ಬೆಂಗಳೂರು: ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ರದ್ದು; ಜೈಲಿನಿಂದ ಬಿಡುಗಡೆ
ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿತ್ತು. ಈ ಹಿನ್ನಲೆ ಆಗಸ್ಟ್ 12 ರಂದು ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದರು.
ಆನೇಕಲ್, ಸೆ.17: ಗೂಂಡಾ ಕಾಯ್ದೆ(Goond Act)ಯಡಿ ಪುನೀತ್ ಕೆರೆಹಳ್ಳಿ(Puneeth Kerehalli)ಯನ್ನು ಸಿಸಿಬಿ ಪೊಲೀಸರು ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಸೇರಿಸಲಾಗಿತ್ತು. ಬಳಿಕ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಸಲಹಾ ಸಮಿತಿಯನ್ನು ನೇಮಕ ಮಾಡಿತ್ತು. ಇದೀಗ ಪುನೀತ್ ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ವರದಿಯಲ್ಲಿ ಸಲಹಾ ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಪುನೀತ್ ಕೆರೆಹಳ್ಳಿಯನ್ನು ಬಂಧನದಿಂದ ಸರ್ಕಾರ ಮುಕ್ತಗೊಳಿಸಿದೆ.
ಘಟನೆ ವಿವರ
ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿತ್ತು. ಈ ಹಿನ್ನಲೆ ಆಗಸ್ಟ್ 12 ರಂದು ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದರು. ಸಮಾಜದಲ್ಲಿ ಶಾಂತಿ ಕದಡುವ ಯತ್ನ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಹಿನ್ನೆಲೆಯಲ್ಲಿ ಇತನ ಮೇಲಿಂದ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದರು.
ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳು
ಹೌದು, ಪುನೀತ್ ಕೆರೆಹಳ್ಳಿ ವಿರುದ್ಧ ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಸಾಯಿಸಿದ್ದರು ಎಂಬ ಪ್ರಕರಣ ಕೂಡ ದಾಖಲಾಗಿತ್ತು. ಬಳಿಕ ಇತನನ್ನು ಬಂಧಿಸಲಾಗಿತ್ತು. ಆಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಬಳಿಕ ಗೂಂಡಾ ಕಾಯ್ದೆಯಡಿ ಪರಪ್ಪನ ಆಗ್ರಹಾರಕ್ಕೆ ಹಾಕಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ