ ವಿದ್ಯಾರ್ಥಿ ಆತ್ಯಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಡೆತ್​​ ನೋಟ್​​​ ಬರೆದಿಟ್ಟು ಪಿಯು ವಿದ್ಯಾರ್ಥಿ ಆತ್ಯಹತ್ಯೆ
ಮೃತ ವಿದ್ಯಾರ್ಥಿ
Updated By: ಕಿರಣ್ ಹನುಮಂತ್​ ಮಾದಾರ್

Updated on: Jan 09, 2024 | 2:56 PM

ಬೆಂಗಳೂರು ಗ್ರಾಮಾಂತರ, ಜ.09: ಡೆತ್​​ ನೋಟ್​​​ ಬರೆದಿಟ್ಟು ಪಿಯುಸಿ ವಿದ್ಯಾರ್ಥಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura)ದ ತ್ಯಾಗರಾಜನಗರದ ಮನೆಯೊಂದರಲ್ಲಿ ನಡೆದಿದೆ. ಜಾನ್ಸಿ(17) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್​​ಯೂ. ನಾನು‌ ಲೋಕ ಬಿಟ್ಟು ತೆರಳುತ್ತಿದ್ದೇನೆ, ಎಲ್ಲರೂ ಖುಷಿ ಖುಷಿಯಾಗಿರಿ ಎಂದು ಡೆತ್​​ ನೋಟ್​​​ ಬರೆದಿಟ್ಟು, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿದ್ಯುತ್ ಕಂಬಕ್ಕೆ ಆ್ಯಂಬುಲೇನ್ಸ್  ಡಿಕ್ಕಿ; ಪ್ರಾಣಾಪಾಯದಿಂದ ಪಾರಾದ ಚಾಲಕ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ಪಟ್ಟಣದ ದ ಬೈಚಾಪುರ ರಸ್ತೆಯಲ್ಲಿ ಚಲಿಸುತ್ತಿದ್ದ ಆ್ಯಂಬುಲೇನ್ಸ್ ಕಂಬಕ್ಕೆ ಡಿಕ್ಕಿಯಾಗಿ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಆ್ಯಂಬುಲೇನ್ಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ರೋಗಿಯನ್ನು ಪಿಕಪ್ ಮಾಡಲು ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.  ಆ್ಯಂಬುಲೇನ್ಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದ ಬಳಿಕ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಏರ್ಪೋಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಡೆತ್ ನೋಟ್ ಬರೆದಿಟ್ಟು ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ

ಚಾಲಕನ ನಿರ್ಲಕ್ಷ್ಯದಿಂದ ಬೊಲೆರೋ ವಾಹನ ಪಲ್ಟಿ, 25 ಜನರಿಗೆ ಗಾಯ

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಚ್ಚೋಳ್ಳಿ ಗ್ರಾಮದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಬೊಲೆರೋ ವಾಹನ ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಇಪ್ಪತೈದು ಜನರಿಗೆ ಗಾಯಗಳಾಗಿದ್ದು, ಈ ಪೈಕಿ ಐವರು ಮಹಿಳೆಯರ ಸ್ಥಿತಿ ಗಂಭೀರವಾಗಿದೆ. ಕೂಲಿ ಕೆಲಸಕ್ಕಾಗಿ ಬೊಲೆರೋದಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ. ಇನ್ನು ಈ ಘಟನೆ ಸಿರಗುಪ್ಪ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Tue, 9 January 24